Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:6 - ಕನ್ನಡ ಸಮಕಾಲಿಕ ಅನುವಾದ

6 ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ, “ಬೇಗನೇ ಮೂರು ಸೇರು ನಯವಾದ ಹಿಟ್ಟು ನಾದಿ, ಒಲೆಯ ಮೇಲೆ ರೊಟ್ಟಿಗಳನ್ನು ಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ, “ಹಸನಾದ ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿ ಆಕೆಗೆ, “ಹಸನಾದ ಮೂರು ಸೇರು ಹಿಟ್ಟನ್ನು ನಾದಿ, ಬೇಗ ರೊಟ್ಟಿಗಳನ್ನು ಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ - ಹಸನಾದ ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಬ್ರಹಾಮನು ಗುಡಾರಕ್ಕೆ ಬೇಗನೆ ಹೋಗಿ ಸಾರಳಿಗೆ, “ಮೂರು ದೊಡ್ಡ ರೊಟ್ಟಿಗಳಿಗೆ ಬೇಕಾಗುವಷ್ಟು ಗೋಧಿ ಹಿಟ್ಟನ್ನು ಬೇಗನೆ ನಾದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:6
15 ತಿಳಿವುಗಳ ಹೋಲಿಕೆ  

ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದರು: “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀಯು ತೆಗೆದುಕೊಂಡು ಹುಳಿಯಿಲ್ಲದ ಸುಮಾರು ಇಪ್ಪತ್ತೇಳು ಕಿಲೋಗ್ರಾಂ ಹಿಟ್ಟಿನಲ್ಲಿ ಕಲಸಿದಾಗ ಆ ಹಿಟ್ಟೆಲ್ಲಾ ಹುಳಿಯಾಯಿತು.”


ಗೊಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.


ಪರಕೀಯರಿಗೆ ಸತ್ಕಾರ ಮಾಡುವುದನ್ನು ಅಲಕ್ಷ್ಯ ಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರ ಮೂಲಕ, ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ಪ್ರಿಯರೇ, ನೀವು ಸ್ವಾತಂತ್ರ್ಯಕ್ಕಾಗಿ ಕರೆಹೊಂದಿದವರು. ಆದರೆ ಆ ಸ್ವಾತಂತ್ರ್ಯವನ್ನು ಶಾರೀರಿಕ ಅನುಕೂಲಕ್ಕಾಗಿ ಉಪಯೋಗಿಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ದೀನರಾಗಿ ಸೇವೆಮಾಡಿರಿ.


ಕೊರತೆ ಇರುವ ದೇವಜನರೊಂದಿಗೆ ನಿಮಗೆ ಇರುವುದನ್ನು ಹಂಚಿಕೊಳ್ಳಿರಿ, ಅತಿಥಿ ಸತ್ಕಾರವನ್ನು ಮಾಡುತ್ತಾ ಇರಿ.


ಆಕೆಯೂ ಆಕೆಯ ಮನೆಯವರೂ ದೀಕ್ಷಾಸ್ನಾನ ಹೊಂದಿದಾಗ, “ನಾನು ಕರ್ತ ಯೇಸುವಿಗೆ ನಂಬಿಗಸ್ತಳೆಂದು ನೀವು ತೀರ್ಮಾನಿಸಿಕೊಂಡರೆ, ಬಂದು ನನ್ನ ಮನೆಯಲ್ಲಿ ತಂಗಿರಿ,” ಎಂದು ನಮ್ಮನ್ನು ಒತ್ತಾಯ ಮಾಡಿದಳು.


ಘನವಂತನಾದರೋ, ಘನಕಾರ್ಯಗಳನ್ನು ಕಲ್ಪಿಸುವನು. ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.


ನಾನು ಸ್ವಲ್ಪ ಆಹಾರವನ್ನು ತರುತ್ತೇನೆ. ತರುವಾಯ ನೀವು ಮುಂದೆ ಹೊರಟು ಹೋಗಬಹುದು. ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ,” ಎಂದು ಬೇಡಿಕೊಂಡನು. ಅದಕ್ಕೆ ಅವರು, “ನೀನು ಹೇಳಿದಂತೆಯೇ ಮಾಡು,” ಎಂದರು.


ಅಬ್ರಹಾಮನು ದನದ ಮಂದೆಯ ಬಳಿಗೆ ಓಡಿಹೋಗಿ, ಒಳ್ಳೆಯ ಕರುವನ್ನು ತೆಗೆದುಕೊಂಡು ಒಬ್ಬ ಸೇವಕನಿಗೆ ಕೊಟ್ಟನು. ಆ ಸೇವಕನು ಬೇಗನೆ ಅಡಿಗೆಯನ್ನು ಸಿದ್ಧಪಡಿಸಿದನು.


ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ, ಅವರು ತಿರುಗಿಬಂದು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣ ಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸಿದ್ಧಮಾಡಿದನು. ಅವರು ಊಟಮಾಡಿದರು.


ಆಗ ಗಿದ್ಯೋನನು ಒಳಗೆ ಹೋಗಿ, ಒಂದು ಮೇಕೆಯ ಮರಿಯನ್ನೂ, ಹದಿನಾರು ಕಿಲೋಗ್ರಾಂ ಹಿಟ್ಟಿನಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ಸಿದ್ಧಮಾಡಿ, ಮಾಂಸವನ್ನು ಪುಟ್ಟಿಯಲ್ಲಿ ಇಟ್ಟು, ರಸವನ್ನು ಪಾತ್ರೆಯಲ್ಲಿ ಹೊಯ್ದು, ಅದನ್ನು ಹೊರಗೆ ಏಲಾ ಮರದ ಕೆಳಗೆ ಇದ್ದ ಅವರ ಬಳಿಯಲ್ಲಿ ತಂದಿಟ್ಟನು.


ಆ ಸ್ತ್ರೀಯ ಮನೆಯಲ್ಲಿ ಒಂದು ಕೊಬ್ಬಿದ ಕರುವು ಇತ್ತು. ಅವಳು ಅದನ್ನು ತ್ವರೆಯಾಗಿ ಕೊಯ್ದು, ಹಿಟ್ಟನ್ನು ನಾದಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು,


ಅಮ್ನೋನನು ಅದೇ ಪ್ರಕಾರ ರೋಗಿಷ್ಟನ ಹಾಗೆ ಮಲಗಿಕೊಂಡನು. ಅರಸನು ತನ್ನನ್ನು ನೋಡುವುದಕ್ಕೆ ಬಂದಾಗ ಅಮ್ನೋನನು ಅರಸನಿಗೆ, “ನೀವು ನನ್ನ ಸಹೋದರಿ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣು ಮುಂದೆ ಎರಡು ಭಕ್ಷ್ಯಗಳನ್ನು ಮಾಡುವುದಕ್ಕೆ ಬರಲಿ,” ಎಂದನು.


ನಿಮ್ಮ ಆಜ್ಞೆಗಳನ್ನು ಪಾಲಿಸಲು ನಾನು ತಡಮಾಡದೆ ತ್ವರೆಪಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು