Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:9 - ಕನ್ನಡ ಸಮಕಾಲಿಕ ಅನುವಾದ

9 ಅವರು ಅಬ್ರಹಾಮನಿಗೆ, “ನಿನ್ನ ಹೆಂಡತಿ ಸಾರಳು ಎಲ್ಲಿ?” ಎಂದು ಕೇಳಲು, ಅವನು, “ಇಗೋ, ಡೇರೆಯಲ್ಲಿದ್ದಾಳೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬಳಿಕ ಅವರು ಅವನಿಗೆ, “ನಿನ್ನ ಪತ್ನಿಯಾದ ಸಾರಳು ಎಲ್ಲಿದ್ದಾಳೆ” ಎಂದು ಕೇಳಲು ಅವನು “ಅಗೋ, ಗುಡಾರದಲ್ಲಿದ್ದಾಳೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಬಳಿಕ, “ನಿನ್ನ ಹೆಂಡತಿ ಸಾರಳು ಎಲ್ಲಿ?” ಎಂದು ಆ ಅತಿಥಿಗಳು ವಿಚಾರಿಸಿದಾಗ, “ಅಲ್ಲಿ ಗುಡಾರದಲ್ಲಿದ್ದಾಳೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಬಳಿಕ ಅವರು ಅವನನ್ನು - ನಿನ್ನ ಪತ್ನಿಯಾದ ಸಾರಳು ಎಲ್ಲಿದ್ದಾಳೆ ಎಂದು ಕೇಳಲು ಅವನು - ಅಗೋ, ಗುಡಾರದಲ್ಲಿದ್ದಾಳೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ಪುರುಷರು ಅಬ್ರಹಾಮನಿಗೆ, “ನಿನ್ನ ಹೆಂಡತಿಯಾದ ಸಾರಳು ಎಲ್ಲಿ?” ಎಂದು ಕೇಳಿದರು. ಅಬ್ರಹಾಮನು ಅವರಿಗೆ, “ಆಕೆ ಗುಡಾರದಲ್ಲಿ ಇದ್ದಾಳೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:9
8 ತಿಳಿವುಗಳ ಹೋಲಿಕೆ  

ಸ್ವಶಿಸ್ತನ್ನು ಹೊಂದಿದವರೂ ಪತಿವ್ರತೆಯರೂ ಮನೆಯಲ್ಲಿ ಕೆಲಸ ಮಾಡುವವರೂ ದಯೆವುಳ್ಳವರೂ ತಮ್ಮ ಗಂಡಂದಿರಿಗೆ ಅಧೀನರೂ ಆಗಿರಬೇಕೆಂದು ವೃದ್ಧಸ್ತ್ರೀಯರಿಂದ ಕಲಿತುಕೊಳ್ಳಿರಿ.


ಇಸಾಕನು ಆಕೆಯನ್ನು ತನ್ನ ತಾಯಿಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಅವನು ರೆಬೆಕ್ಕಳನ್ನು ಸ್ವೀಕರಿಸಿದನು. ಆಕೆಯು ಅವನ ಹೆಂಡತಿಯಾದಳು, ಅವನು ಆಕೆಯನ್ನು ಪ್ರೀತಿಸಿದನು. ಹೀಗೆ ಇಸಾಕನು ತನ್ನ ತಾಯಿಯ ಮರಣದ ದುಃಖ ಶಮನ ಮಾಡಿಕೊಂಡನು.


ಆಗ ಲಾಬಾನನು ಯಾಕೋಬನ ಗುಡಾರದಲ್ಲಿಯೂ, ಲೇಯಳ ಗುಡಾರದಲ್ಲಿಯೂ, ಆ ಇಬ್ಬರು ದಾಸಿಯರ ಗುಡಾರಗಳಲ್ಲಿಯೂ ಹೋಗಿ ಹುಡುಕಿದರೂ, ಅವುಗಳನ್ನು ಕಾಣಲಿಲ್ಲ. ಲೇಯಳ ಗುಡಾರದಿಂದ ಹೊರಟು ರಾಹೇಲಳ ಗುಡಾರದೊಳಗೆ ಹೋದನು.


ಯೆಹೋವ ದೇವರು ಕಾಯಿನನನ್ನು, “ನಿನ್ನ ತಮ್ಮ ಹೇಬೆಲನು ಎಲ್ಲಿ?” ಎಂದು ಕೇಳಲು, ಅವನು, “ನಾನರಿಯೆ. ನಾನು ನನ್ನ ತಮ್ಮನನ್ನು ಕಾಯುವವನೋ?” ಎಂದು ಉತ್ತರಕೊಟ್ಟನು.


ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗಲೂ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರು ಸಹ ಗುಡಾರಗಳಲ್ಲಿ ವಾಸಿಸಿದರು.


ಆಗ ಯೆಹೋವ ದೇವರು ಮನುಷ್ಯನನ್ನು ಕರೆದು ಅವನಿಗೆ, “ನೀನು ಎಲ್ಲಿದ್ದೀ?” ಎಂದರು.


ತರುವಾಯ ಮೊಸರನ್ನೂ, ಹಾಲನ್ನೂ, ಪಕ್ವಮಾಡಿದ ಮಾಂಸವನ್ನೂ ತೆಗೆದುಕೊಂಡು ಅವರ ಮುಂದೆ ಇಟ್ಟನು. ಅವನಾದರೋ ಮರದ ಕೆಳಗೆ ಅವರ ಹತ್ತರ ನಿಂತುಕೊಂಡನು. ಅವರು ಊಟಮಾಡಿದರು.


ಆಗ ಆ ಮೂವರಲ್ಲಿ ಒಬ್ಬರು, “ಬರುವ ವರ್ಷ ಇದೇ ಸಮಯದಲ್ಲಿ ನಾನು ನಿಶ್ಚಯವಾಗಿ ತಿರುಗಿ ನಿನ್ನ ಬಳಿಗೆ ಬರುವೆನು. ಆಗ ನಿನ್ನ ಹೆಂಡತಿ ಸಾರಳಿಗೆ ಒಬ್ಬ ಮಗನಿರುವನು,” ಎಂದನು. ಸಾರಳು ಅವರ ಹಿಂದೆ ಇದ್ದ ಡೇರೆಯ ಬಾಗಿಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು