Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:14 - ಕನ್ನಡ ಸಮಕಾಲಿಕ ಅನುವಾದ

14 ಆಗ ಲೋಟನು ಹೊರಟುಹೋಗಿ, ತನ್ನ ಪುತ್ರಿಯರನ್ನು ಗೊತ್ತುಮಾಡಿದ್ದ ಅಳಿಯಂದಿರ ಸಂಗಡ ಮಾತನಾಡಿ, “ಎದ್ದು ಈ ಸ್ಥಳದಿಂದ ಹೊರಡಿರಿ. ಏಕೆಂದರೆ ಯೆಹೋವ ದೇವರು ಈ ಪಟ್ಟಣವನ್ನು ನಾಶಮಾಡುವುದಕ್ಕಿದ್ದಾರೆ,” ಎಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಪರಿಹಾಸ್ಯಮಾಡುವಂತೆ ಕಾಣಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳನ್ನು ಗೊತ್ತುಮಾಡಿಕೊಂಡಿದ್ದ ಅಳಿಯಂದಿರಿಗೆ ಈ ಸಂಗತಿಯನ್ನು ತಿಳಿಸಿ, “ನೀವೆದ್ದು, ಈ ಸ್ಥಳವನ್ನು ಬಿಟ್ಟು ಹೋಗಿರಿ ಯೆಹೋವನು ಈ ಊರನ್ನು ನಾಶಮಾಡುತ್ತಾನೆ” ಎಂದು ಹೇಳಿದನು. ಆದರೆ ಅವರು ಲೋಟನು ಅಪಹಾಸ್ಯ ಮಾಡುತ್ತಿದ್ದಾನೆ ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳಿಗೆ ಗೊತ್ತುಮಾಡಿದ್ದ ಅಳಿಯಂದಿರಿಗೆ ಸಂಗತಿಯನ್ನು ಹೇಳಿ, “ನೀವೆದ್ದು ಈ ಸ್ಥಳವನ್ನು ಬಿಟ್ಟ ಹೊರಡಿರಿ; ಈ ಊರನ್ನು ಸರ್ವೇಶ್ವರ ಸ್ವಾಮಿ ನಾಶ ಮಾಡಲಿದ್ದಾರೆ” ಎಂದು ಹೇಳಿದನು. ಆ ಅಳಿಯಂದಿರಿಗೆ ಇದೊಂದು ಪರಿಹಾಸ್ಯವಾಗಿ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣು ಮಕ್ಕಳನ್ನು ಗೊತ್ತುಮಾಡಿಕೊಂಡಿದ್ದ ಅಳಿಯಂದಿರಿಗೆ ಈ ಸಂಗತಿಯನ್ನು ತಿಳಿಸಿ - ನೀವೆದ್ದು ಈ ಸ್ಥಳವನ್ನು ಬಿಟ್ಟು ಹೋಗಿರಿ, ಯೆಹೋವನು ಈ ಊರನ್ನು ನಾಶಮಾಡುತ್ತಾನೆ ಎಂದು ಹೇಳಿದನು. ಆದರೆ ಅವನು ಅವರಿಗೆ ಗೇಲಿಮಾಡುವವನಾಗಿ ಕಾಣಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ ಲೋಟನು ಹೊರಗೆ ಹೋಗಿ, ತನ್ನ ಹೆಣ್ಣುಮಕ್ಕಳೊಡನೆ ನಿಶ್ಚಿತಾರ್ಥವಾಗಿದ್ದ ಅಳಿಯಂದಿರೊಡನೆ ಮಾತಾಡಿ, “ಬೇಗನೆ ಈ ಪಟ್ಟಣವನ್ನು ಬಿಟ್ಟು ಹೊರಡಿರಿ; ಯೆಹೋವನು ಈ ಪಟ್ಟಣವನ್ನು ನಾಶಮಾಡುವನು” ಎಂದು ಹೇಳಿದನು. ಲೋಟನ ಈ ಮಾತು ಅವರಿಗೆ ತಮಾಷೆಯಂತೆ ಕಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:14
26 ತಿಳಿವುಗಳ ಹೋಲಿಕೆ  

“ಈ ಜನರ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ,” ಎಂದರು.


“ನೀನು ಈ ಜನರ ಮಧ್ಯದಿಂದ ಎದ್ದು ಬಾ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ,” ಎಂದರು. ಆಗ ಅವರಿಬ್ಬರು ಬೋರಲು ಬಿದ್ದರು.


“ಬಾಬಿಲೋನಿನೊಳಗಿಂದ ಓಡಿಹೋಗಿರಿ; ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಪಾಪದಲ್ಲಿ ನಾಶವಾಗಬೇಡಿರಿ; ಏಕೆಂದರೆ ಇದು ಯೆಹೋವ ದೇವರ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆ ಮುಯ್ಯಿ ಕೊಡುತ್ತಾನೆ.


ಅವನು ಸಮೂಹದವರಿಗೆ, “ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿಹೋಗಿರಿ. ನೀವು ಅವರ ಎಲ್ಲಾ ಪಾಪಗಳ ದೆಸೆಯಿಂದ ನಾಶವಾಗದಂತೆ ಅವರಿಗಿರುವ ಯಾವುದನ್ನು ಮುಟ್ಟಬೇಡಿರಿ,” ಎಂದನು.


ಹೀಗೆಯೇ ಓಟಗಾರರು ಎಫ್ರಾಯೀಮನ, ಮನಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ, ಪಟ್ಟಣ ಪಟ್ಟಣವನ್ನು ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು.


ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ, ಅವರಲ್ಲಿ ಕೆಲವರು ಪರಿಹಾಸ್ಯ ಮಾಡಿದರು. ಇತರರು, “ನಾವು ಇನ್ನೊಮ್ಮೆ ಈ ವಿಷಯದ ಮೇಲೆ ನೀನು ಮಾತನಾಡುವುದನ್ನು ಕೇಳುತ್ತೇವೆ,” ಎಂದರು.


ಅವರಿಗಾದರೋ ಈ ಸ್ತ್ರೀಯರು ಹೇಳಿದ್ದು ಕಟ್ಟು ಕಥೆಗಳಂತೆ ಕಂಡವು, ಅವರು ಅವುಗಳನ್ನು ನಂಬಲಿಲ್ಲ.


ಅವರಿಗೆ, “ಹೊರಗೆ ಹೋಗಿರಿ, ಬಾಲಕಿಯು ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ,” ಎಂದರು. ಅದಕ್ಕವರು ನಕ್ಕು ಯೇಸುವನ್ನು ಹಾಸ್ಯಮಾಡಿದರು.


ಆಗ ನಾನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ‘ಅವನು ಸಾಮ್ಯಗಳನ್ನು ಹೇಳುವುದಿಲ್ಲವೇ?’ ಎಂದು ನನ್ನ ವಿಷಯದಲ್ಲಿ ಅವರು ಹೇಳುತ್ತಾರೆ,” ಎಂದೆನು.


ಓ ಯೆಹೋವ ದೇವರೇ, ನೀವು ನನ್ನನ್ನು ಮರುಳಾಗಿಸಿದಿರಿ. ನಾನು ಮರುಳಾದೆನು. ನೀವು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿರಿ. ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ. ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡುತ್ತಾನೆ.


ಹೀಗಿರುವುದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗಬೇಡಿರಿ. ಸರ್ವಶಕ್ತ ಆಗಿರುವ ಕರ್ತ ಯೆಹೋವ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರ ತರಲು ನಿರ್ಣಯಿಸಿದೆ, ಎಂಬ ತೀರ್ಪನ್ನು ನಾನು ಕೇಳಿದ್ದೇನೆ.


ಅನೇಕಬಾರಿ ಗದರಿಸಿದರೂ ತಗ್ಗದ ಹಟಮಾರಿ ಪರಿಹಾರವಿಲ್ಲದೆ ಫಕ್ಕನೆ ಮುರಿದು ಬೀಳುವನು.


ಆದರೆ ಯೆಹೋವ ದೇವರ ಕೋಪವು ತಮ್ಮ ಜನರಿಗೆ ವಿರೋಧವಾಗಿ ಏಳುವವರೆಗೂ, ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ, ದೇವರ ವಾಕ್ಯಗಳನ್ನು ತಿರಸ್ಕರಿಸಿ, ದೇವರ ಪ್ರವಾದಿಗಳಿಗೆ ಅಪಹಾಸ್ಯ ಮಾಡಿದರು.


ಆದರೆ, “ಸಮಾಧಾನ, ಸುರಕ್ಷಿತ,” ಎಂದು ಜನರು ಹೇಳುತ್ತಿರುವಾಗಲೇ, ಅವರ ಮೇಲೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಬರುವಂತೆ ಫಕ್ಕನೆ ಬರುವುದು. ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಅವನು ಇನ್ನೂ ಬರುತ್ತಿದ್ದಾಗಲೇ, ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ದೆವ್ವವನ್ನು ಗದರಿಸಿ ಹುಡುಗನನ್ನು ಸ್ವಸ್ಥಮಾಡಿ, ಅವನನ್ನು ಅವನ ತಂದೆಗೆ ಪುನಃ ಒಪ್ಪಿಸಿದರು.


ಕ್ರಿಸ್ತ ಯೇಸುವಿನ ಜನನದ ವಿವರ: ಯೇಸುವಿನ ತಾಯಿ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದ್ದರು, ಆದರೆ ಅವರಿಬ್ಬರು ಕೂಡಿಬಾಳುವುದಕ್ಕಿಂತ ಮುಂಚೆಯೇ, ಮರಿಯಳು ಪವಿತ್ರಾತ್ಮರಿಂದ ಗರ್ಭಧರಿಸಿರುವುದು ತಿಳಿದುಬಂತು.


ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ, “ನೀವು ಮತ್ತು ಇಸ್ರಾಯೇಲರೆಲ್ಲರೂ ಎದ್ದು ನನ್ನ ಜನರೊಳಗಿಂದ ಹೊರಟು ಹೋಗಿರಿ. ನೀವು ಹೇಳಿದ ಹಾಗೆಯೇ, ಯೆಹೋವ ದೇವರನ್ನು ಆರಾಧಿಸುವುದಕ್ಕೆ ಹೊರಟುಹೋಗಿರಿ.


ಆದರೆ ಯೆಹೋವ ದೇವರ ವಾಕ್ಯಕ್ಕೆ ಮನಸ್ಸು ಕೊಡದವರು, ತಮ್ಮ ದಾಸರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು.


ಬೇಗನೆ ತಪ್ಪಿಸಿಕೊಂಡು ಅಲ್ಲಿಗೆ ಹೋಗು, ಏಕೆಂದರೆ ನೀನು ಅಲ್ಲಿ ಸೇರುವ ತನಕ ನಾನೇನೂ ಮಾಡಲಾರೆನು,” ಎಂದನು. ಆದ್ದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು.


ಅವರನ್ನು ಹೊರಗೆ ತಂದಮೇಲೆ ಅವರಲ್ಲಿ ಒಬ್ಬನು, “ಹಿಂದಕ್ಕೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ. ನೀನು ನಾಶವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಓಡಿಹೋಗು,” ಎಂದನು.


ಸೂರ್ಯೋದಯವಾಗುವ ಮೊದಲು ದೂತರು ಲೋಟನನ್ನು ತ್ವರೆಪಡಿಸಿ, “ಈ ಪಟ್ಟಣಕ್ಕೆ ಉಂಟಾಗುವ ದಂಡನೆಯಿಂದ ನೀನು ನಾಶವಾಗದ ಹಾಗೆ ಎದ್ದು ನಿನ್ನ ಹೆಂಡತಿಯನ್ನೂ ಇಲ್ಲಿರುವ ನಿನ್ನ ಪುತ್ರಿಯರನ್ನೂ ಕರೆದುಕೊಂಡು ನಡೆ,” ಎಂದರು.


ಯೆರೆಮೀಯನು ಜನರೆಲ್ಲರಿಗೆ ಅವರ ದೇವರಾದ ಯೆಹೋವ ದೇವರು ಯಾವ ವಿಷಯವಾಗಿ ಅವನನ್ನು ಅವರ ಬಳಿಗೆ ಕಳುಹಿಸಿದ್ದರೋ, ಆ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದಾಗ,


ಹೋಷಾಯನ ಮಗನಾದ ಅಜರ್ಯನೂ, ಕಾರೇಹನ ಮಗನಾದ ಯೋಹಾನಾನನೂ, ಗರ್ವಿಷ್ಠ ಮನುಷ್ಯರೆಲ್ಲರೂ ಮಾತನಾಡಿ ಯೆರೆಮೀಯನಿಗೆ, “ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾಗಿರುವುದಕ್ಕೆ ಈಜಿಪ್ಟಿಗೆ ಹೋಗಬಾರದೆಂದು ಹೇಳುವುದಕ್ಕೆ ನಮ್ಮ ದೇವರಾದ ಯೆಹೋವ ದೇವರು ನಿನ್ನನ್ನು ಕಳುಹಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು