ಆದಿಕಾಂಡ 19:15 - ಕನ್ನಡ ಸಮಕಾಲಿಕ ಅನುವಾದ15 ಸೂರ್ಯೋದಯವಾಗುವ ಮೊದಲು ದೂತರು ಲೋಟನನ್ನು ತ್ವರೆಪಡಿಸಿ, “ಈ ಪಟ್ಟಣಕ್ಕೆ ಉಂಟಾಗುವ ದಂಡನೆಯಿಂದ ನೀನು ನಾಶವಾಗದ ಹಾಗೆ ಎದ್ದು ನಿನ್ನ ಹೆಂಡತಿಯನ್ನೂ ಇಲ್ಲಿರುವ ನಿನ್ನ ಪುತ್ರಿಯರನ್ನೂ ಕರೆದುಕೊಂಡು ನಡೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಹೊತ್ತು ಮೂಡುವುದಕ್ಕೆ ಮುಂಚೆ ಆ ದೂತರು ಲೋಟನಿಗೆ, “ನೀನೆದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಬೇಗ ಕರೆದುಕೊಂಡು ಹೋಗು; ಊರಿಗೆ ಉಂಟಾಗುವ ದಂಡನೆಯಿಂದ ನಿನಗೂ ನಾಶವುಂಟಾದೀತು” ಎಂದು ಹೇಳಿ ತ್ವರೆಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಹೊತ್ತು ಮೂಡುವುದಕ್ಕೆ ಮುಂಚೆ ದೂತರು ಲೋಟನಿಗೆ, “ಏಳು, ನಿನ್ನ ಹೆಂಡತಿ ಮತ್ತು ಹೆಣ್ಣುಮಕ್ಕಳಿಬ್ಬರನ್ನು ಕರೆದುಕೊಂಡು ಬೇಗನೆ ಹೊರಡು; ಇಲ್ಲದಿದ್ದರೆ ಊರಿಗೆ ಬರಲಿರುವ ದಂಡನೆಯಲ್ಲಿ ನೀನೂ ಸಿಕ್ಕಿಕೊಂಡು ನಾಶವಾಗಬೇಕಾದೀತು,” ಎಂದು ಹೇಳಿ ತ್ವರೆಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಹೊತ್ತು ಮೂಡುವದಕ್ಕೆ ಮುಂಚೆ ಆ ದೂತರು ಲೋಟನಿಗೆ - ನೀನೆದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣು ಮಕ್ಕಳನ್ನೂ ಬೇಗ ಕರಕೊಂಡು ಹೋಗು; ಊರಿಗೆ ಉಂಟಾಗುವ ದಂಡನೆಯಿಂದ ನಿನಗೂ ನಾಶವುಂಟಾದೀತು ಎಂದು ಹೇಳಿ ತ್ವರೆಪಡಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಸೂರ್ಯೋದಯಕ್ಕಿಂತ ಮೊದಲೇ ಹೊರಡುವಂತೆ ದೇವದೂತರು ಲೋಟನನ್ನು ಒತ್ತಾಯಿಸಿ, “ಈ ನಗರವನ್ನು ನಾಶಗೊಳಿಸಲಾಗುವುದು. ಆದ್ದರಿಂದ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಕರೆದುಕೊಂಡು ಈ ಸ್ಥಳದಿಂದ ಓಡಿಹೋಗು, ಆಗ ನೀನು ಈ ನಗರದೊಡನೆ ನಾಶವಾಗುವುದಿಲ್ಲ” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |