Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:17 - ಕನ್ನಡ ಸಮಕಾಲಿಕ ಅನುವಾದ

17 ಅವರನ್ನು ಹೊರಗೆ ತಂದಮೇಲೆ ಅವರಲ್ಲಿ ಒಬ್ಬನು, “ಹಿಂದಕ್ಕೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ. ನೀನು ನಾಶವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಓಡಿಹೋಗು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರನ್ನು ಹೊರಗೆ ತಂದ ಮೇಲೆ ಅವರಲ್ಲಿ ಒಬ್ಬನು, “ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ತಿರುಗಿ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಊರ ಹೊರಗೆ ಬಿಟ್ಟಾದ ಮೇಲೆ ಆ ಇಬ್ಬರಲ್ಲಿ ಒಬ್ಬನು, “ಪ್ರಾಣ ಉಳಿಸಿಕೊಳ್ಳಬೇಕಾದರೆ ಓಡಬೇಕು, ಹಿಂದಕ್ಕೆ ನೋಡಬಾರದು; ಬಯಲುಸೀಮೆಯಲ್ಲೂ ನಿಲ್ಲದೆ ಗುಡ್ಡಗಾಡಿಗೆ ಓಡಬೇಕು, ಇಲ್ಲವಾದರೆ ನಾಶವಾದೀತು!” ಎಂದು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅವರು ನಗರದ ಹೊರಕ್ಕೆ ಬಂದ ಮೇಲೆ ಆ ಪುರುಷರಲ್ಲಿ ಒಬ್ಬನು, “ಈಗ ಓಡಿಹೋಗಿ ನಿಮ್ಮ ಪ್ರಾಣವನ್ನು ಕಾಪಾಡಿಕೊಳ್ಳಿ; ನಗರದ ಕಡೆಗೆ ತಿರುಗಿ ನೋಡಬೇಡಿ; ಕಣಿವೆಯ ಯಾವ ಸ್ಥಳದಲ್ಲೂ ನಿಂತುಕೊಳ್ಳಬೇಡಿ; ತಪ್ಪಿಸಿಕೊಂಡು ಬೆಟ್ಟಗಳಿಗೆ ಓಡಿಹೋಗಿರಿ; ಇಲ್ಲವಾದರೆ, ಈ ನಗರದೊಡನೆ ನೀವೂ ನಾಶವಾಗುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:17
21 ತಿಳಿವುಗಳ ಹೋಲಿಕೆ  

ಆಗ ಯೇಸು ಅವನಿಗೆ, “ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ಯೋಗ್ಯನಲ್ಲ,” ಎಂದರು.


ಆದರೆ ಲೋಟನ ಹಿಂದೆ ಬರುತ್ತಿದ್ದ ಅವನ ಹೆಂಡತಿಯು ಹಿಂದಿರುಗಿ ನೋಡಿ ಉಪ್ಪಿನ ಸ್ತಂಭವಾದಳು.


ಬೇಗನೆ ತಪ್ಪಿಸಿಕೊಂಡು ಅಲ್ಲಿಗೆ ಹೋಗು, ಏಕೆಂದರೆ ನೀನು ಅಲ್ಲಿ ಸೇರುವ ತನಕ ನಾನೇನೂ ಮಾಡಲಾರೆನು,” ಎಂದನು. ಆದ್ದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು.


ಆದರೆ ಫರಿಸಾಯರು ಹಾಗೂ ಸದ್ದುಕಾಯರಲ್ಲಿ ಅನೇಕರು ದೀಕ್ಷಾಸ್ನಾನಕ್ಕಾಗಿ ಬರುವುದನ್ನು ಕಂಡು, ಯೋಹಾನನು ಅವರಿಗೆ: “ಎಲೈ ಸರ್ಪಸಂತತಿಯವರೇ! ಮುಂದೆ ಬರುವ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಎಚ್ಚರಿಸಿದವರು ಯಾರು?


ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ತಪ್ಪಿಸಿಕೊಳ್ಳಿರಿ; ಮರುಭೂಮಿಯಲ್ಲಿರುವ ಒಣ ಗಿಡದ ಹಾಗಿರಿ.


ಅವನು ಅದನ್ನು ಕೇಳಿ ಎದ್ದು, ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ, ಅಲ್ಲಿ ತನ್ನ ಸೇವಕನನ್ನು ಕಳುಹಿಸಿಬಿಟ್ಟನು.


ಲೋಟನು ತನ್ನ ಕಣ್ಣುಗಳನ್ನೆತ್ತಿ ನೋಡಿ ಯೊರ್ದನಿನ ಮೈದಾನವನ್ನೆಲ್ಲಾ ಕಂಡನು. ಏಕೆಂದರೆ ಯೆಹೋವ ದೇವರು ಸೊದೋಮನ್ನೂ ಗೊಮೋರವನ್ನೂ ನಾಶ ಮಾಡುವುದಕ್ಕಿಂತ ಮುಂಚೆ, ಅದೆಲ್ಲಾ ಚೋಗರಿನವರೆಗೆ ನೀರಾವರಿ ಪ್ರದೇಶವಾಗಿದ್ದು, ಯೆಹೋವ ದೇವರ ತೋಟದಂತೆಯೂ ಈಜಿಪ್ಟ್ ದೇಶದಂತೆಯೂ ಇತ್ತು.


ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವುದು?


ಆದರೆ ದಾವೀದನನ್ನು ಕಾದುಕೊಂಡಿದ್ದು, ಉದಯದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ಮೀಕಲಳು ಅವನಿಗೆ, “ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ, ನಾಳೆ ಹತನಾಗುವಿ,” ಎಂದು ಹೇಳಿ


ಆ ಮನುಷ್ಯರು ಅಲ್ಲಿಂದ ತಮ್ಮ ಮುಖಗಳನ್ನು ತಿರುಗಿಸಿಕೊಂಡು, ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಇನ್ನೂ ಯೆಹೋವ ದೇವರ ಮುಂದೆ ನಿಂತುಕೊಂಡಿದ್ದನು.


ಇಂತಹ ಮಹಾ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದು ಹೇಗೆ? ಈ ರಕ್ಷಣೆಯನ್ನು ನಮಗೆ ಕರ್ತ ಆಗಿರುವ ಯೇಸುವೇ ಮೊದಲು ತಿಳಿಸಿದ್ದಾರೆ. ಅವರಿಂದ ಕೇಳಿಸಿಕೊಂಡವರೂ ನಮಗೆ ಆ ರಕ್ಷಣೆಯನ್ನು ದೃಢಪಡಿಸಿದ್ದಾರೆ.


ಸಿದ್ದೀಮ್ ತಗ್ಗು ಕಲ್ಲರಗಿನ ಕೆಸರುಕುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ಅರಸರು ಓಡಿಹೋಗಿ ಅದರಲ್ಲಿ ಬಿದ್ದರು. ಉಳಿದವರು ಬೆಟ್ಟಕ್ಕೆ ಓಡಿಹೋದರು.


ಅದಕ್ಕೆ ಲೋಟನು, “ಸ್ವಾಮಿ, ಅದು ನನ್ನಿಂದಾಗದು.


ಲೋಟನು ಚೋಗರಿನಲ್ಲಿ ವಾಸಿಸಲು ಭಯಪಟ್ಟು, ತನ್ನ ಇಬ್ಬರು ಪುತ್ರಿಯರ ಸಂಗಡ ಬೆಟ್ಟದ ಮೇಲೆ ಹೋಗಿ ವಾಸಮಾಡಿದನು. ಅಲ್ಲಿ ಅವನೂ ಅವನ ಇಬ್ಬರು ಪುತ್ರಿಯರೂ ಒಂದು ಗವಿಯಲ್ಲಿ ವಾಸವಾಗಿದ್ದರು.


ಅವನು ಸಮೂಹದವರಿಗೆ, “ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿಹೋಗಿರಿ. ನೀವು ಅವರ ಎಲ್ಲಾ ಪಾಪಗಳ ದೆಸೆಯಿಂದ ನಾಶವಾಗದಂತೆ ಅವರಿಗಿರುವ ಯಾವುದನ್ನು ಮುಟ್ಟಬೇಡಿರಿ,” ಎಂದನು.


ಆದ್ದರಿಂದ ನೀನು ನಿನ್ನ ಪ್ರಾಣವನ್ನೂ, ನಿನ್ನ ಮಗ ಸೊಲೊಮೋನನ ಪ್ರಾಣವನ್ನೂ ರಕ್ಷಿಸಿಕೊಳ್ಳುವ ಹಾಗೆ ಅಪ್ಪಣೆಯಾದರೆ, ನಿನಗೆ ಆಲೋಚನೆ ಹೇಳುತ್ತೇನೆ.


ಊಟಕ್ಕಿಂತ ಜೀವನವೂ ವಸ್ತ್ರಕ್ಕಿಂತ ದೇಹವೂ ಹೆಚ್ಚಿನದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು