ಆದಿಕಾಂಡ 19:19 - ಕನ್ನಡ ಸಮಕಾಲಿಕ ಅನುವಾದ19 ಈಗ ನಿನ್ನ ದಾಸನಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಿದೆ. ನನ್ನ ಪ್ರಾಣವನ್ನು ಉಳಿಸುವ ಹಾಗೆ ನೀನು ನನಗೆ ಮಾಡಿದ ದಯೆ ದೊಡ್ಡದು. ಆದರೆ ನಾನು ತಪ್ಪಿಸಿಕೊಂಡು ಬೆಟ್ಟಕ್ಕೆ ಓಡಿಹೋಗಲಾರೆನು, ನನಗೆ ವಿಪತ್ತು ಉಂಟಾಗಿ ಸತ್ತೇನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀನು ನಿನ್ನ ದಾಸನ ಮೇಲೆ ದಯೆ ಇಟ್ಟು ನನ್ನ ಪ್ರಾಣವನ್ನು ಉಳಿಸಿದ್ದು ಬಹು ವಿಶೇಷವಾದ ಉಪಕಾರವೇ; ಆದರೆ ಬೆಟ್ಟಕ್ಕೆ ಓಡಿ ಹೋಗಲಾರೆನು; ನಾನು ಹೋಗುತ್ತಿರುವಾಗ ಆ ವಿಪತ್ತು ನನಗೂ ಉಂಟಾಗಿ ಸತ್ತೇನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಿಮ್ಮ ದಾಸನ ಮೇಲೆ ಮರುಕವಿಟ್ಟು, ಪ್ರಾಣ ಉಳಿಸಿದ್ದೇನೋ ಮಹಾ ಉಪಕಾರ ಆಯಿತು; ಆದರೆ ಗುಡ್ಡಗಾಡಿಗೆ ಓಡಿಹೋಗಲು ನನ್ನಿಂದಾಗದು, ಅಲ್ಲಿಗೆ ಸೇರುವುದಕ್ಕೆ ಮುಂಚೆಯೇ ಈ ವಿಪತ್ತಿಗೆ ಸಿಕ್ಕಿ ಸತ್ತೇನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನೀನು ನಿನ್ನ ದಾಸನ ಮೇಲೆ ದಯವಿಟ್ಟು ನನ್ನ ಪ್ರಾಣವನ್ನು ಉಳಿಸಿದ್ದು ಬಹು ವಿಶೇಷವಾದ ಉಪಕಾರವೇ; ಆದರೆ ಬೆಟ್ಟಕ್ಕೆ ಓಡಿಹೋಗಲಾರೆನು: ನಾನು ಹೋಗುತ್ತಿರುವಾಗ ಆ ವಿಪತ್ತು ನನಗೂ ಉಂಟಾಗಿ ಸತ್ತೇನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಿಮ್ಮ ಸೇವಕನಾದ ನನಗೆ ಮಹಾಕರುಣೆಯನ್ನು ತೋರಿ ನನ್ನನ್ನು ಕಾಪಾಡಿದ್ದೀರಿ. ಆದರೆ ನಾನು ಬೆಟ್ಟಗಳವರೆಗೂ ಓಡಿಹೋಗಲಾರೆ. ನಾನು ನಿಧಾನವಾಗಿ ಹೋಗುವುದಾದರೆ ಕೇಡು ಸಂಭವಿಸಿ ಕೊಲ್ಲಲ್ಪಡುವೆನು. ಅಧ್ಯಾಯವನ್ನು ನೋಡಿ |