Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:24 - ಕನ್ನಡ ಸಮಕಾಲಿಕ ಅನುವಾದ

24 ಆಗ ಯೆಹೋವ ದೇವರು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ, ಬೆಂಕಿಯನ್ನೂ ಆಕಾಶದಿಂದ ಸುರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆಗ ಸರ್ವೇಶ್ವರ ಸ್ವಾಮಿ ಸೊದೋಮ್ - ಗೊಮೋರಗಳ ಮೇಲೆ ಅಗ್ನಿ ಉರಿಯುತ್ತಿರುವ ಗಂಧಕಮಳೆ ಸುರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆಗ ಯೆಹೋವನು ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಮೇಲೆ ಆಕಾಶದಿಂದ ಉರಿಯುವ ಗಂಧಕದ ಮಳೆಯನ್ನು ಸುರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:24
29 ತಿಳಿವುಗಳ ಹೋಲಿಕೆ  

ಯೆಹೋವ ದೇವರು ತಮ್ಮ ದೈವಿಕ ಕೋಪದಲ್ಲಿ ಕೆಡವಿ ಹಾಕಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಂತೆ ಆ ದೇಶವೆಲ್ಲಾ ಗಂಧಕವೂ, ಉಪ್ಪೂ ಉರಿಯುತ್ತಾ, ವ್ಯವಸಾಯವಾದರೂ ಹುಲ್ಲಾದರೂ ಬೆಳೆಯದೆ ಇರುವುದು.


ರಾಜ್ಯಗಳ ಘನತೆಯೂ, ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬಿಲೋನನ್ನು ದೇವರು ಸೊದೋಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಕೆಡವಿಬಿಡುವನು.


ಸೊದೋಮ ಗೊಮೋರದವರೂ ಹಾಗೆಯೇ ಅವುಗಳ ಸುತ್ತಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಅನೈತಿಕತೆಗೆ ಒಪ್ಪಿಸಿಕೊಟ್ಟರು. ಅವರು ಸ್ವಭಾವಕ್ಕೆ ವಿರುದ್ಧ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲಾಗಿದ್ದಾರೆ.


ದೇವರು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದರು.


“ಸೊದೋಮನ್ನೂ, ಗೊಮೋರವನ್ನೂ ಕೆಡವಿದ ಹಾಗೆ, ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ. ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವೂ ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ ಅವುಗಳ ಸುತ್ತಣ ಪಟ್ಟಣಗಳಲ್ಲಿಯೂ ಹೇಗೋ ಹಾಗೆಯೇ, ಎದೋಮಿನಲ್ಲಿಯೂ ಯಾರೂ ವಾಸಮಾಡುವುದಿಲ್ಲ; ಅದರಲ್ಲಿ ಯಾವ ನರಪ್ರಾಣಿಯೂ ತಂಗುವುದಿಲ್ಲ” ಎಂದು ಯೆಹೋವ ದೇವರು ಅನ್ನುತ್ತಾರೆ.


ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಜೀವದಾಣೆ,” “ನಿಶ್ಚಯವಾಗಿ ಮೋವಾಬು ಸೊದೋಮಿನ ಅಮ್ಮೋನ್ಯರು ಗೊಮೋರದ ಹಾಗೆ ಆಗುವುದು. ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಳಿಗಳುಳ್ಳಂಥ ನಿತ್ಯವಾಗಿ ಹಾಳಾದ ಸ್ಥಳವಾಗುವರು. ನನ್ನ ಜನರಲ್ಲಿ ಉಳಿದವರು ಅವರನ್ನು ಸುಲಿದುಕೊಳ್ಳುವರು. ನನ್ನ ಜನರಲ್ಲಿ ಮಿಕ್ಕಾದವರು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.”


ನನ್ನ ಜನರ ಅಕ್ರಮದ ದಂಡನೆಯು ಸೊದೋಮಿನ ಪಾಪದ ದಂಡನೆಗಿಂತ ದೊಡ್ಡದು. ಅದು ಕ್ಷಣಮಾತ್ರದಲ್ಲಿ ಕೆಡವಿ ಹಾಕಲಾಯಿತು ಮತ್ತು ಅವಳಿಗೆ ಸಹಾಯಮಾಡಲು ಯಾವ ಕೈಗಳೂ ಇರಲಿಲ್ಲ.


ಆ ಮನುಷ್ಯನು, ಯೆಹೋವ ದೇವರು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ. ಅವನು ಬೆಳಿಗ್ಗೆ ಕೂಗನ್ನೂ, ಮಧ್ಯಾಹ್ನದಲ್ಲಿ ಆರ್ಭಟವನ್ನೂ ಕೇಳಲಿ.


ಬೆಂಕಿಯು ಅವನ ಮನೆಯನ್ನು ಸುಡುವುದು; ಅವನ ಮನೆಯ ಮೇಲೆ ಗಂಧಕವನ್ನು ಎರಚಲಾಗುವುದು.


“ಎಫ್ರಾಯೀಮೇ, ನಿನ್ನನ್ನು ಹೇಗೆ ಬಿಟ್ಟುಬಿಡಲಿ? ಇಸ್ರಾಯೇಲೇ, ನಿನ್ನನ್ನು ಹೇಗೆ ಕೈಬಿಡಲಿ? ಅದ್ಮದ ಹಾಗೆ ನಿನ್ನನ್ನು ದುರ್ಗತಿಗೆ ಹೇಗೆ ಒಪ್ಪಿಸಲಿ? ಚೆಬೋಯಿಮನಂತೆ ನಿನ್ನನ್ನು ಹೇಗೆ ನಾಶಮಾಡಲಿ? ನನ್ನ ಹೃದಯವು ನನ್ನಲ್ಲಿ ಮಾರ್ಪಟ್ಟಿದೆ. ನನ್ನಲ್ಲಿ ಕರುಣೆ ಉಕ್ಕಿ ಬಂದಿದೆ.


ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಅವುಗಳ ಸುತ್ತಣ ಪಟ್ಟಣಗಳಲ್ಲಿಯೂ ಹೇಗೋ ಹಾಗೆಯೇ, ಎದೋಮಿನಲ್ಲಿಯೂ ಯಾರೂ ವಾಸಮಾಡುವುದಿಲ್ಲ; ಅದರಲ್ಲಿ ಯಾವ ನರಪ್ರಾಣಿಯೂ ತಂಗುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಸೇನಾಧೀಶ್ವರ ಯೆಹೋವ ದೇವರು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.


ಅವರು ದುಷ್ಟರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಸುರಿಸಲಿ; ಇವೇ ದುಷ್ಟರ ಪಾಲಾಗಿರಲಿ.


ಆದರೆ ನ್ಯಾಯತೀರ್ಪಿನ ದಿನ, ಆ ಪಟ್ಟಣಕ್ಕಿಂತಲೂ ಸೊದೋಮಿನ ಗತಿ ಹೆಚ್ಚು ತಾಳಬಹುದಾಗಿರುವುದು ಎಂದು ನಾನು ನಿಮಗೆ ಹೇಳುತ್ತೇನೆ.


ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರೆಸದೆ ಹಾಕಿದ ಅವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಕುರಿಮರಿಯಾಗಿರುವವರ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ಲೋಟನು ತನ್ನ ಕಣ್ಣುಗಳನ್ನೆತ್ತಿ ನೋಡಿ ಯೊರ್ದನಿನ ಮೈದಾನವನ್ನೆಲ್ಲಾ ಕಂಡನು. ಏಕೆಂದರೆ ಯೆಹೋವ ದೇವರು ಸೊದೋಮನ್ನೂ ಗೊಮೋರವನ್ನೂ ನಾಶ ಮಾಡುವುದಕ್ಕಿಂತ ಮುಂಚೆ, ಅದೆಲ್ಲಾ ಚೋಗರಿನವರೆಗೆ ನೀರಾವರಿ ಪ್ರದೇಶವಾಗಿದ್ದು, ಯೆಹೋವ ದೇವರ ತೋಟದಂತೆಯೂ ಈಜಿಪ್ಟ್ ದೇಶದಂತೆಯೂ ಇತ್ತು.


ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನಾದರೋ ಸಮತಟ್ಟಾದ ಊರುಗಳಲ್ಲಿ ವಾಸಿಸುತ್ತಾ ಸೊದೋಮಿನ ಬಳಿ ತನ್ನ ಗುಡಾರವನ್ನು ಹಾಕಿದನು.


ಆಗ ಯೆಹೋವ ದೇವರು, “ನಾನು ಮಾಡುವುದನ್ನು ಅಬ್ರಹಾಮನಿಗೆ ಮರೆಮಾಡಲೋ?


ಲೋಟನು ಚೋಗರಿಗೆ ಬಂದಾಗ ಸೂರ್ಯೋದಯವಾಗಿತ್ತು.


ಮೋಶೆಯು ಆಕಾಶದ ಕಡೆಗೆ ತನ್ನ ಕೋಲನ್ನು ಚಾಚಿದನು. ಆಗ ಯೆಹೋವ ದೇವರು ಗುಡುಗುಗಳನ್ನೂ ಆಲಿಕಲ್ಲಿನ ಮಳೆಯನ್ನೂ ಸುರಿಸಿದರು. ಸಿಡಿಲು ನೆಲಕ್ಕೆ ಬಡಿಯಿತು. ಸಿಡಿಲಿನ ಆರ್ಭಟದೊಂದಿಗೆ ಯೆಹೋವ ದೇವರು ಈಜಿಪ್ಟ್ ದೇಶದ ಮೇಲೆ ಆಲಿಕಲ್ಲಿನ ಮಳೆಯನ್ನು ಸುರಿಸಿದರು.


ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬ ದೂತನು ಬಂದು, “ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿಗಳನ್ನೂ ಸೇವಕರನ್ನೂ ಸುಟ್ಟುಹಾಕಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು.


ಪೂರ್ವದಿಂದ ತೋಫೆತ್ ಸಿದ್ಧವಾಗಿದೆ. ಹೌದು, ಅದು ಆಳವಾಗಿಯೂ, ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಚಿತೆಯೊಳಗೆ ಬೆಂಕಿಯೂ, ಬಹಳ ಕಟ್ಟಿಗೆಯೂ ತುಂಬಿರುವುದು. ಯೆಹೋವ ದೇವರ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.


ಯೆಹೋವ ದೇವರು ನಿಮ್ಮ ದೇಶದಲ್ಲಿ ಮಳೆಗೆ ಬದಲಾಗಿ ಹುಡಿಯೂ ಧೂಳೂ ಆಗುವಂತೆ ಮಾಡುವರು. ನೀವು ನಾಶವಾಗುವವರೆಗೆ ಅದು ಆಕಾಶದಿಂದ ನಿಮ್ಮ ಮೇಲೆ ಸುರಿಯುವುದು.


ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ, ದೂರದೇಶದಿಂದ ಬರುವ ಅನ್ಯನೂ, ಆ ದೇಶದ ವಿಪತ್ತುಗಳನ್ನೂ, ಯೆಹೋವ ದೇವರು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡುವರು.


ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ. ಅವರು ವ್ಯಭಿಚಾರ ಮಾಡಿ, ಸುಳ್ಳಿನಲ್ಲಿ ನಡೆದುಕೊಂಡದ್ದಲ್ಲದೆ, ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ. ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ, ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು