ಆದಿಕಾಂಡ 19:25 - ಕನ್ನಡ ಸಮಕಾಲಿಕ ಅನುವಾದ25 ಹೀಗೆ ದೇವರು ಆ ಪಟ್ಟಣಗಳನ್ನೂ, ಅಲ್ಲಿಯ ಪ್ರದೇಶವನ್ನೂ, ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ, ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಅಳಿಸಿಬಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆ ಪಟ್ಟಣಗಳನ್ನೂ ಸುತ್ತಲಿರುವ ಸೀಮೆಯೆಲ್ಲವನ್ನೂ ಊರುಗಳಲ್ಲಿದ್ದ ಜನರೆಲ್ಲರನ್ನೂ ಭೂಮಿಯ ಮೇಲಣ ಎಲ್ಲಾ ಬೆಳೆಯನ್ನೂ ಹಾಳುಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆ ಪಟ್ಟಣಗಳನ್ನು, ಇಡೀ ಆ ಬಯಲುಸೀಮೆಯನ್ನೂ ಅವುಗಳ ನಿವಾಸಿಗಳನ್ನೂ ಹೊಲಗಳ ಬೆಳೆಯೆಲ್ಲವನ್ನೂ ಹಾಳುಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ ಆ ಪಟ್ಟಣಗಳನ್ನೂ ಸುತ್ತಲಿರುವ ಸೀಮೆಯೆಲ್ಲವನ್ನೂ ಊರುಗಳಲ್ಲಿದ್ದ ಜನರೆಲ್ಲರನ್ನೂ ಭೂವಿುಯ ಮೇಲಣ ಎಲ್ಲಾ ಬೆಳೆಯನ್ನೂ ಹಾಳುಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಹೀಗೆ ಯೆಹೋವನು ಆ ಎರಡು ನಗರಗಳನ್ನು ನಾಶಮಾಡಿದನು; ಇಡೀ ಕಣಿವೆಯನ್ನೂ ಅದರಲ್ಲಿ ಬೆಳೆಯುತ್ತಿದ್ದ ಸಸ್ಯಗಳನ್ನೂ ನಗರಗಳಲ್ಲಿದ್ದ ಎಲ್ಲಾ ಜನರನ್ನೂ ನಾಶಮಾಡಿದನು. ಅಧ್ಯಾಯವನ್ನು ನೋಡಿ |
ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಜೀವದಾಣೆ,” “ನಿಶ್ಚಯವಾಗಿ ಮೋವಾಬು ಸೊದೋಮಿನ ಅಮ್ಮೋನ್ಯರು ಗೊಮೋರದ ಹಾಗೆ ಆಗುವುದು. ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಳಿಗಳುಳ್ಳಂಥ ನಿತ್ಯವಾಗಿ ಹಾಳಾದ ಸ್ಥಳವಾಗುವರು. ನನ್ನ ಜನರಲ್ಲಿ ಉಳಿದವರು ಅವರನ್ನು ಸುಲಿದುಕೊಳ್ಳುವರು. ನನ್ನ ಜನರಲ್ಲಿ ಮಿಕ್ಕಾದವರು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.”