Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:28 - ಕನ್ನಡ ಸಮಕಾಲಿಕ ಅನುವಾದ

28 ಅವನು ಸೊದೋಮ್ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶಗಳ ಕಡೆಗೂ ನೋಡಿದನು. ಆ ಪ್ರದೇಶದಿಂದ ಹೊಗೆಯು ಕುಲುಮೆಯ ಹೊಗೆಯಂತೆ ಏರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಸೊದೋಮ್ ಗೊಮೋರದ ಸುತ್ತಲಿನ ಎಲ್ಲಾ ದಿಕ್ಕುಗಳ ಕಡೆಗೂ ನೋಡಿದಾಗ, ಅಯ್ಯೋ, ಆ ಪ್ರದೇಶದಿಂದ ಹೊಗೆಯು ಆವಿಗೆಯ ಹೊಗೆಯಂತೆ ಮೇಲಕ್ಕೇರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಸೊದೋಮ್ - ಗೊಮೋರ ಹಾಗೂ ಆ ಬಯಲುಸೀಮೆಯತ್ತ ಅವನು ಕಣ್ಣುಹಾಯಿಸಿದಾಗ, ಇಗೋ, ಆ ಪ್ರದೇಶದಿಂದ ಹೊಗೆ, ದೊಡ್ಡ ಆವಿಗೆಯ ಹೊಗೆಯಂತೆ ಭುಗಿಲೇರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಸೊದೋಮ್ ಗೊಮೋರಗಳ ಕಡೆಗೂ ಆ ಎಲ್ಲಾ ಸೀಮೆಯ ಕಡೆಗೂ ನೋಡಿದಾಗ, ಅಯ್ಯೋ, ಆ ಪ್ರದೇಶದಿಂದ ಹೊಗೆಯು ಆವಿಗೆಯ ಹೊಗೆಯಂತೆ ಏರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅಬ್ರಹಾಮನು ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಕಡೆಗೂ ಕಣಿವೆ ಪ್ರದೇಶದ ಕಡೆಗೂ ನೋಡಿದಾಗ ಆ ಪ್ರದೇಶದಿಂದ ಹೊಗೆ ಮೇಲೇರುತ್ತಿರುವುದನ್ನು ಕಂಡನು; ಧಗಧಗಿಸುವ ಬೆಂಕಿಯಿಂದ ಬರುವ ಹೊಗೆಯಂತೆ ಅದು ಕಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:28
11 ತಿಳಿವುಗಳ ಹೋಲಿಕೆ  

“ಆಕೆಯೊಂದಿಗೆ ಜಾರತ್ವ ಮಾಡಿರುವ ಭೂರಾಜರು, ಆಕೆಯ ದಹನದಿಂದ ಏರುವ ಹೊಗೆಯನ್ನು ಕಂಡಾಗೆಲ್ಲಾ ಆಕೆಗಾಗಿ ಅಳುತ್ತಾ ಗೋಳಾಡುವರು.


ಆತನು ಆ ಪಾತಾಳವನ್ನು ತೆರೆಯಲು, ಅದರೊಳಗಿಂದ ಹೊಗೆಯು ಮಹಾ ಕುಲುಮೆಯಿಂದ ಬರುವ ಹೊಗೆಯಂತೆ ಏರಿತು. ಪಾತಾಳದ ಆ ಹೊಗೆಯಿಂದ ಸೂರ್ಯ ಮತ್ತು ಆಕಾಶಕ್ಕೆ ಕತ್ತಲು ಕವಿಯಿತು.


ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


ಆಕೆಯ ದಹನದ ಹೊಗೆಯನ್ನು ನೋಡಿ, ‘ಈ ಮಹಾಪಟ್ಟಣಕ್ಕೆ ಸಮಾನವಾದದ್ದು ಯಾವುದು?’ ಎಂದು ಕೂಗುವರು.


ಸೊದೋಮ ಗೊಮೋರದವರೂ ಹಾಗೆಯೇ ಅವುಗಳ ಸುತ್ತಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಅನೈತಿಕತೆಗೆ ಒಪ್ಪಿಸಿಕೊಟ್ಟರು. ಅವರು ಸ್ವಭಾವಕ್ಕೆ ವಿರುದ್ಧ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲಾಗಿದ್ದಾರೆ.


ಎಂದೂ ದ್ವಿತೀಯ ಬಾರಿ: “ಹಲ್ಲೆಲೂಯಾ! ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿಹೋಗುತ್ತದೆ!” ಎಂದು ಘೋಷಿಸಿದರು.


ದೇವರು ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ಕಾಪಾಡಿದರು.


ದೇವರು ಫಲವುಳ್ಳ ಭೂಮಿಯನ್ನು ಬಂಜರಾಗುವಂತೆ ಮಾಡಿದರು. ಇದಕ್ಕೆಲ್ಲ ಕಾರಣ ಅದರ ನಿವಾಸಿಗಳ ಕೆಟ್ಟತನವೇ ಆಗಿತ್ತು.


ಯೆಹೋವ ದೇವರು ಅಗ್ನಿಯೊಳಗೆ ಬೆಟ್ಟದ ಮೇಲೆ ಇಳಿದಿದ್ದರಿಂದ ಸೀನಾಯಿ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.


ಆದರೆ ಅವರ ಆಗಮನದ ದಿವಸದಲ್ಲಿ ಯಾರು ತಾಳುವರು? ಅವರು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಏಕೆಂದರೆ ಅವರು ಅಕ್ಕಸಾಲಿಗನ ಪರಿಶೋಧಿಸುವ ಬೆಂಕಿಯ ಹಾಗೆಯೂ, ಅಗಸನ ಸಾಬೂನಿನ ಹಾಗೆಯೂ ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು