ಆದಿಕಾಂಡ 19:34 - ಕನ್ನಡ ಸಮಕಾಲಿಕ ಅನುವಾದ34 ಮರುದಿನ ಹಿರಿಯವಳು ಚಿಕ್ಕವಳಿಗೆ, “ಕಳೆದ ರಾತ್ರಿ ತಂದೆಯ ಸಂಗಡ ನಾನು ಮಲಗಿಕೊಂಡೆನು. ಈ ರಾತ್ರಿಯಲ್ಲಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸಿ, ನೀನು ಹೋಗಿ ಅವನ ಸಂಗಡ ಮಲಗಿಕೋ. ಏಕೆಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು,” ಎಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಮಾರನೆಯ ದಿನ ಹಿರಿಯವಳು ಕಿರಿಯವಳಿಗೆ, “ನಿನ್ನೆಯ ರಾತ್ರಿ ನಾನೇ ಅಪ್ಪನ ಸಂಗಡ ಮಲಗಿಕೊಂಡೆನು; ಈ ರಾತ್ರಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸೋಣ; ಆ ಮೇಲೆ ನೀನು ಅವನ ಸಂಗಡ ಮಲಗಿಕೋ; ಹೀಗೆ ನಮ್ಮ ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಮಾರನೆಯ ದಿನ ಹಿರಿಯಳು ಕಿರಿಯಳಿಗೆ, “ನಿನ್ನೆ ರಾತ್ರಿ ನಾನು ಅಪ್ಪನ ಸಂಗಡ ಮಲಗಿದ್ದೆ. ಈ ರಾತ್ರಿ ಕೂಡ ಅವನಿಗೆ ದ್ರಾಕ್ಷಾರಸವನ್ನು ಕುಡಿಸೋಣ; ಆಮೇಲೆ ನೀನು ಅವನ ಸಂಗಡ ಮಲಗಿಕೊ; ಹೀಗಾದರೂ ನಮ್ಮ ತಂದೆಯ ಸಂತಾನ ಉಳಿಸೋಣ”, ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಮಾರಣೇ ದಿನ ಹಿರಿಯವಳು ಕಿರಿಯವಳಿಗೆ - ನಿನ್ನೆಯ ರಾತ್ರಿ ನಾನೇ ಅಪ್ಪನ ಸಂಗಡ ಮಲಗಿಕೊಂಡೆನು; ಈ ರಾತ್ರಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸೋಣ; ಆಮೇಲೆ ನೀನು ಅವನ ಸಂಗಡ ಮಲಗಿಕೋ; ಹೀಗೆ ನಮ್ಮ ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ ಎಂದು ಹೇಳಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಮರುದಿನ, ಹಿರಿಯ ಮಗಳು ತನ್ನ ತಂಗಿಗೆ, “ಕಳೆದ ರಾತ್ರಿ ನಾನು ನನ್ನ ತಂದೆಯೊಂದಿಗೆ ಮಲಗಿಕೊಂಡೆ. ಈ ರಾತ್ರಿಯೂ ಅವನನ್ನು ದ್ರಾಕ್ಷಾರಸ ಕುಡಿಸಿ ಅಮಲೇರಿಸೋಣ. ಆಮೇಲೆ ನೀನು ಹಾಸಿಗೆಯ ಮೇಲೆ ಅವನೊಂದಿಗೆ ಮಲಗಿಕೊಳ್ಳಬಹುದು. ಹೀಗೆ ನಾವು ಮಕ್ಕಳನ್ನು ನಮ್ಮ ತಂದೆಯಿಂದಲೇ ಪಡೆದುಕೊಳ್ಳೋಣ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿ |