Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:37 - ಕನ್ನಡ ಸಮಕಾಲಿಕ ಅನುವಾದ

37 ಹಿರಿಯ ಮಗಳು ಮಗನನ್ನು ಹೆತ್ತು, ಅವನಿಗೆ ಮೋವಾಬ್ ಎಂದು ಹೆಸರಿಟ್ಟಳು. ಈಗಿನ ಮೋವಾಬ್ಯರಿಗೂ ಇವನೇ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಹಿರಿಯವಳು ಗಂಡು ಮಗುವನ್ನು ಹೆತ್ತು ಅದಕ್ಕೆ “ಮೋವಾಬ್” (ತಂದೆಯಿಂದ ಹುಟ್ಟಿದವನು) ಎಂದು ಹೆಸರಿಟ್ಟಳು. ಇಂದಿನ ವರೆಗೂ ಇರುವ ಮೋವಾಬ್ಯರಿಗೆ ಅವನೇ ಮೂಲಪುರುಷನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಹಿರಿಯಳು ಗಂಡುಮಗುವನ್ನು ಹೆತ್ತು ಅದಕ್ಕೆ “ಮೋವಾಬ್” ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಮೋವಾಬ್ಯರಿಗೆ ಅವನೇ ಮೂಲಪುರುಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಹಿರಿಯವಳು ಗಂಡು ಮಗುವನ್ನು ಹೆತ್ತು ಅದಕ್ಕೆ ಮೋವಾಬ್ ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಮೋವಾಬ್ಯರಿಗೆ ಅವನೇ ಮೂಲ ಪುರುಷನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಹಿರಿಯ ಮಗಳು ಗಂಡುಮಗನನ್ನು ಹೆತ್ತಳು. ಆಕೆ ಅವನಿಗೆ ಮೋವಾಬ್ ಎಂದು ಹೆಸರಿಟ್ಟಳು. ಈಗ ಜೀವಿಸುತ್ತಿರುವ ಎಲ್ಲಾ ಮೋವಾಬ್ಯರಿಗೆ ಮೋವಾಬನೇ ಮೂಲಪುರುಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:37
14 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರು ನನಗೆ, “ಮೋವಾಬ್ಯರಿಗೆ ಕಿರುಕುಳ ನೀಡಬೇಡಿರಿ ಅಥವಾ ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ಏಕೆಂದರೆ ನಾನು ಅವರ ದೇಶದಲ್ಲಿ ನಿನಗೆ ಸೊತ್ತನ್ನು ಕೊಡುವುದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಆರ್ ಎಂಬ ಪ್ರದೇಶವನ್ನು ಕೊಟ್ಟೆನಲ್ಲವೇ?” ಎಂದರು.


ಇದಲ್ಲದೆ ಸತ್ತವನ ಹೆಸರನ್ನು ಸ್ಥಿರಮಾಡಲು ನಾನು ಮಹ್ಲೋನನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನಗೆ ಹೆಂಡತಿಯಾಗಿ ಸ್ವೀಕರಿಸಿದ್ದೇನೆ. ಇದರಿಂದ ಹೊಲದ ಖಾತೆಯು ಗತಿಸಿದ ಮಹ್ಲೋನನ ಹೆಸರಿನಲ್ಲಿಯೇ ಉಳಿಯುವುದು. ಅವನ ಹೆಸರೂ ಅವನ ವಂಶವೂ ಊರಲ್ಲಿಯೇ ನೆಲೆಯಾಗಿರುವುದು. ಇದಕ್ಕೆ ಈ ದಿನ ನೀವು ಸಾಕ್ಷಿಗಳಾಗಿದ್ದೀರಿ,” ಎಂದನು.


ಅಮ್ಮೋನಿಯರು ಇಲ್ಲವೆ ಮೋವಾಬ್ಯರು ಯೆಹೋವ ದೇವರ ಸಭೆಗೆ ಸೇರಬಾರದು; ಹತ್ತನೆಯ ತಲಾಂತರವರೆಗೆ ಅವರು ಯೆಹೋವ ದೇವರ ಸಭೆಯಲ್ಲಿ ಸೇರಬಾರದು.


ಅಮ್ಮೋನ್ಯರ ಹತ್ತಿರಕ್ಕೆ ನೀವು ಬಂದಾಗ, ಅವರಿಗೆ ಕಿರುಕುಳ ನೀಡಬೇಡಿರಿ ಅಥವಾ ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸೊತ್ತಾಗಿ ಕೊಟ್ಟಿರುವದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನೂ ಕೊಡುವುದಿಲ್ಲ” ಎಂದರು.


ಮೋವಾಬೇ, ನಿನಗೆ ದಿಕ್ಕಾರ! ಕೆಮೋಷಿನ ಜನವೇ ನಿಮಗೆ ದುರ್ಗತಿ ಉಂಟಾಯಿತಲ್ಲಾ! ಅವನು ತನ್ನ ಪುತ್ರರನ್ನು ದೇಶಭ್ರಷ್ಟರನ್ನಾಗಿಯೂ ತನ್ನ ಪುತ್ರಿಯರನ್ನು ಸೆರೆಯವರನ್ನಾಗಿಯೂ ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಒಪ್ಪಿಸಿಕೊಟ್ಟನು.


ಈ ಪ್ರಕಾರ ಲೋಟನ ಇಬ್ಬರು ಪುತ್ರಿಯರು ತಮ್ಮ ತಂದೆಯಿಂದ ಗರ್ಭಿಣಿಯರಾದರು.


ಹೀಗೆ ಸೌಲನು ಇಸ್ರಾಯೇಲಿನ ದೊರೆತನವನ್ನು ತೆಗೆದುಕೊಂಡು, ಸುತ್ತಲಿರುವ ತನ್ನ ಸಮಸ್ತ ಶತ್ರುಗಳಾದ ಮೋವಾಬ್ಯರ ಮೇಲೆಯೂ, ಅಮ್ಮೋನ್ಯರ ಮೇಲೆಯೂ, ಎದೋಮ್ಯರ ಮೇಲೆಯೂ, ಚೋಬದ ಅರಸರ ಮೇಲೆಯೂ, ಫಿಲಿಷ್ಟಿಯರ ಮೇಲೆಯೂ ಯುದ್ಧಮಾಡಿದನು. ಯಾರ ಮೇಲೆ ತಿರುಗಿದನೋ, ಅವರನ್ನು ಪೀಡಿಸಿದನು.


ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡಿರಿ.


“ಮೋವಾಬಿನ ನಿಂದೆಯನ್ನೂ ಅಮ್ಮೋನ್ಯರ ಬೈಗಳವನ್ನೂ ಅವರು ನನ್ನ ಜನರನ್ನೂ ನಿಂದಿಸಿ, ಅವರ ಮೇರೆಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿಕೊಂಡದ್ದನ್ನೂ ನಾನು ಕೇಳಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು