ಆದಿಕಾಂಡ 19:38 - ಕನ್ನಡ ಸಮಕಾಲಿಕ ಅನುವಾದ38 ಚಿಕ್ಕವಳು ಸಹ ಮಗನನ್ನು ಹೆತ್ತು, ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಈಗಿನ ಅಮ್ಮೋನಿಯರಿಗೂ ಇವನೇ ತಂದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಕಿರಿಯ ಮಗಳು ಗಂಡು ಮಗುವನ್ನು ಹೆತ್ತು ಅದಕ್ಕೆ “ಬೆನಮ್ಮಿ” (ರಕ್ತ ಸಂಬಂಧಿಕನ ಮಗ) ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಅಮ್ಮೋನಿಯರಿಗೆ ಇವನೇ ಮೂಲಪುರುಷನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಕಿರಿಯಳೂ ಗಂಡುಮಗುವನ್ನು ಹೆತ್ತು ಅದಕ್ಕೆ ‘ಬಿನಮ್ಮಿ’ ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಅಮ್ಮೋನಿಯರಿಗೆ ಇವನೇ ಮೂಲಪುರುಷ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಕಿರೀ ಮಗಳು ಗಂಡು ಮಗುವನ್ನು ಹೆತ್ತು ಅದಕ್ಕೆ ಬೆನವ್ಮಿು ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಅಮ್ಮೋನಿಯರಿಗೆ ಇವನೇ ಮೂಲ ಪುರುಷನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಚಿಕ್ಕಮಗಳು ಸಹ ಗಂಡುಮಗುವನ್ನು ಹೆತ್ತಳು. ಆಕೆ ತನ್ನ ಮಗನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಈಗ ಜೀವಿಸುತ್ತಿರುವ ಅಮ್ಮೋನಿಯರಿಗೆ ಬೆನಮ್ಮಿಯೇ ಮೂಲಪುರುಷ. ಅಧ್ಯಾಯವನ್ನು ನೋಡಿ |
ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಜೀವದಾಣೆ,” “ನಿಶ್ಚಯವಾಗಿ ಮೋವಾಬು ಸೊದೋಮಿನ ಅಮ್ಮೋನ್ಯರು ಗೊಮೋರದ ಹಾಗೆ ಆಗುವುದು. ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಳಿಗಳುಳ್ಳಂಥ ನಿತ್ಯವಾಗಿ ಹಾಳಾದ ಸ್ಥಳವಾಗುವರು. ನನ್ನ ಜನರಲ್ಲಿ ಉಳಿದವರು ಅವರನ್ನು ಸುಲಿದುಕೊಳ್ಳುವರು. ನನ್ನ ಜನರಲ್ಲಿ ಮಿಕ್ಕಾದವರು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.”