Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:7 - ಕನ್ನಡ ಸಮಕಾಲಿಕ ಅನುವಾದ

7 “ನನ್ನ ಸಹೋದರರೇ, ಈ ದುಷ್ಟತನವನ್ನು ಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಅಣ್ಣಂದಿರೇ, ಈ ದುಷ್ಟತನವನ್ನು ಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 "ಅಣ್ಣ ತಮ್ಮಂದಿರಾ, ನಿಮ್ಮನ್ನು ವಿನಂತಿಸಿ ಕೇಳಿಕೊಳ್ಳುತ್ತೇನೆ: ಈ ಪಾತಕ ಮಾತ್ರ ಮಾಡಬೇಡಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಣ್ಣಂದಿರೇ, ಈ ಪಾತಕವನ್ನು ಮಾಡಬೇಡಿರಿ. ಕೇಳಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಗಂಡಸರಿಗೆ, “ನನ್ನ ಸಹೋದರರೇ, ನಾನು ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ. ದಯವಿಟ್ಟು ಈ ಕೆಟ್ಟಕಾರ್ಯವನ್ನು ಮಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:7
13 ತಿಳಿವುಗಳ ಹೋಲಿಕೆ  

ಸೊದೋಮ ಗೊಮೋರದವರೂ ಹಾಗೆಯೇ ಅವುಗಳ ಸುತ್ತಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಅನೈತಿಕತೆಗೆ ಒಪ್ಪಿಸಿಕೊಟ್ಟರು. ಅವರು ಸ್ವಭಾವಕ್ಕೆ ವಿರುದ್ಧ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲಾಗಿದ್ದಾರೆ.


ಆದಕಾರಣ ಅವರು ತಮ್ಮ ಹೃದಯದ ದುರಾಶೆಗಳಂತೆ ನಡೆದು ತಮ್ಮ ದೇಹಗಳನ್ನು ಮಲಿನ ಮಾಡಿಕೊಳ್ಳಲಿ ಎಂದು ದೇವರು ಅವರನ್ನು ಅಶುದ್ಧತೆಗೆ ಒಪ್ಪಿಸಿಬಿಟ್ಟರು.


ದೇವರು ಒಬ್ಬ ಮನುಷ್ಯನಿಂದ ಎಲ್ಲಾ ದೇಶಗಳನ್ನು ಸೃಷ್ಟಿಸಿ, ಜನರು ಇಡೀ ಭೂಲೋಕವನ್ನು ತುಂಬಿಕೊಳ್ಳುವಂತೆ ಮಾಡಿದರು; ಅವರವರು ಇರತಕ್ಕ ಕಾಲಾವಧಿಯನ್ನೂ ವಾಸಿಸಲು ನಿರ್ದಿಷ್ಟ ಸ್ಥಳಗಳನ್ನೂ ನೇಮಿಸಿದ್ದಾರೆ.


ಆಗ ಮನೆಯ ಯಜಮಾನನಾದ ಆ ಮನುಷ್ಯನು ಅವರ ಬಳಿಗೆ ಹೊರಟುಹೋಗಿ, ಅವರಿಗೆ, “ಹಾಗೆ ಮಾಡಬೇಡಿರಿ. ನನ್ನ ಸಹೋದರರೇ, ದಯಮಾಡಿ ಕೆಟ್ಟತನ ಮಾಡಬೇಡಿರಿ. ಆ ಮನುಷ್ಯನು ನನ್ನ ಮನೆಯಲ್ಲಿ ಪ್ರವೇಶಿಸಿದ್ದರಿಂದ ನೀವು ಅಂಥ ಬುದ್ಧಿಹೀನತೆಯನ್ನು ಮಾಡಬೇಡಿರಿ.


ಇಸ್ರಾಯೇಲರಲ್ಲಿ ಯಾವ ಸ್ತ್ರೀಯೂ ಗುಡಿ ವೇಶ್ಯೆಯಾಗಬಾರದು. ಇಸ್ರಾಯೇಲರಲ್ಲಿ ಯಾವ ಪುರುಷನೂ ಅಂಥ ವೇಶ್ಯೆತನಕ್ಕೆ ಇಳಿಯಬಾರದು.


“ ‘ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ, ಅವರಿಬ್ಬರೂ ಅಸಹ್ಯವಾದದ್ದನ್ನು ಮಾಡಿದವರಾಗಿದ್ದಾರೆ. ಅವರಿಗೆ ನಿಶ್ಚಯವಾಗಿಯೂ ಮರಣದಂಡನೆ ವಿಧಿಸಬೇಕು. ಅವರ ರಕ್ತವು ಅವರ ಮೇಲೆ ಇರುವುದು.


“ ‘ಸ್ತ್ರೀಯೊಂದಿಗೆ ಮಲಗಿಕೊಳ್ಳುವಂತೆ ಪುರುಷನೊಂದಿಗೆ ಮಲಗಬಾರದು. ಅದು ಅಸಹ್ಯವಾದದ್ದು.


ಆದರೆ ಅವರು ಮಲಗುವುದಕ್ಕಿಂತ ಮುಂಚೆ ಸೊದೋಮ್ ಪಟ್ಟಣದ ಜನರು, ಹುಡುಗರು ಮೊದಲುಗೊಂಡು ಮುದುಕರವರೆಗೆ ಎಲ್ಲಾ ಜನರೂ ಪ್ರತಿಯೊಂದು ಮೂಲೆಯಿಂದ ಕೂಡಿ, ಮನೆಯನ್ನು ಸುತ್ತಿಕೊಂಡರು.


ಆಗ ಲೋಟನು ಅವರ ಬಳಿಗೆ ಬಂದು ಬಾಗಿಲನ್ನು ತನ್ನ ಹಿಂದೆ ಮುಚ್ಚಿಕೊಂಡು,


ಗಂಡಸರನ್ನು ಅರಿಯದ ಇಬ್ಬರು ಪುತ್ರಿಯರು ನನಗೆ ಇದ್ದಾರೆ. ಅವರನ್ನು ನಿಮ್ಮ ಬಳಿಗೆ ಕರೆ ತರುವೆನು. ನಿಮ್ಮ ದೃಷ್ಟಿಗೆ ಒಳ್ಳೆಯದೆಂದು ಕಾಣುವ ಹಾಗೆ ನೀವು ಅವರಿಗೆ ಮಾಡಿರಿ. ಆ ಮನುಷ್ಯರಿಗೆ ಮಾತ್ರ ಏನೂ ಮಾಡಬೇಡಿರಿ. ಏಕೆಂದರೆ ಅವರು ನನ್ನ ಮನೆಯ ಆಶ್ರಯಕ್ಕೆ ಬಂದಿದ್ದಾರೆ,” ಎಂದು ಬೇಡಿಕೊಂಡನು.


ಆಗ ಏಬೆದನ ಮಗನಾದ ಗಾಳನೂ, ಅವನ ಸಹೋದರರೂ ಶೆಕೆಮಿಗೆ ದಾಟಿ ಬಂದರು. ಆದರೆ ಶೆಕೆಮಿನ ಹಿರಿಯರು ಅವನಲ್ಲಿ ಭರವಸೆಯಿಟ್ಟು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು