Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:1 - ಕನ್ನಡ ಸಮಕಾಲಿಕ ಅನುವಾದ

1 ಹೀಗೆ ಭೂಮ್ಯಾಕಾಶಗಳೂ ಅವುಗಳಲ್ಲಿರುವ ಸಮಸ್ತವೂ ಸಂಪೂರ್ಣವಾಗಿ ನಿರ್ಮಿತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹೀಗೆ ಭೂಮಿಯು ಆಕಾಶಗಳು ಅವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪರಲೋಕ - ಭೂಲೋಕಗಳೂ ಅವುಗಳಲ್ಲಿ ಇರುವ ಸಮಸ್ತವೂ ಹೀಗೆ ನಿರ್ಮಿತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹೀಗೆ ಭೂಮ್ಯಾಕಾಶಗಳೂ ಅವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಹೀಗೆ ಭೂಮಿಯೂ ಆಕಾಶವೂ ಅವುಗಳಲ್ಲಿರುವ ಪ್ರತಿಯೊಂದೂ ನಿರ್ಮಿತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:1
34 ತಿಳಿವುಗಳ ಹೋಲಿಕೆ  

ಯೆಹೋವ ದೇವರ ವಾಕ್ಯದಿಂದ ಆಕಾಶವೂ, ಅವರ ಬಾಯಿಯ ಉಸಿರಿನಿಂದ ನಕ್ಷತ್ರ ಮಂಡಲವೂ ಉಂಟಾದವು.


ನನಗೂ, ಇಸ್ರಾಯೇಲರಿಗೂ ಇದೇ ಶಾಶ್ವತವಾದ ಗುರುತು. ಏಕೆಂದರೆ ಆರು ದಿವಸಗಳಲ್ಲಿ ಯೆಹೋವ ದೇವರು ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸ ನಿಲ್ಲಿಸಿ, ವಿಶ್ರಮಿಸಿಕೊಂಡರು ಎಂದು ಹೇಳು,’ ” ಎಂದರು.


ಏಕೆಂದರೆ ಆರು ದಿನಗಳಲ್ಲಿ ಯೆಹೋವ ದೇವರು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಉಂಟುಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದ್ದರಿಂದ ಯೆಹೋವ ದೇವರು ಸಬ್ಬತ್ ದಿನವನ್ನು ಆಶೀರ್ವದಿಸಿ, ಅದನ್ನು ಪರಿಶುದ್ಧ ಮಾಡಿದರು.


ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದರು.


ಆಕಾಶಗಳನ್ನು ನಿರ್ಮಿಸಿದ ಯೆಹೋವ ದೇವರು ಇಂತೆನ್ನುತ್ತಾನೆ, “ದೇವರು ತಾನೇ ಭೂಮಿಯನ್ನು ನಿರ್ಮಿಸಿ, ಅದನ್ನು ಉಂಟುಮಾಡಿದನು. ಆತನೇ ಅದನ್ನು ಸ್ಥಾಪಿಸಿದನು. ಅದನ್ನು ವ್ಯರ್ಥವಾಗಿ ಸೃಷ್ಟಿಸದೆ, ಜನನಿವಾಸಕ್ಕಾಗಿಯೇ ರೂಪಿಸಿದನು. ನಾನೇ ಯೆಹೋವ ದೇವರು, ನಾನಲ್ಲದೆ ಇನ್ನಾರೂ ಇಲ್ಲ.


ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನೂ, ಅದರಿಂದ ಉತ್ಪತ್ತಿಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ, ಅದರಲ್ಲಿ ಸಂಚರಿಸುವವರಿಗೆ ಆತ್ಮವನ್ನೂ ಕೊಡುತ್ತೇನೆಂದು ದೇವರಾದ ಯೆಹೋವ ದೇವರು ಹೇಳುತ್ತಾರೆ.


ಇದಲ್ಲದೆ ಹಿಜ್ಕೀಯನು ಯೆಹೋವ ದೇವರ ಮುಂದೆ ಪ್ರಾರ್ಥನೆಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವೊಬ್ಬರೇ ಭೂಮಿಯ ಸಮಸ್ತ ರಾಜ್ಯಗಳಿಗೆ ದೇವರಾಗಿದ್ದೀರಿ. ನೀವೇ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ.


ನಾನು ಭೂಮಿಯನ್ನು ಉಂಟುಮಾಡಿ, ಅದರ ಮೇಲೆ ಮನುಷ್ಯನನ್ನು ಸೃಷ್ಟಿಸಿದೆನು. ನಾನೇ, ನನ್ನ ಕೈಗಳೇ ಆಕಾಶಗಳನ್ನು ವಿಸ್ತರಿಸಿದವು. ನಾನು ಅದರ ನಕ್ಷತ್ರಸೈನ್ಯಕ್ಕೆಲ್ಲಾ ಅಪ್ಪಣೆಕೊಟ್ಟೆನು.


ಆಕಾಶವನ್ನೂ, ಭೂಮಿಯನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದ ದೇವರೇ ಎಂದೆಂದಿಗೂ ನಂಬಿಗಸ್ತರು.


ಒಂದು ಪ್ರವಾದನೆ: ಇಸ್ರಾಯೇಲಿನ ವಿಷಯವಾಗಿ ಯೆಹೋವ ದೇವರ ವಾಕ್ಯ. ಆಕಾಶವನ್ನು ಹರಡಿಸುವಾತರೂ, ಭೂಮಿಯ ಅಸ್ತಿವಾರವನ್ನು ಹಾಕುವಾತರೂ, ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತರೂ ಆದ ಯೆಹೋವ ದೇವರು ಹೇಳುವುದೇನೆಂದರೆ,


ಏಕೆಂದರೆ ಅವರು ಹೇಳಿದ ಮಾತ್ರಕ್ಕೆ ಸಮಸ್ತವೂ ಸೃಷ್ಟಿಯಾಯಿತು; ಅವರು ಆಜ್ಞಾಪಿಸಲು ಭೂಲೋಕವು ಸ್ಥಿರವಾಯಿತು.


ನೀವು ಒಬ್ಬರೇ ದೇವರಾಗಿದ್ದೀರಿ. ನೀವು ಆಕಾಶವನ್ನೂ ಅದರ ಸಮಸ್ತ ಸೈನ್ಯವನ್ನೂ, ಭೂಮಿಯನ್ನೂ, ಅದರಲ್ಲಿರುವ ಪ್ರತಿಯೊಂದನ್ನೂ, ಸಮುದ್ರಗಳನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಉಂಟುಮಾಡಿದ್ದೀರಿ. ಅವುಗಳಿಗೆಲ್ಲಾ ಜೀವ ಕೊಡುವವರು ನೀವೇ. ಇದಲ್ಲದೆ ಆಕಾಶಗಳ ಸೈನ್ಯವು ನಿಮ್ಮನ್ನು ಆರಾಧಿಸುತ್ತವೆ.


ಇದಲ್ಲದೆ ಹೀರಾಮನು, “ಯೆಹೋವ ದೇವರಿಗೋಸ್ಕರ ಆಲಯವನ್ನೂ ತನ್ನ ರಾಜ್ಯಕ್ಕೋಸ್ಕರ ಅರಮನೆಯನ್ನೂ ಕಟ್ಟಿಸುವುದಕ್ಕೆ ಅರಸನಾದ ದಾವೀದನಿಗೆ ಬುದ್ಧಿ ವಿವೇಚನೆಯುಳ್ಳ ಒಬ್ಬ ಮಗನನ್ನು ಕೊಟ್ಟಿದ್ದಾರೆ; ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ.


ಈಗ ದೇವರು ಹೇಳಿದಂತೆಯೇ ವಿಶ್ವಾಸದಲ್ಲಿರುವ ನಾವು ಆ ವಿಶ್ರಾಂತಿಯಲ್ಲಿ ಪ್ರವೇಶಿಸಿದೆವು, “ ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ’ ಎಂದು ನಾನು ಕೋಪದಿಂದ ಪ್ರಮಾಣಮಾಡಿದೆನು,” ಆದರೂ ದೇವರ ಕೆಲಸವು ಜಗತ್ತಿನ ಸೃಷ್ಟಿಯ ಕಾರ್ಯದಿಂದಲೇ ಮುಗಿದಿದೆ.


ಇದನ್ನು ಕೇಳಿ ಅವರೆಲ್ಲರೂ ಒಟ್ಟಾಗಿ ಸ್ವರವೆತ್ತಿ ದೇವರಿಗೆ ಪ್ರಾರ್ಥನೆ ಮಾಡಿದರು: “ಕರ್ತದೇವರೇ, ನೀನು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿರುವಿರಿ.


ಯಾಕೋಬ್ಯರ ಪಾಲಾಗಿರುವವರು ಇವುಗಳ ಹಾಗಲ್ಲ. ಏಕೆಂದರೆ ಅವರು ಎಲ್ಲವನ್ನು ರೂಪಿಸಿದವರೇ, ಇಸ್ರಾಯೇಲ್ ಅವರ ಸ್ವಾಸ್ತ್ಯವಾದ ವಂಶ. ಅವರ ಹೆಸರು ಸೇನಾಧೀಶ್ವರ ಯೆಹೋವ ದೇವರೇ.


ಆದರೆ ದೇವರು ತಮ್ಮ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿ, ತಮ್ಮ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತಮ್ಮ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾರೆ.


“ನಾನು ಹೊಸ ಆಕಾಶವನ್ನೂ, ಹೊಸ ಭೂಮಿಯನ್ನೂ ಸೃಷ್ಟಿಸುತ್ತೇನೆ. ಮುಂಚಿನವುಗಳು ಜ್ಞಾಪಕದಲ್ಲಿರುವುದಿಲ್ಲ ಇಲ್ಲವೆ ಅವು ಸ್ಮರಣೆಗೆ ಬರುವುದಿಲ್ಲ.


ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು, ನಾನು ಅವುಗಳನ್ನು ಕರೆಯಲು, ಅವು ಒಟ್ಟಾಗಿ ನಿಂತುಕೊಂಡವು.


ನೀವು ನಿಮ್ಮ ಕಣ್ಣುಗಳನ್ನು ಆಕಾಶಕ್ಕೆ ಎತ್ತಿ, ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ, ನಿಮ್ಮ ದೇವರಾದ ಯೆಹೋವ ದೇವರು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಕೊಟ್ಟಿದ್ದಾರೆ. ನೀವು ಅವುಗಳಿಗೆ ಅಡ್ಡಬಿದ್ದು, ಮರುಳುಗೊಂಡು ಅವುಗಳನ್ನು ಪೂಜಿಸದಂತೆಯೂ ನೋಡಿಕೊಳ್ಳಿರಿ.


ಯೆಹೋವ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದರು. ಇದೇ ಭೂಮ್ಯಾಕಾಶಗಳ ನಿರ್ಮಾಣ ಚರಿತ್ರೆ.


ದೇವರು ಒಣ ನೆಲಕ್ಕೆ “ಭೂಮಿ” ಎಂದೂ ಕೂಡಿಕೊಂಡಿದ್ದ ನೀರಿಗೆ “ಸಮುದ್ರ” ಎಂದೂ ಹೆಸರಿಟ್ಟರು. ದೇವರು ಅದನ್ನು ಒಳ್ಳೆಯದೆಂದು ಕಂಡರು.


ಅಂದರೆ, ಸೂರ್ಯನನ್ನಾಗಲಿ, ಚಂದ್ರನನ್ನಾಗಲಿ, ಆಕಾಶದ ನಕ್ಷತ್ರಗಳನ್ನಾಗಲಿ, ಬೇರೆ ದೇವರುಗಳನ್ನಾಗಲಿ, ನನ್ನ ಆಜ್ಞೆಗೆ ವಿರೋಧವಾಗಿ ಅವುಗಳನ್ನು ಆರಾಧಿಸಿದರೆ,


ಅವರು ಪ್ರೀತಿ ಮಾಡಿದಂಥ, ಸೇವಿಸಿದಂಥ, ಹಿಂಬಾಲಿಸಿದಂಥ, ಹುಡುಕಿದಂಥ, ಆರಾಧಿಸಿದಂಥ, ಸೂರ್ಯನ ಮುಂದೆಯೂ, ಚಂದ್ರನ ಮುಂದೆಯೂ, ಸಮಸ್ತ ಆಕಾಶ ಸೈನ್ಯದ ಮುಂದೆಯೂ ಅವುಗಳನ್ನು ತೆರೆದಿಡುವರು; ಹೌದು, ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರವಾಗುವುವು.


ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ, ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ, ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ.


ಯೆಹೋವ ದೇವರ ಕೈ ಇವುಗಳನ್ನೆಲ್ಲಾ ಮಾಡಿತೆಂದು ಇವುಗಳಲ್ಲಿ ತಿಳಿಯದಿರುವುದು ಯಾವುದು?


ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ಗ್ರಹಗಳನ್ನೇ ಆರಾಧಿಸುವಂತೆ ಅವರನ್ನು ಬಿಟ್ಟುಬಿಟ್ಟರು. ಇದರ ವಿಷಯವಾಗಿ ಪ್ರವಾದಿಗಳ ಗ್ರಂಥದಲ್ಲಿ: “ ‘ಇಸ್ರಾಯೇಲಿನ ಮನೆತನದವರೇ, ನಲವತ್ತು ವರ್ಷ ಅರಣ್ಯದಲ್ಲಿ ಯಜ್ಞಗಳನ್ನೂ ಕಾಣಿಕೆಗಳನ್ನೂ ಸಮರ್ಪಿಸಿದ್ದು ನನಗಲ್ಲ.


ತಕ್ಷಣವೇ ಆ ದೂತನ ಸಂಗಡ ಇದ್ದ ಪರಲೋಕ ಸೈನ್ಯದ ಸಮೂಹವು ದೇವರನ್ನು ಕೊಂಡಾಡುತ್ತಾ ಹೀಗೆ ಹೇಳಿದರು:


ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವುದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿ ಎಲೆ ಒಣಗಿ, ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಸುಕ್ಕುಗಟ್ಟಿದ ಅಂಜೂರ ಹಣ್ಣುಗಳು ಉದುರುವಂತೆ ತಾರಾಮಂಡಲವೆಲ್ಲಾ ಬಾಡಿ ಬೀಳುವದು.


ದೇವರು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುತ್ತಾರೆ, ಆಕಾಶವನ್ನು ಗುಡಾರದ ಹಾಗೆ ಹರಡಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು