ಆದಿಕಾಂಡ 2:10 - ಕನ್ನಡ ಸಮಕಾಲಿಕ ಅನುವಾದ10 ಏದೆನ್ ಸೀಮೆಯಿಂದ ಒಂದು ನದಿ ಹರಿದು, ತೋಟವನ್ನು ತೋಯಿಸುತ್ತಿತ್ತು. ಅದು ಅಲ್ಲಿಂದ ಹರಿದು ವಿಭಾಗವಾಗಿ, ನಾಲ್ಕು ಉಪನದಿಗಳಾದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಏದೆನ್ ಸೀಮೆಯಲ್ಲಿ ಒಂದು ನದಿ ಹುಟ್ಟಿ ಆ ವನವನ್ನು ತೋಯಿಸುತ್ತಿತು. ಅದು ಅಲ್ಲಿಂದ ನಾಲ್ಕು ಉಪನದಿಗಳಾಗಿ ಕವಲೊಡೆದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಏದೆನ್ ಪ್ರದೇಶದಲ್ಲಿ ಒಂದು ನದಿ ಹುಟ್ಟಿ ಆ ವನಕ್ಕೆ ನೀರೆರೆಯುತ್ತಿತ್ತು. ಅದು ಅಲ್ಲಿಂದ ಹರಿದು ಆಚೆಕಡೆ ನಾಲ್ಕು ಉಪನದಿಗಳಾಗಿ ಕವಲೊಡೆದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಏದೆನ್ ಸೀಮೆಯಲ್ಲಿ ಒಂದು ನದಿ ಹುಟ್ಟಿ ಆ ವನವನ್ನು ತೋಯಿಸುತ್ತಿತ್ತು. ಅದು ಆಚೇ ಕಡೆಯಲ್ಲಿ ಒಡೆದು ನಾಲ್ಕು ಶಾಖೆಗಳಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಏದೆನಿನಿಂದ ಹರಿದುಬರುತ್ತಿದ್ದ ನದಿಯು ತೋಟಕ್ಕೆ ಬೇಕಾದ ನೀರನ್ನು ಒದಗಿಸುತ್ತಿತ್ತು. ಬಳಿಕ ಅದೇ ನದಿಯು ಶಾಖೆಗಳಾಗಿ ಒಡೆದು ನಾಲ್ಕು ಉಪನದಿಗಳಾಯಿತು. ಅಧ್ಯಾಯವನ್ನು ನೋಡಿ |