Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:12 - ಕನ್ನಡ ಸಮಕಾಲಿಕ ಅನುವಾದ

12 ಆ ದೇಶದ ಬಂಗಾರವು ಉತ್ತಮವಾಗಿತ್ತು. ಅಲ್ಲಿ ಬದೋಲಖ ಧೂಪ ಮತ್ತು ಗೋಮೇಧಿಕ ರತ್ನ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ಪ್ರದೇಶದ ಬಂಗಾರವು ಅಮೂಲ್ಯವಾದದ್ದು. ಅಲ್ಲಿ ಬದೋಲಖ ಧೂಪವೂ, ಗೋಮೇಧಿಕದ ಅಮೂಲ್ಯ ರತ್ನವು ಸಿಕ್ಕುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ‘ಬದೋಲಖ’ ಎಂಬ ವಿಶೇಷ ಸಾಂಬ್ರಾಣಿ, ‘ಗೋಮೇಧಿಕ’ ಎಂಬ ರತ್ನವೂ ಅಲ್ಲಿ ದೊರಕುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ದೇಶದ ಬಂಗಾರವು ಶ್ರೇಷ್ಠವಾದದ್ದು; ಅಲ್ಲಿ ಬದೋಲಖ ಧೂಪವೂ ಗೋಮೇಧಿಕ ರತ್ನವೂ ಸಿಕ್ಕುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಈ ದೇಶದಲ್ಲಿ ಒಳ್ಳೆಯ ಬಂಗಾರ ದೊರೆಯುತ್ತಿತ್ತು. ಅಲ್ಲದೆ ಗುಗ್ಗುಲ ಮತ್ತು ಗೋಮೇಧಿಕ ರತ್ನ ಸಹ ದೊರಕುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:12
8 ತಿಳಿವುಗಳ ಹೋಲಿಕೆ  

ದೇವರ ತೋಟವಾದ ಏದೆನಿನಲ್ಲಿ ನೀನಿದ್ದೆ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು, ಸ್ಪಟಿಕ ಚಿನ್ನ ಈ ಅಮೂಲ್ಯವಾದವುಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.


ಜ್ಞಾನವನ್ನು ಓಫಿರಿನ ಬಂಗಾರಕ್ಕೂ, ಅಮೂಲ್ಯವಾದ ಗೋಮೇಧಿಕಕ್ಕೂ, ಇಂದ್ರನೀಲಕ್ಕೂ ಬೆಲೆ ಕಟ್ಟಲಾಗದು.


ಆ ಮನ್ನವು ಕೊತ್ತಂಬರಿ ಬೀಜದ ಹಾಗೆ ಇತ್ತು. ಅದು ಗುಗ್ಗುಲದಂತೆ ಕಾಣಿಸಿತು.


ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಗೋಮೇಧಿಕ, ಸೂರ್ಯಕಾಂತ ಶಿಲೆ ಇವುಗಳನ್ನು ಬಂಗಾರದ ಜವೆಯ ಕಲ್ಲುಗಳಲ್ಲಿ ಸೇರಿಸಬೇಕು.


ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಗೋಮೇಧಿಕ, ಸೂರ್ಯಕಾಂತ ಶಿಲೆ ಇವುಗಳನ್ನು ಬಂಗಾರದ ಜವೆಯ ಕಲ್ಲುಗಳಲ್ಲಿ ಸೇರಿಸಲಾಗಿದ್ದವು.


ಮೊದಲನೆಯದರ ಹೆಸರು ಪೀಶೋನ್; ಅದು ಬಂಗಾರವಿರುವ ಹವೀಲ ದೇಶವನ್ನೆಲ್ಲಾ ಸುತ್ತಿ ಹರಿಯುತ್ತಿತ್ತು.


ಎರಡನೆಯ ನದಿಯ ಹೆಸರು ಗೀಹೋನ್; ಅದು ಕೂಷ್ ದೇಶವನ್ನೆಲ್ಲಾ ಸುತ್ತಿ ಹರಿಯುತ್ತಿತ್ತು.


ಏಫೋದ್ ಕವಚಕ್ಕಾಗಿ ಗೋಮೇಧಿಕಗಳು ಮತ್ತು ಎದೆಪದಕದಲ್ಲಿ ಹಚ್ಚಬೇಕಾದ ನಾನಾ ರತ್ನಗಳು ಇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು