Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:17 - ಕನ್ನಡ ಸಮಕಾಲಿಕ ಅನುವಾದ

17 ಆದರೆ ಒಳ್ಳೆಯದರ, ಕೆಟ್ಟದ್ದರ ತಿಳುವಳಿಕೆಯ ಮರದ ಹಣ್ಣನ್ನು ನೀನು ತಿನ್ನಬಾರದು. ಏಕೆಂದರೆ, ನೀನು ಅದನ್ನು ತಿಂದ ದಿನವೇ ಸಾಯುವಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದರೆ ಒಳಿತು - ಕೆಡಕುಗಳ ಅರಿವನ್ನು ಹುಟ್ಟಿಸುವ ಮರದ ಹಣ್ಣನ್ನು ಮಾತ್ರ ತಿನ್ನಬಾರದು; ತಿಂದೆಯಾದರೆ, ಅದೇ ದಿನ ಸತ್ತುಹೋಗುವೆ,” ಎಂದು ವಿಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಒಳ್ಳೇದರ ಕೆಟ್ಟದ್ದರ ಅರುಹನ್ನು ಹುಟ್ಟಿಸುವ ಮರದ ಹಣ್ಣನ್ನು ಮಾತ್ರ ತಿನ್ನಬಾರದು; ತಿಂದ ದಿನ ಸತ್ತೇಹೋಗುವಿ ಎಂದು ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಒಳ್ಳೆಯದು ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಕೊಡುವ ಮರದ ಹಣ್ಣನ್ನು ಮಾತ್ರ ನೀನು ತಿನ್ನಕೂಡದು. ಒಂದುವೇಳೆ ಆ ಮರದ ಹಣ್ಣನ್ನು ತಿಂದರೆ ನೀನು ಸಾಯುವೆ!” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:17
43 ತಿಳಿವುಗಳ ಹೋಲಿಕೆ  

ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.


ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಸಂಪೂರ್ಣವಾದ ಮೇಲೆ ಮರಣವನ್ನು ಹೆರುತ್ತದೆ.


ನೀನು ಪುನಃ ಮಣ್ಣಿಗೆ ಸೇರುವ ತನಕ, ಬೆವರಿಡುತ್ತಾ ಆಹಾರವನ್ನು ಉಣ್ಣುವೆ. ನೀನು ಮಣ್ಣಿನಿಂದ ತೆಗೆದವನಾಗಿರುವುದರಿಂದ ನೀನು ಮಣ್ಣೇ. ನೀನು ಪುನಃ ಮಣ್ಣಿಗೆ ಸೇರತಕ್ಕವನು.”


ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


ನಿಮ್ಮ ಪಾಪಗಳಿಂದಲೂ ನಿಮ್ಮ ಸುನ್ನತಿಯಿಲ್ಲದ ಪಾಪ ಸ್ವಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಕ್ರಿಸ್ತ ಯೇಸುವಿನೊಂದಿಗೆ ಜೀವಿತರನ್ನಾಗಿ ಮಾಡಿ ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದರು.


ಆದರೆ ಭೋಗಿಯಾಗಿರುವ ವಿಧವೆಯು ಬದುಕಿರುವಾಗಲೂ ಸತ್ತವಳೇ.


ಮೋಶೆಯ ನಿಯಮದ ಕ್ರಿಯೆಗಳನ್ನು ಆಶ್ರಯಿಸಿಕೊಳ್ಳುವವರೆಲ್ಲರೂ ಶಾಪಾಧೀನರಾಗಿದ್ದಾರೆ. ಏಕೆಂದರೆ, “ಮೋಶೆಯ ನಿಯಮದ ಗ್ರಂಥದಲ್ಲಿ ಬರೆದಿರುವವುಗಳನ್ನೆಲ್ಲಾ ನಿರಂತರವಾಗಿ ಕೈಗೊಳ್ಳದಿರುವ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿದೆ.


ಏಕೆಂದರೆ, ಆದಾಮನಲ್ಲಿ ಎಲ್ಲರೂ ಸತ್ತಂತೆಯೇ, ಕ್ರಿಸ್ತನಲ್ಲಿ ಎಲ್ಲರೂ ಜೀವಂತರಾಗುವರು.


ಮರಣಕರವಲ್ಲದ ಪಾಪವನ್ನು ಮಾಡುವ ಸಹೋದರ ಅಥವಾ ಸಹೋದರಿಯನ್ನು ಯಾರಾದರೂ ಕಂಡರೆ, ಆ ಸಹೋದರ ಅಥವಾ ಸಹೋದರಿಯರಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಅವರಿಗೆ ಜೀವವನ್ನು ದಯಪಾಲಿಸುವರು. ಮರಣಕರವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಆದರೆ ಮರಣಕರವಾದ ಪಾಪವೂ ಉಂಟು. ಈ ಮರಣಕರವಾದ ಪಾಪದ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ.


ಮರಣದ ಕೊಂಡಿ ಪಾಪವೇ ಮತ್ತು ಪಾಪದ ಶಕ್ತಿಯು ನಿಯಮವೇ.


ಇಂಥವುಗಳನ್ನು ನಡೆಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೈವವಿಧಿಯನ್ನು ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಹಾಗೆ ಮಾಡುವವರನ್ನು ಮೆಚ್ಚುತ್ತಾರೆ.


ಏಕೆಂದರೆ ಯಾವುದೇ ವ್ಯಕ್ತಿಯ ಸಾವಿನಲ್ಲಿ ನನಗೆ ಸಂತೋಷವಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಆದಕಾರಣ ಮಾನಸಾಂತರಪಟ್ಟು ಬಾಳಿರಿ.


ಅನಂತರ ದೇವರು ಆದಾಮನಿಗೆ ಹೀಗೆ ಹೇಳಿದರು, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, “ನಿನ್ನ ನಿಮಿತ್ತ ಭೂಮಿಗೆ ಶಾಪ ಬಂತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ದುಡಿದು, ಅದರ ಹುಟ್ಟುವಳಿಯನ್ನು ಉಣ್ಣುವೆ.


ಅದಕ್ಕೆ ದೇವರು, “ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದೀಯೋ?” ಎಂದು ಕೇಳಿದರು.


ಆದ್ದರಿಂದ ಹೀಗೆ ಹೇಳಲಾಗಿದೆ: “ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು, ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.”


ನೀವು ಯಾರಾದರೊಬ್ಬರಿಗೆ ವಿಧೇಯರಾಗಿರುವುದಕ್ಕಾಗಿ ಗುಲಾಮರಾಗಿ ನಿಮ್ಮನ್ನು ಒಪ್ಪಿಸಿಕೊಟ್ಟಾಗ, ನೀವು ಅವನಿಗೆ ವಿಧೇಯರಾದ ಗುಲಾಮರಾಗುತ್ತೀರಿ ಎಂಬುದು ನಿಮಗೆ ತಿಳಿಯದೋ? ಮರಣಕ್ಕೆ ನಡೆಸುವ ಪಾಪಕ್ಕೆ ನೀವು ಗುಲಾಮರಾಗಿರಬಹುದು ಇಲ್ಲವೆ ನೀತಿಗೆ ನಡೆಸುವ ವಿಧೇಯತೆಗೆ ಒಳಪಟ್ಟಿರಬಹುದು.


ಯಾವಾಗ ನಾನು ದುಷ್ಟನಿಗೆ, ‘ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವೆ,’ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ಅವನ ದುರ್ಮಾರ್ಗಗಳಿಂದ ತಪ್ಪಿಸಲು ಅವನನ್ನು ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ತನ್ನ ಪಾಪಗಳಿಂದಲೇ ಸಾಯಬೇಕಾಗುವದು; ಆದರೆ ಅವನ ಸಾವಿಗೆ ನಿನ್ನನ್ನೇ ಹೊಣೆಮಾಡುವೆನು.


ಎಲ್ಲಾ ಪ್ರಾಣಗಳು ನನ್ನವೇ, ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ. ಪಾಪ ಮಾಡುವವನೇ ಸಾಯುವನು.


ಆಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲಾದವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.


ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಪವಿತ್ರಾತ್ಮರ ಜೀವದ ನಿಯಮವು ನಿನ್ನನ್ನು ಪಾಪದ ನಿಯಮದಿಂದಲೂ ಮರಣದ ನಿಯಮದಿಂದಲೂ ಬಿಡುಗಡೆ ಮಾಡಿದೆ.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಜಯ ಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.


ನಾನು ದುಷ್ಟನಿಗೆ, ‘ನೀನು ನಿಶ್ಚಯವಾಗಿ ಸಾಯುವೆ’ ಎಂದು ಹೇಳುವಾಗ ಅವನು ಪಾಪದಿಂದ ಬಿಟ್ಟು ತಿರುಗಿಕೊಂಡು ಮತ್ತು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ


ನಾನು ಜೀವ ಮರಣವನ್ನೂ, ಆಶೀರ್ವಾದ ಶಾಪವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆಂಬುದಕ್ಕೆ ಆಕಾಶವನ್ನೂ, ಭೂಮಿಯನ್ನೂ ಈ ಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ. ಆದುದರಿಂದ ನೀವೂ, ನಿಮ್ಮ ಸಂತತಿಯೂ, ಬದುಕಿ ಬಾಳುವಂತೆ ಜೀವವನ್ನೇ ಆಯ್ದುಕೊಳ್ಳಿರಿ.


ನೋಡಿರಿ, ನಾನು ಈ ಹೊತ್ತು ಜೀವ ಸಮೃದ್ಧಿಯನ್ನೂ, ಮರಣ ನಾಶನವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.


ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭ ಪಡೆಯುವವನು ಆಗಿದ್ದರೆ, ಅವನು ಬದುಕುವನೋ? ಅವನು ಬದುಕುವುದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿದ್ದರಿಂದ ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ.


ಆಗ ಅರಸನು ಶಿಮ್ಮಿಯನ್ನು ಕರೆಕಳುಹಿಸಿ ಅವನಿಗೆ, “ನೀನು ಯಾವ ದಿವಸದಲ್ಲಿ ಹೊರಟು ಎಲ್ಲಿಗಾದರೂ ಹೋದರೆ, ಅದೇ ದಿವಸದಲ್ಲಿ ನಿಶ್ಚಯವಾಗಿ ಸಾಯುವೆ, ಎಂದು ಖಂಡಿತವಾಗಿ ತಿಳಿದುಕೋ, ಎಂಬುದಾಗಿ ನಾನು ನಿನಗೆ ದೃಢವಾಗಿ ಹೇಳಿ, ಯೆಹೋವ ದೇವರ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ಮಾಡಿಸಲಿಲ್ಲವೋ? ನಾನು ಹೇಳಿದ ಮಾತುಒಳ್ಳೆಯದೆಂದು ನೀನು ಹೇಳಲಿಲ್ಲವೋ?


ಏಕೆಂದರೆ ನನ್ನ ಪುತ್ರನಾದ ಯೋನಾತಾನನಿಂದಾದರೂ ಉಂಟಾಗಿದ್ದರೆ, ಅವನು ಸತ್ತೇ ಸಾಯುವನೆಂದು ಇಸ್ರಾಯೇಲರನ್ನು ರಕ್ಷಿಸುವ ಯೆಹೋವ ದೇವರ ಮೇಲೆ ಆಣೆ ಇಟ್ಟು ಹೇಳುತ್ತೇನೆ,” ಎಂದನು. ಆದರೆ ಸಮಸ್ತ ಜನರಲ್ಲಿ ಒಬ್ಬನಾದರೂ ಅವನಿಗೆ ಉತ್ತರ ಕೊಡಲಿಲ್ಲ.


ಅವರು, “ದೇವರ ನಿಯಮದ ಈ ಮಾತುಗಳನ್ನು ಸನ್ಮಾನಿಸಿ ಕೈಗೊಳ್ಳದೆ ಇರುವವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ಏಕೆಂದರೆ ಅವರು ಮರುಭೂಮಿಯಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಯೆಹೋವ ದೇವರು ಅವರಿಗೆ ಹೇಳಿದ್ದರು. ಈ ಪ್ರಕಾರ ಯೆಫುನ್ನೆಯ ಮಗ ಕಾಲೇಬನೂ ನೂನನ ಮಗ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನೂ ಉಳಿಯಲಿಲ್ಲ.


ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸಿಬಿಡು. ಏಕೆಂದರೆ ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವಂತೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ, ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ,” ಎಂದರು.


ಯೆಹೋವ ದೇವರು ನೋಟಕ್ಕೆ ರಮ್ಯವೂ ಊಟಕ್ಕೆ ಒಳ್ಳೆಯವೂ ಆದ ಎಲ್ಲಾ ಮರಗಳನ್ನೂ ಭೂಮಿಯಲ್ಲಿ ಬೆಳೆಯುವಂತೆ ಮಾಡಿದರು. ತೋಟದ ಮಧ್ಯದಲ್ಲಿ ಜೀವದ ಮರವನ್ನೂ ಒಳ್ಳೆಯದರ ಮತ್ತು ಕೆಟ್ಟದ್ದರ ತಿಳುವಳಿಕೆಯ ಮರವನ್ನೂ ಬೆಳೆಯುವಂತೆ ಮಾಡಿದರು.


ಪ್ರಥಮ ಪುನರುತ್ಥಾನದಲ್ಲಿ ಸೇರಿರುವವರು ಧನ್ಯರೂ ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಯೇಸುಕ್ರಿಸ್ತರೊಂದಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷಗಳ ಕಾಲ ಆಳುವರು.


ಯೆರೆಮೀಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ, ಜನರೆಲ್ಲರೂ ಅವನನ್ನು ಹಿಡಿದು, “ನೀನು ನಿಶ್ಚಯವಾಗಿ ಸಾಯಬೇಕು.


ಅದಕ್ಕೆ ಅರಸನು, “ಅಹೀಮೆಲೆಕನೇ, ನೀನೂ ನಿನ್ನ ತಂದೆಯ ಮನೆಯ ಸಮಸ್ತರೂ ನಿಶ್ಚಯವಾಗಿ ಸಾಯಲೇಬೇಕು,” ಎಂದನು.


ಏಕೆಂದರೆ ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳವರೆಗೂ ನೀನಾದರೂ, ನಿನ್ನ ರಾಜ್ಯವಾದರೂ ಸ್ಥಿರವಾಗುವುದಿಲ್ಲ. ಆದ್ದರಿಂದ ಈಗ ನೀನು ಅವನನ್ನು ಕರೆಕಳುಹಿಸಿ, ನನ್ನ ಬಳಿಗೆ ತೆಗೆದುಕೊಂಡು ಬಾ. ಏಕೆಂದರೆ ಅವನು ನಿಜವಾಗಿ ಸಾಯಲೇಬೇಕು,” ಎಂದನು.


ಅದಕ್ಕೆ ಸೌಲನು, “ಯೋನಾತಾನನೇ, ನೀನು ನಿಜವಾಗಿ ಸಾಯಬೇಕು; ಇಲ್ಲದಿದ್ದರೆ ದೇವರು ನನಗೆ ಹೆಚ್ಚಾದದ್ದನ್ನು ಮಾಡಲಿ,” ಎಂದನು.


ಯಾವ ದಿವಸದಲ್ಲಿ ನೀನು ಹೊರಟು ಕಿದ್ರೋನೆಂಬ ಹಳ್ಳವನ್ನು ದಾಟುವೆಯೋ, ಆ ದಿವಸದಲ್ಲಿ ನಿಶ್ಚಯವಾಗಿ ಸಾಯುವೆ ಎಂದು ಖಂಡಿತ ತಿಳಿದುಕೋ ಮತ್ತು ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರುವುದು,” ಎಂದನು.


ಮೊದಲು ಯುದ್ಧವನ್ನು ಅರಿಯದೆ ಇದ್ದ ಇಸ್ರಾಯೇಲಿನ ಸಂತತಿಗಳವರು ಅದನ್ನು ಕೂಡ ಕಲಿತುಕೊಳ್ಳುವುದಕ್ಕೂ ಯೆಹೋವ ದೇವರು ಉಳಿಸಿದ ಜನಾಂಗಗಳು ಯಾವುವೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು