Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:19 - ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರು ಭೂಮಿಯಲ್ಲಿರುವ ಎಲ್ಲಾ ಕಾಡುಮೃಗಗಳನ್ನೂ ಆಕಾಶದ ಎಲ್ಲಾ ಪಕ್ಷಿಗಳನ್ನೂ ಮಣ್ಣಿನಿಂದ ರೂಪಿಸಿದ ಮೇಲೆ, ಅವುಗಳಿಗೆ ಮನುಷ್ಯನು ಏನು ಹೆಸರಿಡುವನೋ ಎಂದು ನೋಡುವುದಕ್ಕೆ, ಅವುಗಳನ್ನು ಅವನ ಬಳಿಗೆ ತಂದರು. ಒಂದೊಂದು ಜೀವಿಗೂ ಮನುಷ್ಯನು ಕರೆದದ್ದೇ ಆ ಜೀವಿಗಳಿಗೆಲ್ಲಾ ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಎಲ್ಲ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ ಮಣ್ಣಿನಿಂದ ನಿರ್ಮಿಸಿದ ಅವರು, ಮನುಷ್ಯನು ಇವುಗಳಿಗೆ ಏನೇನು ಹೆಸರಿಡುವನೋ ನೋಡೋಣವೆಂದು ಅವನ ಬಳಿಗೆ ಅವುಗಳನ್ನು ಬರಮಾಡಿದರು. ಆ ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳಿಗೆ ಹೆಸರು ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಗ ಆತನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ ಮಣ್ಣಿನಿಂದ ನಿರ್ಮಿಸಿ - ಇವುಗಳಿಗೆ ಆ ಮನುಷ್ಯನು ಏನೇನು ಹೆಸರಿಡುವನು ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವರಾದ ಯೆಹೋವನು ನೆಲದ ಮಣ್ಣಿನಿಂದ ಭೂಮಿಯ ಮೇಲಿರುವ ಪ್ರತಿಯೊಂದು ಪಶುವನ್ನೂ ಆಕಾಶದಲ್ಲಿರುವ ಪ್ರತಿಯೊಂದು ಪಕ್ಷಿಯನ್ನೂ ನಿರ್ಮಿಸಿ ಮನುಷ್ಯನ ಬಳಿಗೆ ಬರಮಾಡಿದನು. ಅವುಗಳಿಗೆಲ್ಲಾ ಮನುಷ್ಯನು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:19
6 ತಿಳಿವುಗಳ ಹೋಲಿಕೆ  

ದೇವರು ಅವರನ್ನು ಆಶೀರ್ವದಿಸಿ, “ನೀವು ಸಂತಾನವುಳ್ಳವರಾಗಿ, ಸಂಖ್ಯೆಯಲ್ಲಿ ಹೆಚ್ಚಿರಿ, ಭೂಮಿಯನ್ನು ತುಂಬಿಸಿ ಅದನ್ನು ಆಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ನೆಲದ ಮೇಲೆ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ನಡೆಸಿರಿ,” ಎಂದು ಅವರಿಗೆ ಹೇಳಿದರು.


ಭೂಮಿಯ ಎಲ್ಲಾ ಮೃಗಗಳ ಮೇಲೆಯೂ ಆಕಾಶದ ಎಲ್ಲಾ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಸಮುದ್ರದ ಎಲ್ಲಾ ಮೀನುಗಳ ಮೇಲೆಯೂ ನಿಮ್ಮ ಭಯ ಬೆದರಿಕೆಯು ಇರುವುದು. ನಿಮ್ಮ ಕೈಗೆ ಅವು ಕೊಡಲಾಗಿವೆ.


ಪಕ್ಷಿಗಳಲ್ಲಿ ಅವುಗಳ ಜಾತಿಗನುಸಾರವಾಗಿ, ಪ್ರಾಣಿಗಳಲ್ಲಿ ಅವುಗಳ ಜಾತಿಗನುಸಾರವಾಗಿ ಮತ್ತು ನೆಲದ ಮೇಲೆ ಹರಿದಾಡುವ ಸಕಲ ಜೀವಿಗಳಲ್ಲಿ ಅವುಗಳ ಜಾತಿಗನುಸಾರವಾಗಿ ಎರಡೆರಡು ಬದುಕಿಬಾಳಲು ಅವುಗಳನ್ನು ನೀನು ಕಾಪಾಡುವಂತೆ ನಿನ್ನ ಬಳಿಗೆ ಬರುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು