Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:7 - ಕನ್ನಡ ಸಮಕಾಲಿಕ ಅನುವಾದ

7 ಹೀಗಿರಲು ಯೆಹೋವ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ, ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು ಆಗ ಅವನು ಜೀವಿಸುವ ವ್ಯಕ್ತಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹೀಗಿರಲು ದೇವರಾದ ಸರ್ವೇಶ್ವರ ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು. ಆಗ ಮನುಷ್ಯನು ಜೀವಾತ್ಮನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೀಗಿರಲು ಯೆಹೋವದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು; ಆಗ ಮನುಷ್ಯನು ಬದುಕುವ ಪ್ರಾಣಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಹೀಗಿರಲು ದೇವರಾದ ಯೆಹೋವನು ನೆಲದಿಂದ ಮಣ್ಣನ್ನು ತೆಗೆದುಕೊಂಡು ಮನುಷ್ಯನನ್ನು ರೂಪಿಸಿ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಸಜೀವಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:7
33 ತಿಳಿವುಗಳ ಹೋಲಿಕೆ  

“ಮೊದಲನೆಯ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು,” ಎಂದು ಬರೆದಿದೆಯಲ್ಲವೇ? ಕಡೇ ಆದಾಮನು ಜೀವಕೊಡುವ ಆತ್ಮನಾದನು.


ದೇವರ ಆತ್ಮರು ನನ್ನನ್ನು ಉಂಟುಮಾಡಿದರು. ಸರ್ವಶಕ್ತರ ಶ್ವಾಸವೇ ನನಗೆ ಜೀವವನ್ನು ಕೊಟ್ಟಿತು.


ಆಮೇಲೆ ಮಣ್ಣಿನ ದೇಹ ಅದು ಇದ್ದ ಹಾಗೆಯೇ ಭೂಮಿಗೆ ಸೇರುವುದು. ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂದಿರುಗುವುದು.


ಆದರೆ ಈಗ ಯೆಹೋವ ದೇವರೇ, ನಮ್ಮ ತಂದೆಯು ನೀನೇ, ನಾವು ಮಣ್ಣು. ನೀನು ನಮ್ಮ ಕುಂಬಾರನು. ನಾವೆಲ್ಲರೂ ನಿನ್ನ ಕೈಕೆಲಸಗಳು.


ದೇವರಿಗೆ ಏನಾದರೂ ಅವಶ್ಯಕತೆಯಿರುವಂತೆ ಮಾನವ ಹಸ್ತಗಳ ಸೇವೆಯು ಅಗತ್ಯವಿರುವುದಿಲ್ಲ. ದೇವರೇ ಎಲ್ಲರಿಗೂ ಜೀವವನ್ನೂ ಉಸಿರನ್ನೂ ಪ್ರತಿಯೊಂದನ್ನೂ ದಯಪಾಲಿಸಿರುವುದರಿಂದ,


ಮೊದಲನೆಯ ಮನುಷ್ಯ, ಭೂಮಿಯ ಮಣ್ಣಿನವನಾಗಿದ್ದಾನೆ, ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು.


ನೀನು ಪುನಃ ಮಣ್ಣಿಗೆ ಸೇರುವ ತನಕ, ಬೆವರಿಡುತ್ತಾ ಆಹಾರವನ್ನು ಉಣ್ಣುವೆ. ನೀನು ಮಣ್ಣಿನಿಂದ ತೆಗೆದವನಾಗಿರುವುದರಿಂದ ನೀನು ಮಣ್ಣೇ. ನೀನು ಪುನಃ ಮಣ್ಣಿಗೆ ಸೇರತಕ್ಕವನು.”


“ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ; ದೇವರು ಊದಿದ ಶ್ವಾಸವು ನನ್ನ ಮೂಗಿನಲ್ಲಿ ಆಡುತ್ತಿದೆ.


ಒಣನೆಲದ ಮೇಲಿದ್ದ ಮೂಗಿನಿಂದ ಶ್ವಾಸಬೀಡುವ ಜೀವಿಗಳೆಲ್ಲವೂ ಸತ್ತು ಹೋದವು.


ಒಂದು ಪ್ರವಾದನೆ: ಇಸ್ರಾಯೇಲಿನ ವಿಷಯವಾಗಿ ಯೆಹೋವ ದೇವರ ವಾಕ್ಯ. ಆಕಾಶವನ್ನು ಹರಡಿಸುವಾತರೂ, ಭೂಮಿಯ ಅಸ್ತಿವಾರವನ್ನು ಹಾಕುವಾತರೂ, ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತರೂ ಆದ ಯೆಹೋವ ದೇವರು ಹೇಳುವುದೇನೆಂದರೆ,


ದೇವರು ನಮ್ಮ ಪ್ರಕೃತಿಯನ್ನು ಬಲ್ಲವರಾಗಿದ್ದಾರೆ; ನಾವು ಧೂಳಾಗಿದ್ದೇವೆಂದು ಅವರು ನೆನಪುಮಾಡಿ ಕೊಳ್ಳುತ್ತಾರೆ.


ಯೆಹೋವ ದೇವರೇ ದೇವರೆಂದು ತಿಳುಕೊಳ್ಳಿರಿ; ಅವರೇ ನಮ್ಮನ್ನು ಉಂಟುಮಾಡಿದ್ದಾರೆ; ನಾವು ಅವರ ಜನರೂ, ಅವರು ಮೇಯಿಸುವ ಕುರಿ ಮಂದೆಯೂ ಆಗಿದ್ದೇವೆ.


ಎಲೈ, ಮನುಷ್ಯನೇ, ದೇವರಿಗೆ ಎದುರಾಗಿ ಮಾತನಾಡಲು ನೀನು ಯಾರು? “ರೂಪಿಸಿರುವುದು ರೂಪಿಸಿದವನಿಗೆ, ‘ಏಕೆ ನನ್ನನ್ನು ಹೀಗೆ ರೂಪಿಸಿದೆ?’ ” ಎಂದು ಪ್ರಶ್ನಿಸಬಹುದೋ?


ಉಸಿರು ಇರುವವರೆಗೆ ಬದುಕುವ ನರಮಾನವನ ಮೇಲಿನ ಭರವಸೆಯನ್ನು ಬಿಟ್ಟುಬಿಡಿರಿ. ಏಕೆಂದರೆ ಅವನ ಗಣನೆ ಎಷ್ಟರವರೆಗೆ?


ಆದ್ದರಿಂದ ಅವನು ಉತ್ಪತ್ತಿಯಾದ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕೆ ಯೆಹೋವ ದೇವರು ಏದೆನ್ ತೋಟದೊಳಗಿಂದ ಅವನನ್ನು ಹೊರಗೆ ಕಳುಹಿಸಿಬಿಟ್ಟರು.


ಇದು ಮಾತ್ರವಲ್ಲದೆ, ನಮ್ಮನ್ನು ಶಿಕ್ಷಿಸಿದ ಇಹಲೋಕದ ಶಾರೀರಿಕ ತಂದೆಗಳನ್ನು ನಾವು ಸನ್ಮಾನಿಸಿದೆವಷ್ಟೆ. ಆತ್ಮಗಳಿಗೆ ತಂದೆಯಾದ ದೇವರಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?


ಆಗ ಅವರು ಬೋರಲು ಬಿದ್ದು, “ದೇವರೇ, ಎಲ್ಲಾ ಮಾನವರ ಆತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀವು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳುತ್ತೀರೋ?” ಎಂದರು.


ಮನುಷ್ಯನ ಆತ್ಮವು ಯೆಹೋವ ದೇವರ ದೀಪವಾಗಿದೆ. ಅದು ಅವನ ಅಂತರಂಗವನ್ನು ಶೋಧಿಸುತ್ತದೆ.


ನೋಡು, ದೇವರ ದೃಷ್ಟಿಯಲ್ಲಿ ನಾನು ನಿನ್ನಂತೆಯೇ ಇದ್ದೇನೆ; ನಾನು ಸಹ ಜೇಡಿಮಣ್ಣಿನಿಂದ ರೂಪಿತವಾಗಿದ್ದೇನೆ.


ನಾವು ಜೀವಿಸುತ್ತಿರುವ ನಮ್ಮ ದೇಹವೆಂಬ ಗುಡಾರವು ನಾಶವಾಗಿ ಹೋದರೂ, ಪರಲೋಕದಲ್ಲಿ ಶಾಶ್ವತವಾದ ನಿವಾಸವು ನಮಗೆ ಉಂಟೆಂದು ಬಲ್ಲೆವು. ಅದು ಮಾನವರ ಕೈಯಿಂದ ಕಟ್ಟಿದ ನಿವಾಸವಲ್ಲ, ದೇವರಿಂದಲೇ ನಿರ್ಮಿತವಾದದ್ದಾಗಿದೆ.


ಆದರೆ ಸರ್ವೋನ್ನತವಾದ ಈ ಶಕ್ತಿಯೂ ನಮ್ಮಿಂದಲ್ಲ ದೇವರಿಂದಲೇ ಬಂದಿರುತ್ತದೆ ಎಂಬುದನ್ನು ತೋರಿಸುವಂತೆ ಮಣ್ಣಿನ ಮಡಕೆಗಳಾದ ನಮ್ಮಲ್ಲಿ ನಿಕ್ಷೇಪವಿದೆ.


ಯೇಸು ಇದನ್ನು ಹೇಳಿ ಅವರ ಮೇಲೆ ಉಸಿರೂದಿ ಅವರಿಗೆ, “ನೀವು ಪವಿತ್ರಾತ್ಮರನ್ನು ಪಡೆದುಕೊಳ್ಳಿರಿ.


ಧೂಳಿನಲ್ಲಿರುವ ಅಸ್ತಿವಾರದ ಮೇಲೆ ಮಣ್ಣಿನ ಮನೆಗಳ ನಿವಾಸಿಗಳು, ನುಸಿಗಿಂತಲೂ ಹೆಚ್ಚಾಗಿ ಜಜ್ಜಿಹೋದವರು, ಇನ್ನೂ ಹೆಚ್ಚಾಗಿ ದಂಡನೆಗೆ ಒಳಪಡುವರಲ್ಲವೇ?


“ಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಯೆಹೋವ ದೇವರು ಈ ಜನಸಮೂಹದ ಮೇಲೆ ಒಬ್ಬ ಮನುಷ್ಯನನ್ನು ನೇಮಿಸಿ ಇಡಲಿ.


ಹರಿಯುವುದಕ್ಕೆ ಒಂದು ಸಮಯ, ಹೊಲಿಯುವುದಕ್ಕೆ ಒಂದು ಸಮಯ. ಸುಮ್ಮನೆ ಇರುವುದಕ್ಕೆ ಒಂದು ಸಮಯ, ಮಾತಾಡುವುದಕ್ಕೆ ಒಂದು ಸಮಯ.


ಏಕೆಂದರೆ ಮೊದಲು ನಿರ್ಮಿತನಾದವನು ಆದಾಮನು, ಆಮೇಲೆ ಹವ್ವಳು.


ಆದರೆ ಭೂಮಿಯಿಂದ ಮಂಜು ಏರಿಬಂದು ನೆಲವನ್ನೆಲ್ಲಾ ತೋಯಿಸಿತು.


ಯಾರ ವಿಷಯವಾಗಿ ನಾವು ಅವನ ನೆರಳಿನ ಕೆಳಗೆ ಬೇರೆ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿಕೊಂಡೆವೋ, ನಮ್ಮ ಮೂಗಿನ ಉಸಿರಾದ ಆ ಯೆಹೋವ ದೇವರ ಅಭಿಷಿಕ್ತನು ಅವರ ಬಲೆಗಳಲ್ಲಿ ಸಿಕ್ಕಿಕೊಂಡನು.


ಸಾರ್ವಭೌಮ ಯೆಹೋವ ದೇವರು ಈ ಎಲುಬುಗಳಿಗೆ ಹೀಗೆ ಹೇಳುತ್ತಾರೆ: ಇಗೋ, ನಾನು ನಿಮ್ಮಲ್ಲಿ ಉಸಿರನ್ನು ಬರಮಾಡುತ್ತೇನೆ. ನೀವು ಬದುಕುವಿರಿ;


ಹೀಗೆ ದೇವರು ಮನುಷ್ಯನನ್ನು ತಮ್ಮ ಸ್ವರೂಪದಲ್ಲಿ ಸೃಷ್ಟಿ ಮಾಡಿದರು. ದೇವರ ಸ್ವರೂಪದಲ್ಲಿಯೇ ಅವರನ್ನು ಸೃಷ್ಟಿ ಮಾಡಿದರು. ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿ ಮಾಡಿದರು.


ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ ಮಾಂಸವನ್ನು ತಂದು ಮತ್ತು ಚರ್ಮದಿಂದ ಮುಚ್ಚಿ ನಿಮ್ಮೊಳಗೆ ಉಸಿರನ್ನು ಕೊಟ್ಟು ಬದುಕಿಸುತ್ತೇನೆ ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು