ಆದಿಕಾಂಡ 2:9 - ಕನ್ನಡ ಸಮಕಾಲಿಕ ಅನುವಾದ9 ಯೆಹೋವ ದೇವರು ನೋಟಕ್ಕೆ ರಮ್ಯವೂ ಊಟಕ್ಕೆ ಒಳ್ಳೆಯವೂ ಆದ ಎಲ್ಲಾ ಮರಗಳನ್ನೂ ಭೂಮಿಯಲ್ಲಿ ಬೆಳೆಯುವಂತೆ ಮಾಡಿದರು. ತೋಟದ ಮಧ್ಯದಲ್ಲಿ ಜೀವದ ಮರವನ್ನೂ ಒಳ್ಳೆಯದರ ಮತ್ತು ಕೆಟ್ಟದ್ದರ ತಿಳುವಳಿಕೆಯ ಮರವನ್ನೂ ಬೆಳೆಯುವಂತೆ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ನೋಟಕ್ಕೆ ರಮ್ಯವೂ ಊಟಕ್ಕೆ ರುಚಿಕರವೂ ಆದ ನಾನಾ ತರದ ಮರಗಳನ್ನು ದೇವರಾದ ಸರ್ವೇಶ್ವರ ಅಲ್ಲಿ ಬೆಳೆಯ ಮಾಡಿದರು. ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನು ಹಾಗು ಒಳಿತು - ಕೆಡಕುಗಳ ಅರಿವನ್ನು ಮೂಡಿಸುವ ವೃಕ್ಷವನ್ನು ಬೆಳೆಯಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮತ್ತು ಯೆಹೋವದೇವರು ನೋಟಕ್ಕೆ ರಮ್ಯವಾಗಿಯೂ ಊಟಕ್ಕೆ ಅನುಕೂಲವಾಗಿಯೂ ಇರುವ ಎಲ್ಲಾ ತರದ ಮರಗಳನ್ನು ಆ ಭೂವಿುಯಲ್ಲಿ ಬೆಳೆಯ ಮಾಡಿದನು. ಅದಲ್ಲದೆ ಆ ವನಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರುಹನ್ನು ಹುಟ್ಟಿಸುವ ವೃಕ್ಷವನ್ನೂ ಬೆಳೆಯಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದೇವರಾದ ಯೆಹೋವನು ಆ ತೋಟದಲ್ಲಿ ಸುಂದರವಾದ ಪ್ರತಿಯೊಂದು ಮರವನ್ನು ಮತ್ತು ಊಟಕ್ಕೆ ಬೇಕಾದ ಒಳ್ಳೆಯ ಹಣ್ಣುಗಳನ್ನು ಬಿಡುವ ಪ್ರತಿಯೊಂದು ಮರವನ್ನು ಬೆಳೆಸಿದನು. ಇದಲ್ಲದೆ ತೋಟದ ಮಧ್ಯಭಾಗದಲ್ಲಿ ಜೀವದಾಯಕ ಮರವನ್ನೂ ಅಲ್ಲದೆ ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಕೊಡುವ ಮರವನ್ನೂ ಬೆಳೆಸಿದನು. ಅಧ್ಯಾಯವನ್ನು ನೋಡಿ |