Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 20:11 - ಕನ್ನಡ ಸಮಕಾಲಿಕ ಅನುವಾದ

11 ಅದಕ್ಕೆ ಅಬ್ರಹಾಮನು, “ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ನೆನಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದಕ್ಕೆ ಅಬ್ರಹಾಮನು, “ಈ ಸ್ಥಳದವರು ದೇವರ ಭಯಭಕ್ತಿ ಇಲ್ಲದವರಾಗಿ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರೆಂದು ಭಾವಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದಕ್ಕೆ ಅಬ್ರಹಾಮನು, “ಇಲ್ಲಿಯ ಜನರಿಗೆ ದೇವರಲ್ಲಿ ಭಯಭಕ್ತಿಯಿಲ್ಲವೆಂದೂ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರು ಎಂದೂ ಭಾವಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅದಕ್ಕೆ ಅಬ್ರಹಾಮನು - ಈ ಸ್ಥಳದವರು ದೇವರ ಭಯವಿಲ್ಲದವರಾಗಿ ನನ್ನ ಹೆಂಡತಿಯ ನಿವಿುತ್ತ ನನ್ನನ್ನು ಕೊಂದಾರೆಂದು ನೆನಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅಬ್ರಹಾಮನು ಅವನಿಗೆ, “ನನಗೆ ಹೆದರಿಕೆಯಾಗಿತ್ತು. ಈ ಸ್ಥಳದವರಿಗೆ ದೇವರಲ್ಲಿ ಭಯಭಕ್ತಿಯಿಲ್ಲವೆಂದು ನಾನು ಭಾವಿಸಿಕೊಂಡೆ. ಯಾರಾದರೂ ನನ್ನನ್ನು ಕೊಂದು ಸಾರಳನ್ನು ತೆಗೆದುಕೊಳ್ಳಬಹುದೆಂದು ಯೋಚಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 20:11
16 ತಿಳಿವುಗಳ ಹೋಲಿಕೆ  

ಪ್ರೀತಿ ಮತ್ತು ಸತ್ಯತೆಗಳಿಂದ ಪಾಪಕ್ಕೆ ಪ್ರಾಯಶ್ಚಿತ್ತವಾಗುತ್ತದೆ. ಯೆಹೋವ ದೇವರ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.


ಆಗ ನೀನು ಯೆಹೋವ ದೇವರ ಭಯಭಕ್ತಿಯನ್ನು ತಿಳಿದುಕೊಳ್ಳುವೆ; ದೇವರ ಅರಿವನ್ನು ಕಂಡುಕೊಳ್ಳುವೆ.


ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು, ನಾಲ್ವತ್ತು ಬೆಳ್ಳಿನಾಣ್ಯ ಮೌಲ್ಯದ ರೊಟ್ಟಿಯನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು. ಅವರ ಸೇವಕರು ಸಹ ಜನರ ಮೇಲೆ ದೊರೆತನ ನಡೆಸುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹಾಗೆ ಮಾಡಲಿಲ್ಲ.


ಆ ಸ್ಥಳದ ಮನುಷ್ಯರು ಅವನ ಹೆಂಡತಿಯ ವಿಷಯದಲ್ಲಿ ವಿಚಾರಿಸಿದಾಗ ಅವನು, ರೆಬೆಕ್ಕಳು ನೋಟಕ್ಕೆ ಚೆಲುವೆಯಾಗಿದ್ದುದರಿಂದ ಆಕೆಯ ನಿಮಿತ್ತ ಆ ಸ್ಥಳದ ಜನರು ತನ್ನನ್ನು ಕೊಂದಾರೆಂದು, ಆಕೆ ತನ್ನ ಹೆಂಡತಿಯೆಂದು ಹೇಳುವುದಕ್ಕೆ ಅಂಜಿ ಅವನು, “ಆಕೆಯು ನನ್ನ ತಂಗಿ” ಎಂದನು.


ಹೀಗಿರುವುದರಿಂದ ಈಜಿಪ್ಟಿನವರು ನಿನ್ನನ್ನು ಕಂಡು, ‘ಈಕೆಯು ಅವನ ಹೆಂಡತಿ’ ಎಂದು ಹೇಳಿ, ನನ್ನನ್ನು ಕೊಂದುಹಾಕಿ, ನಿನ್ನನ್ನು ಉಳಿಸುವರು.


ದೇವರು ಮನುಷ್ಯನಿಗೆ, “ಇಗೋ, ಕರ್ತ ದೇವರಲ್ಲಿ ಭಯಭಕ್ತಿ ಇಡುವುದೇ ಜ್ಞಾನ! ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ,” ಎಂದು ಹೇಳಿದರು.


ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನಾಗಿದ್ದೇನೆ.


ಯೆಹೋವ ದೇವರ ದೂತನು ಅಬ್ರಹಾಮನಿಗೆ, “ಹುಡುಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ; ಏಕೆಂದರೆ ನೀನು ದೇವರಿಗೆ ಭಯಪಡುತ್ತೀ ಎಂದು ಈಗ ನಾನು ತಿಳಿದಿದ್ದೇನೆ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವುದಕ್ಕೆ ಹಿಂಜರಿಯಲಿಲ್ಲ,” ಎಂದು ಹೇಳಿದನು.


“ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ.”


ಕೆಟ್ಟದ್ದನ್ನು ಹಗೆ ಮಾಡುವುದೇ ಯೆಹೋವ ದೇವರ ಭಯವಾಗಿದೆ; ಗರ್ವ, ಅಹಂಕಾರ, ಕೆಟ್ಟನಡವಳಿಕೆ, ವಕ್ರ ಭಾಷಣಗಳನ್ನು ನಾನು ಹಗೆಮಾಡುತ್ತೇನೆ.


ಯೆಹೋವ ದೇವರ ಭಯವೇ ಜ್ಞಾನದ ಮೂಲವಾಗಿದೆ. ಆದರೆ ಮೂರ್ಖರು ಜ್ಞಾನವನ್ನೂ ಶಿಕ್ಷಣವನ್ನೂ ಅಸಡ್ಡೆ ಮಾಡುತ್ತಾರೆ.


ದುಷ್ಟತ್ವವನ್ನು ನಡೆಸುವವರಿಗೆ ಏನೂ ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ರೊಟ್ಟಿಯಂತೆ ತಿಂದು ಬಿಡುತ್ತಾರೆಯೋ? ಆದರೆ ಅವರು ಯೆಹೋವ ದೇವರಿಗೆ ಎಂದೂ ಮೊರೆಯಿಡುವುದಿಲ್ಲ.


ಊಚ್ ದೇಶದಲ್ಲಿ ಯೋಬ ಎಂಬ ಮನುಷ್ಯನಿದ್ದನು. ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೆಟ್ಟದ್ದನ್ನು ತೊರೆಯುವವನೂ ಆಗಿದ್ದನು.


ಇದಲ್ಲದೆ ಅಬೀಮೆಲೆಕನು ಅಬ್ರಹಾಮನಿಗೆ, “ನೀನು ಹೀಗೆ ಮಾಡಿದ ಕಾರಣವೇನು?” ಎಂದು ವಿಚಾರಿಸಿದನು.


ಇದಲ್ಲದೆ ನಿಜವಾಗಿಯೂ ಅವಳು ನನ್ನ ತಂಗಿ, ಆದರೆ ನನ್ನ ತಾಯಿಯ ಮಗಳಲ್ಲ, ನನ್ನ ತಂದೆಯ ಮಗಳೇ, ನನಗೆ ಹೆಂಡತಿಯಾದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು