ಆದಿಕಾಂಡ 20:17 - ಕನ್ನಡ ಸಮಕಾಲಿಕ ಅನುವಾದ17 ಆಗ ಅಬ್ರಹಾಮನು ದೇವರಿಗೆ ಪ್ರಾರ್ಥನೆಮಾಡಿದನು. ದೇವರು ಅಬೀಮೆಲೆಕನನ್ನೂ, ಅವನ ಹೆಂಡತಿಯನ್ನೂ ದಾಸಿಯರನ್ನೂ ವಾಸಿಮಾಡಿದರು. ಆದ್ದರಿಂದ ಅವರಿಗೆ ಮಕ್ಕಳಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ತರುವಾಯ ಅಬ್ರಹಾಮನು ದೇವರನ್ನು ಬೇಡಿಕೊಳ್ಳಲು ದೇವರು ಅಬೀಮೆಲೆಕನನ್ನೂ, ಅವನ ಪತ್ನಿಯನ್ನೂ ಮತ್ತು ದಾಸಿಯರನ್ನೂ ವಾಸಿಮಾಡಿದ್ದರಿಂದ ಅವರಿಗೆ ಮಕ್ಕಳಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ತರುವಾಯ ಅಬ್ರಹಾಮನು ಅಬೀಮೆಲೆಕನಿಗೋಸ್ಕರ ದೇವರಲ್ಲಿ ಪ್ರಾರ್ಥನೆ ಮಾಡಿದನು. ದೇವರು ಅಬೀಮೆಲೆಕನನ್ನು, ಅವನ ಪತ್ನಿಯನ್ನು ಹಾಗೂ ದಾಸಿಯರನ್ನು ಗುಣಪಡಿಸಿದನು; ಅವರಿಗೆ ಮಕ್ಕಳಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ತರುವಾಯ ಅಬ್ರಹಾಮನು ದೇವರನ್ನು ಬೇಡಿಕೊಳ್ಳಲು ದೇವರು ಅಬೀಮೆಲೆಕನನ್ನೂ ಅವನ ಪತ್ನಿಯನ್ನೂ ದಾಸಿಯರನ್ನೂ ವಾಸಿಮಾಡಿದ್ದರಿಂದ ಅವರಿಗೆ ಮಕ್ಕಳಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17-18 ದೇವರು ಅಬೀಮೆಲೆಕನ ಕುಟುಂಬದಲ್ಲಿರುವ ಎಲ್ಲ ಸ್ತ್ರೀಯರನ್ನು ಬಂಜೆಯರನ್ನಾಗಿ ಮಾಡಿದ್ದನು. ಅಬ್ರಹಾಮನ ಹೆಂಡತಿಯಾದ ಸಾರಳನ್ನು ಅಬೀಮೆಲೆಕನು ಕರೆಸಿಕೊಂಡಿದ್ದೇ ಅದಕ್ಕೆ ಕಾರಣ. ಅಬ್ರಹಾಮನು ದೇವರಲ್ಲಿ ಪ್ರಾರ್ಥಿಸಿದಾಗ ದೇವರು ಅಬೀಮೆಲೆಕನನ್ನೂ ಅವನ ಹೆಂಡತಿಯನ್ನೂ ಸೇವಕಿಯರನ್ನೂ ಗುಣಪಡಿಸಿದ್ದರಿಂದ ಅವರಿಗೆ ಮಕ್ಕಳಾದರು. ಅಧ್ಯಾಯವನ್ನು ನೋಡಿ |
ಆದುದರಿಂದ ಈಗ ನೀವು ಏಳು ಹೋರಿಗಳನ್ನು, ಏಳು ಟಗರುಗಳನ್ನು ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಬನ್ನಿರಿ. ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ; ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ದಂಡಿಸದಂತೆ, ಅವನ ಪ್ರಾರ್ಥನೆಯನ್ನು ಸ್ವೀಕರಿಸುವೆನು. ನೀವು ನನ್ನ ದಾಸನಾದ ಯೋಬನಂತೆ ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ,” ಎಂದು ಹೇಳಿದರು.