ಆದಿಕಾಂಡ 20:2 - ಕನ್ನಡ ಸಮಕಾಲಿಕ ಅನುವಾದ2 ಗೆರಾರಿನಲ್ಲಿ ಅಬ್ರಹಾಮನು ತನ್ನ ಹೆಂಡತಿ ಸಾರಳ ವಿಷಯವಾಗಿ, “ಅವಳು ನನ್ನ ತಂಗಿ,” ಎಂದು ಹೇಳಿದ್ದನು. ಆದ್ದರಿಂದ ಗೆರಾರಿನ ಅರಸ ಅಬೀಮೆಲೆಕನು ಸಾರಳನ್ನು ಕರೆಯಿಸಿ ತನ್ನ ಅರಮನೆಗೆ ತೆಗೆದುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವನು ತನ್ನ ಹೆಂಡತಿಯಾದ ಸಾರಳನ್ನು ತಂಗಿಯೆಂದು ಹೇಳಿಕೊಂಡದ್ದರಿಂದ, ಗೆರಾರಿನ ಅರಸನಾದ ಅಬೀಮೆಲೆಕನು ಆಕೆಯನ್ನು ಕರೆಸಿ ತನ್ನ ಮನೆಯಲ್ಲಿ ಇರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅಲ್ಲಿದ್ದಾಗ ಅಬ್ರಹಾಮನು ತನ್ನ ಹೆಂಡತಿ ಸಾರಳು ತನಗೆ ತಂಗಿಯಾಗಬೇಕೆಂದು ಹೇಳಿಕೊಂಡನು. ಈ ಕಾರಣ ಗೆರಾರಿನ ಅರಸನಾದ ಅಬೀಮೆಲೆಕನು ಆಕೆಯನ್ನು ಕರೆಸಿ ತನ್ನ ಮನೆಯಲ್ಲಿ ಸೇರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವನು ತನ್ನ ಹೆಂಡತಿಯಾದ ಸಾರಳನ್ನು ತಂಗಿಯೆಂದು ಹೇಳಿದನಾದ್ದರಿಂದ ಗೆರಾರಿನ ಅರಸನಾದ ಅಬೀಮೆಲೆಕನು ಕರೇಕಳುಹಿಸಿ ಆಕೆಯನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅಬ್ರಹಾಮನು ಗೆರಾರಿನಲ್ಲಿದ್ದಾಗ ಸಾರಳು ತನಗೆ ತಂಗಿಯಾಗಬೇಕೆಂದು ಹೇಳಿಕೊಂಡನು. ಗೆರಾರಿನ ರಾಜನಾಗಿದ್ದ ಅಬೀಮೆಲೆಕನು ಇದನ್ನು ಕೇಳಿ ಸಾರಳನ್ನು ಪಡೆದುಕೊಳ್ಳಲು ಬಯಸಿದನು. ಬಳಿಕ ಅವನು ಕೆಲವು ಸೇವಕರನ್ನು ಕಳುಹಿಸಿ ಆಕೆಯನ್ನು ಕರೆಯಿಸಿಕೊಂಡನು. ಅಧ್ಯಾಯವನ್ನು ನೋಡಿ |