ದಾವೀದನು ದೇವರಿಗೆ, “ಜನರಲ್ಲಿ ಯುದ್ಧ ವೀರರನ್ನು ಲೆಕ್ಕಮಾಡಲು ಆಜ್ಞಾಪಿಸಿದವನು ನಾನಲ್ಲವೋ? ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಈ ಕೆಟ್ಟದ್ದನ್ನು ಮಾಡಿದೆನು, ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನನ್ನ ಯೆಹೋವ ದೇವರೇ, ನಿಮ್ಮ ಹಸ್ತವು ನಿಮ್ಮ ಜನರನ್ನು ಬಾಧಿಸದೆ, ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು.
ಹಾಗಾದರೆ, ತನ್ನ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದ ನಿರ್ದೋಷಿಯನ್ನು ಕೊಲೆಮಾಡಿದ ದುಷ್ಟ ಮನುಷ್ಯರನ್ನು ಎಷ್ಟೋ ಹೆಚ್ಚಾಗಿ ಕೊಲ್ಲಿಸುವೆನು. ಈಗ ನಾನು ನಿಮ್ಮ ಕೈಯಿಂದ ಅವನ ರಕ್ತ ವಿಚಾರಣೆ ಮಾಡಿ, ನಿಮ್ಮನ್ನು ಭೂಮಿಯಿಂದ ತೆಗೆದುಬಿಡುವೆನು,” ಎಂದನು.
ಅದಕ್ಕೆ ದೇವರು ಕನಸಿನಲ್ಲಿ ಅವನಿಗೆ, “ಹೌದು, ನೀನು ಇದನ್ನು ಯಥಾರ್ಥವಾದ ಹೃದಯದಿಂದಲೇ ಮಾಡಿದ್ದೀಯೆ ಎಂದು ನನಗೂ ತಿಳಿದಿದೆ. ಆದ್ದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು, ಆಕೆಯನ್ನು ಮುಟ್ಟಗೊಡಿಸಲಿಲ್ಲ.
ಅವನು ನನಗೆ, ‘ಅವಳು ನನ್ನ ತಂಗಿ,’ ಎಂದು ಹೇಳಲಿಲ್ಲವೋ? ಅವಳೇ, ‘ಅವನು ನನ್ನ ಅಣ್ಣ,’ ಎಂದು ಹೇಳಿದ್ದಾಳೆ. ಆದ್ದರಿಂದ ನಾನು ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಹಸ್ತದಿಂದಲೂ ಇದನ್ನು ಮಾಡಿದ್ದೇನೆ,” ಎಂದನು.