Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 20:6 - ಕನ್ನಡ ಸಮಕಾಲಿಕ ಅನುವಾದ

6 ಅದಕ್ಕೆ ದೇವರು ಕನಸಿನಲ್ಲಿ ಅವನಿಗೆ, “ಹೌದು, ನೀನು ಇದನ್ನು ಯಥಾರ್ಥವಾದ ಹೃದಯದಿಂದಲೇ ಮಾಡಿದ್ದೀಯೆ ಎಂದು ನನಗೂ ತಿಳಿದಿದೆ. ಆದ್ದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು, ಆಕೆಯನ್ನು ಮುಟ್ಟಗೊಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದಕ್ಕೆ ದೇವರು, “ನೀನು, ಇದನ್ನು ಯಥಾರ್ಥ ಮನಸ್ಸಿನಿಂದ ಮಾಡಿದೆ ಎಂಬುದನ್ನು ನಾನು ಬಲ್ಲೆ; ಆದಕಾರಣ ನೀನು ನನಗೆ ವಿರುದ್ಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದಕ್ಕೆ ದೇವರು ಪ್ರತ್ಯುತ್ತರವಾಗಿ, “ನೀನು ಶುದ್ಧಮನಸ್ಸಿನಿಂದ ಈ ಕಾರ್ಯಮಾಡಿದೆಯೆಂದು ನಾನು ಬಲ್ಲೆ; ಆದಕಾರಣವೇ ನನಗೆ ವಿರುದ್ಧವಾಗಿ ನೀನು ಪಾಪಮಾಡದಂತೆ ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದಕ್ಕೆ ದೇವರು - ನೀನು ಇದನ್ನು ಯರ್ಥಾರ್ಥಮನಸ್ಸಿನಿಂದ ಮಾಡಿದೆ ಎಂಬುದನ್ನು ನಾನು ಬಲ್ಲೆ; ಆದಕಾರಣ ನಾನಂತೂ ನೀನು ನನಗೆ ವಿರುದ್ಧವಾಗಿ ಪಾಪಮಾಡದಂತೆ ನಿನ್ನನ್ನು ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ದೇವರು ಅಬೀಮೆಲೆಕನಿಗೆ ಕನಸಿನಲ್ಲಿ, “ಹೌದು, ನೀನು ನಿರಪರಾಧಿಯೆಂದು ನನಗೆ ಗೊತ್ತಿದೆ. ನೀನು ಮಾಡಲಿದ್ದ ತಪ್ಪು ನಿನಗೆ ತಿಳಿದಿರಲಿಲ್ಲವೆಂದೂ ನನಗೆ ಗೊತ್ತಿದೆ. ಆದ್ದರಿಂದಲೇ ನಾನು ನಿನ್ನನ್ನು ಕಾಪಾಡಿದೆ. ನನಗೆ ವಿರೋಧವಾಗಿ ಪಾಪಮಾಡಲು ನಾನು ನಿನಗೆ ಅವಕಾಶ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 20:6
22 ತಿಳಿವುಗಳ ಹೋಲಿಕೆ  

ಏಕೆಂದರೆ ನಿನಗೆ ಕೇಡು ಆಗದ ಹಾಗೆ ನನ್ನನ್ನು ತಡೆದ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಜೀವದಾಣೆ, ನೀನು ತ್ವರೆಯಾಗಿ ನನ್ನನ್ನು ಎದುರುಗೊಳ್ಳದಿದ್ದರೆ, ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ,” ಎಂದು ಹೇಳಿದನು.


ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವುದಕ್ಕೂ, ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಹೋಗುವುದನ್ನು ದೇವರು ತಡೆದದ್ದರಿಂದ, ಯೆಹೋವ ದೇವರ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ ನಿನ್ನ ಶತ್ರುಗಳೂ, ನನ್ನ ಒಡೆಯನಿಗೆ ಕೇಡನ್ನು ಹುಡುಕುವವರೂ ನಾಬಾಲನ ಹಾಗೆಯೇ ಆಗಲಿ.


ಅರಸನ ಹೃದಯವು ಯೆಹೋವ ದೇವರ ಕೈಯಲ್ಲಿ ನೀರಿನ ಕಾಲುವೆಗಳಂತೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.


ತರುವಾಯ ಅವರು ಮುಂದೆ ಪ್ರಯಾಣಮಾಡಿದರು. ಆಗ ಸುತ್ತಲಿರುವ ಪಟ್ಟಣಗಳವರ ಮೇಲೆ ದೇವರ ಭಯವು ಇದ್ದುದರಿಂದ, ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.


ಆದರೆ ನಿಮ್ಮ ತಂದೆಯು ನನಗೆ ವಂಚನೆಮಾಡಿ, ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದನು. ಆದಾಗ್ಯೂ ದೇವರು ಅವನಿಂದ ನನಗೆ ಕೇಡು ಮಾಡಗೊಡಿಸಲಿಲ್ಲ.


ಏಕೆಂದರೆ, ನಿಯಮ ಮೀರುವ ರಹಸ್ಯ ಶಕ್ತಿಯು ಈಗಾಗಲೇ ಕಾರ್ಯಮಾಡುತ್ತಿದೆ. ಅವನನ್ನು ದಾರಿಯಿಂದ ತೆಗೆಯುವವರೆಗೆ ಈಗ ಅಡ್ಡಿಮಾಡುವಾತನು ಅಡ್ಡಿ ಮಾಡುತ್ತಲೇ ಇರುವನು.


ಯೆಹೋವ ದೇವರು ಸೂರ್ಯನಂತೆ ಪ್ರಕಾಶಿಸುವವವರೂ ಗುರಾಣಿಯೂ ಆಗಿದ್ದಾರೆ. ಯೆಹೋವ ದೇವರು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾರೆ. ನಿಷ್ಕಳಂಕವಾಗಿ ನಡೆದುಕೊಳ್ಳುವವರಿಗೆ ಅವರು ಒಳ್ಳೆಯದನ್ನು ಮಾಡಲು ಹಿಂದೆಗೆಯುವುದಿಲ್ಲ.


ಏಕೆಂದರೆ ನಾನು ಜನಾಂಗಗಳನ್ನು ನಿಮ್ಮ ಸನ್ನಿಧಿಯಿಂದ ಹೊರಡಿಸಿಬಿಟ್ಟು, ನಿಮ್ಮ ಮೇರೆಗಳನ್ನು ವಿಸ್ತಾರ ಮಾಡುವೆನು. ವರ್ಷಕ್ಕೆ ಮೂರು ಸಾರಿ ನೀವು ನಿಮ್ಮ ಯೆಹೋವ ದೇವರ ಮುಂದೆ ಬರುವ ಸಮಯದಲ್ಲಿ ಯಾರೂ ನಿಮ್ಮ ಭೂಮಿಯನ್ನು ಅಪಹರಿಸಲು ಆಶೆಪಡುವುದಿಲ್ಲ.


ಆದ್ದರಿಂದ, “ಅವರ ನಡುವೆಯಿಂದ ಹೊರಟುಬಂದು ಪ್ರತ್ಯೇಕವಾಗಿರಿ. ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ನಾನು ನಿಮ್ಮನ್ನು ಸ್ವೀಕರಿಸುವೆನು ಎಂದು ಕರ್ತದೇವರು ಹೇಳುತ್ತಾರೆ.”


ಆದ್ದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಂತೆ ನಡೆದುಕೊಂಡರು.


ನಿಮಗೇ ನಿಮಗೊಬ್ಬರಿಗೆ ಮಾತ್ರ ವಿರೋಧವಾಗಿ ನಾನು ಪಾಪಮಾಡಿ, ನಿಮ್ಮ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದ್ದನ್ನೇ ಮಾಡಿದ್ದೇನೆ. ಹೀಗೆ ನೀವು ನ್ಯಾಯತೀರಿಸುವಾಗ ನೀತಿವಂತರಾಗಿಯೂ ನೀವು ತೀರ್ಪು ನಿರ್ಣಯಿಸುವಾಗ ನ್ಯಾಯವಂತರಾಗಿಯೂ ಇರುವಿರಿ.


ಈ ಮನೆಯಲ್ಲಿ ನನಗಿಂತ ದೊಡ್ಡವನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವುದರಿಂದ, ನಿನ್ನನ್ನು ಹೊರತುಪಡಿಸಿ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ಮಹಾ ದುಷ್ಕೃತ್ಯ ಮಾಡಿ, ದೇವರಿಗೆ ವಿರೋಧವಾಗಿ ಪಾಪ ಮಾಡುವುದು ಹೇಗೆ?” ಎಂದನು.


ಏಕೆಂದರೆ ಯೆಹೋವ ದೇವರು ಅಬ್ರಹಾಮನ ಹೆಂಡತಿ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಮಹಿಳೆಯರನ್ನು ಬಂಜೆಯರನ್ನಾಗಿ ಮಾಡಿದ್ದರು.


ಇದೇ ಕಾರಣದಿಂದ ದೇವರು ಅವರ ಮೇಲೆ ವಂಚಿಸಲು ಶಕ್ತಿಯುಳ್ಳ ಭ್ರಮೆಯನ್ನು ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುವರು.


ನೀವು ಬರೆದ ಸಂಗತಿಗಳನ್ನು ಕುರಿತಾಗಿ ಹೇಳುವುದೇನೆಂದರೆ, “ಸ್ತ್ರೀಸಂಪರ್ಕವಿಲ್ಲದೆ ಇರುವುದು ಮನುಷ್ಯನಿಗೆ ಒಳ್ಳೆಯದು.”


“ಯಾರಾದರೂ ಪಾಪಮಾಡಿದರೆ ಮತ್ತು ನೆರೆಯವರಿಗೆ ಮೋಸ ಮಾಡುವ ಮೂಲಕ ಯೆಹೋವ ದೇವರಿಗೆ ವಿಶ್ವಾಸದ್ರೋಹಿ ಆಗಿದ್ದರೆ ಅಥವಾ ಅವರ ಆರೈಕೆಯಲ್ಲಿ ಏನಾದರೂ ಉಳಿಸಿಕೊಂಡಿದ್ದರೆ ಅಥವಾ ಯಾವುದನ್ನಾದರೂ ಕದ್ದುಕೊಂಡಿದ್ದರೆ ಅಥವಾ ಅವರು ತಮ್ಮ ನೆರೆಹೊರೆಯವರಿಗೆ ಮೋಸ ಮಾಡಿದ್ದರೆ,


ಅಬೀಮೆಲೆಕನು ತನ್ನ ಜನರಿಗೆಲ್ಲಾ, “ಈ ಮನುಷ್ಯನನ್ನಾಗಲಿ, ಅವನ ಹೆಂಡತಿಯನ್ನಾಗಲಿ ಮುಟ್ಟುವವನು ಖಂಡಿತವಾಗಿ ಸಾಯಬೇಕು,” ಎಂದು ಅಪ್ಪಣೆಕೊಟ್ಟನು.


ಆದರೆ ತೋಟದ ಮಧ್ಯದಲ್ಲಿರುವ ಈ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಕೂಡದು, ಮುಟ್ಟಲೂ ಕೂಡದು; ತಿಂದರೆ ಸತ್ತು ಹೋಗುವಿರಿ’ ಎಂದು ದೇವರು ಹೇಳಿದ್ದಾರೆ,” ಎಂದಳು.


ಪಿಲಾತನು ನ್ಯಾಯಾಸನದ ಮೇಲೆ ಕೂತಿದ್ದಾಗ, ಅವನ ಹೆಂಡತಿಯು ಅವನಿಗೆ, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ. ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ,” ಎಂದು ಹೇಳಿ ಕಳುಹಿಸಿದಳು.


ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮಿನವನಾದ ಲಾಬಾನನ ಬಳಿಗೆ ಬಂದು ಅವನಿಗೆ, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು,” ಎಂದರು.


ಪರನ ಹೆಂಡತಿಯನ್ನು ಕೂಡುವವನ ಗತಿಯು ಹೀಗೆಯೇ ಇರುವದು. ಅವಳನ್ನು ಮುಟ್ಟುವ ಯಾವನೂ ದಂಡನೆಯಿಂದ ತಪ್ಪಿಸಿಕೊಳ್ಳನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು