Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:15 - ಕನ್ನಡ ಸಮಕಾಲಿಕ ಅನುವಾದ

15 ತಿತ್ತಿಯೊಳಗಿನ ನೀರು ಮುಗಿದಾಗ, ಆಕೆ ಮಗುವನ್ನು ಒಂದು ಮರದ ಕೆಳಗೆ ಮಲಗಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ತಿತ್ತಿಯಲ್ಲಿದ್ದ ನೀರು ಮುಗಿದ ಮೇಲೆ ಅವಳು ಮಗುವನ್ನು ಒಂದು ಗಿಡದ ನೆರಳಿನಲ್ಲಿ ಮಲಗಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ತಿತ್ತಿಯಲ್ಲಿದ್ದ ನೀರು ಮುಗಿದುಹೋಯಿತು. ಮಗು ಸಾಯುವುದನ್ನು ನಾನು ನೋಡಲಾರೆ ಎಂದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ತಿತ್ತಿಯಲ್ಲಿದ್ದ ನೀರು ಮುಗಿದ ಮೇಲೆ ಅವಳು ಮಗುವನ್ನು ಒಂದು ಗಿಡದ ನೆರಳಿನಲ್ಲಿ ಹಾಕಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸ್ವಲ್ಪ ಸಮಯದ ನಂತರ, ಇದ್ದ ನೀರೆಲ್ಲಾ ಮುಗಿದುಹೋಯಿತು. ಕುಡಿಯುವುದಕ್ಕೆ ಏನೂ ಇರಲಿಲ್ಲ. ಆದ್ದರಿಂದ ಹಾಗರಳು ತನ್ನ ಮಗನನ್ನು ಪೊದೆಯ ಕೆಳಗೆ ಮಲಗಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:15
9 ತಿಳಿವುಗಳ ಹೋಲಿಕೆ  

ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ. ಇವರು ಬಾವಿಗಳಿಗೆ ಬರುತ್ತಾರೆ. ಆದರೆ ನೀರು ಸಿಕ್ಕಲ್ಲ. ಬರೀ ಪಾತ್ರೆಗಳುಳ್ಳವರಾಗಿ ತಿರುಗಿಕೊಳ್ಳುತ್ತಾರೆ. ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ, ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.


ದೇವರೇ, ನನ್ನ ದೇವರು ನೀವೇ, ನಿಮ್ಮನ್ನು ಕುತೂಹಲದಿಂದ ಹುಡುಕುತ್ತಿದ್ದೇನೆ. ನಾನು ನಿಮಗಾಗಿ ದಾಹಗೊಂಡಿದ್ದೇನೆ. ನೀರಿಲ್ಲದೆ ಭೂಮಿಯಲ್ಲಿದ್ದವನು ಹೇಗೆ ನೀರಿಗಾಗಿ ಹಾತೊರೆವಂತೆ ನನ್ನ ಇಡೀ ಸರ್ವಸ್ವವೂ ನಿಮಗಾಗಿ ದಾಹಗೊಂಡಿರುತ್ತದೆ. ನಾನು ನಿಮ್ಮನ್ನೇ ಅಪೇಕ್ಷಿಸುತ್ತಿದ್ದೇನೆ.


ಹೀಗೆ ಇಸ್ರಾಯೇಲಿನ ಅರಸನು ಮತ್ತು ಯೆಹೂದದ ಅರಸನು, ಎದೋಮಿನ ಅರಸನೊಂದಿಗೆ ಹೊರಟು, ಸುತ್ತಾದ ಮಾರ್ಗದಲ್ಲಿ ಏಳು ದಿವಸ ನಡೆದರು. ಆದರೆ ಸೈನ್ಯಕ್ಕೂ, ಅವರು ತಂದಿದ್ದ ಪಶುಗಳಿಗೂ ನೀರು ಇಲ್ಲದೆ ಹೋಯಿತು.


ಕಮ್ಮಾರನು ಸಲಕರಣೆಯನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸ ಮಾಡುತ್ತಾನೆ; ಅವನು ಸುತ್ತಿಗೆ ಹಿಡಿದು ತನ್ನ ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುತ್ತಾನೆ; ಅವನು ಹಸಿದು ಬಲಹೀನನಾಗಿದ್ದರೂ, ನೀರು ಕುಡಿಯದೇ ದಣಿಯುತ್ತಾನೆ.


ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ, ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು, ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ, ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಮರುಭೂಮಿಯಲ್ಲಿ ಅಲೆದಾಡುತ್ತಿದ್ದಳು.


ಬಾಣವನ್ನೆಸೆಯುವಷ್ಟು ದೂರಹೋಗಿ ಕುಳಿತುಕೊಂಡು, “ಮಗುವಿನ ಸಾವನ್ನು ನಾನು ನೋಡಲಾರೆನು,” ಎಂದು ಹೇಳಿ ಸ್ವರವೆತ್ತಿ ಅತ್ತಳು.


ಅದಕ್ಕೆ ಅವಳು, “ನಿನ್ನ ದೇವರಾದ ಯೆಹೋವ ದೇವರಾಣೆ, ಮಡಕೆಯಲ್ಲಿ ಒಂದು ಹಿಡಿ ಹಿಟ್ಟೂ, ಕುಡಿಕೆಯಲ್ಲಿ ಸ್ವಲ್ಪ ಎಣ್ಣೆಯ ಹೊರತಾಗಿ ನನಗೆ ಬೇರೇನೂ ಇಲ್ಲ. ನಾನೂ, ನನ್ನ ಪುತ್ರನೂ ಅದನ್ನು ತಿಂದು ಸತ್ತು ಹೋಗುವಹಾಗೆ ಅದನ್ನು ನನಗೂ, ಅವನಿಗೂ ಸಿದ್ಧಮಾಡಲು ಎರಡು ಕಟ್ಟಿಗೆಗಳನ್ನು ಕೂಡಿಸಿಕೊಂಡಿದ್ದೇನೆ,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು