Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:21 - ಕನ್ನಡ ಸಮಕಾಲಿಕ ಅನುವಾದ

21 ಇಷ್ಮಾಯೇಲನು ಪಾರಾನಿನ ಮರುಭೂಮಿಯಲ್ಲಿ ವಾಸಮಾಡುತ್ತಿದ್ದಾಗ, ಅವನ ತಾಯಿಯು ಅವನಿಗೋಸ್ಕರ ಈಜಿಪ್ಟ್ ದೇಶದ ಒಬ್ಬ ಹೆಣ್ಣನ್ನು ತರಿಸಿ ಮದುವೆಮಾಡಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವನು ಪಾರಾನಿನ ಅರಣ್ಯದಲ್ಲಿ ವಾಸ ಮಾಡಿದನು. ಅವನ ತಾಯಿ ಐಗುಪ್ತ ದೇಶದಿಂದ ಕನ್ಯೆಯನ್ನು ತಂದು ಅವನಿಗೆ ಮದುವೆ ಮಾಡಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಪಾರಾನಿನ ಅರಣ್ಯ ಅವನ ವಾಸಸ್ಥಳವಾಯಿತು. ಅವನ ತಾಯಿ ಈಜಿಪ್ಟಿನಿಂದ ಒಬ್ಬ ಹೆಣ್ಣನ್ನು ತರಿಸಿ ಮದುವೆಮಾಡಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವನು ಪಾರಾನಿನ ಅರಣ್ಯದಲ್ಲಿ ವಾಸಮಾಡಿದನು. ಅವನ ತಾಯಿ ಐಗುಪ್ತದೇಶದಿಂದ ಕನ್ನಿಕೆಯನ್ನು ತರಿಸಿ ಮದುವೆಮಾಡಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವನ ತಾಯಿಯು ಅವನಿಗೆ ಈಜಿಪ್ಟಿನ ಹುಡುಗಿಯನ್ನು ತಂದು ಮದುವೆ ಮಾಡಿಸಿದಳು. ಅವರು ಪಾರಾನ್ ಕಾಡಿನಲ್ಲಿ ತಮ್ಮ ವಾಸವನ್ನು ಮುಂದುವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:21
18 ತಿಳಿವುಗಳ ಹೋಲಿಕೆ  

ಹಾಗಾದರೆ, ತನ್ನ ಮಗಳನ್ನು ಮದುವೆ ಮಾಡಿಕೊಡುವವನು ಒಳ್ಳೆಯದನ್ನು ಮಾಡುತ್ತಾನೆ. ಮದುವೆ ಮಾಡಿಕೊಡದೆ ಇರುವವನು ಉತ್ತಮವಾದುದನ್ನು ಮಾಡುತ್ತಾನೆ.


ಸಮುಯೇಲನು ಮರಣಹೊಂದಿದನು. ಇಸ್ರಾಯೇಲರೆಲ್ಲರು ಕೂಡಿಬಂದು ಅವನಿಗೋಸ್ಕರ ಗೋಳಾಡಿ, ರಾಮದಲ್ಲಿರುವ ಅವನ ಮನೆಯ ಅಂಗಳದಲ್ಲಿ ಅವನನ್ನು ಸಮಾಧಿಮಾಡಿದರು. ಅನಂತರ ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.


ತನ್ನ ತಂದೆತಾಯಿಗಳ ಬಳಿಗೆ ಬಂದು ಅವರಿಗೆ, “ನಾನು ತಿಮ್ನಾತಿನಲ್ಲಿ ಫಿಲಿಷ್ಟಿಯರ ಪುತ್ರಿಯರೊಳಗೆ ಒಬ್ಬ ಸ್ತ್ರೀಯನ್ನು ಕಂಡೆನು. ಈಗ ಅವಳನ್ನು ನನಗೆ ಮದುವೆ ಮಾಡಿರಿ,” ಎಂದನು.


ಅವರು ಹೋಗಿ ಮೋಶೆ ಆರೋನರ ಬಳಿಗೂ, ಇಸ್ರಾಯೇಲರ ಸಮಸ್ತ ಸಭೆಯ ಬಳಿಗೂ ಪಾರಾನ್ ಮರುಭೂಮಿಯಲ್ಲಿರುವ ಕಾದೇಶಿಗೂ ಬಂದು, ಅವರಿಗೂ, ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ, ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.


ಆಗ ಮೋಶೆಯು ಯೆಹೋವ ದೇವರ ಆಜ್ಞೆಯಂತೆ ಪಾರಾನ್ ಮರುಭೂಮಿಯಿಂದ ಅವರನ್ನು ಕಳುಹಿಸಿದನು. ಅವರೆಲ್ಲರೂ ಇಸ್ರಾಯೇಲರ ಮುಖ್ಯಸ್ಥರಾಗಿದ್ದರು.


ತರುವಾಯ ಜನರು ಹಚೇರೋತಿನಿಂದ ಹೊರಟು ಪಾರಾನ್ ಮರುಭೂಮಿಯಲ್ಲಿ ಇಳಿದುಕೊಂಡರು.


ಆಗ ಇಸ್ರಾಯೇಲರು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಮರುಭೂಮಿಯಿಂದ ಪ್ರಯಾಣಮಾಡಿದರು. ಮೇಘವು ಪಾರಾನ್ ಎಂಬ ಮರುಭೂಮಿಯಲ್ಲಿ ಇಳಿಯಿತು.


ರೆಬೆಕ್ಕಳು ಇಸಾಕನಿಗೆ, “ಹಿತ್ತಿಯ ಸ್ತ್ರೀಯರ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ. ಇಂಥ ಹಿತ್ತಿಯ ಸ್ತ್ರೀಯರಲ್ಲಿ ಒಬ್ಬಳನ್ನು ತನ್ನ ಹೆಂಡತಿಯಾಗಿ ಯಾಕೋಬನು ಮದುವೆ ಮಾಡಿಕೊಂಡರೆ, ನಾನು ಬದುಕಿರುವುದು ವ್ಯರ್ಥ,” ಎಂದಳು.


ಅವರ ಬೆಟ್ಟವಾದ ಸೇಯೀರನಲ್ಲಿ ಹೋರಿಯರನ್ನೂ ಅರಣ್ಯಕ್ಕೆ ಸಮೀಪವಾದ ಏಲ್ಪಾರಾನಿನವರೆಗೂ ಅವರನ್ನು ಸೋಲಿಸಿದರು.


ಅವನ ವಂಶಸ್ಥರು ಅಸ್ಸೀರಿಯಗೆ ಹೋಗುವ, ಈಜಿಪ್ಟಿನ ಮೇರೆಯಲ್ಲಿ ಹವೀಲದಿಂದ ಶೂರ್‌ವರೆಗಿನ ಪ್ರದೇಶದಲ್ಲಿ ವಾಸಿಸಿದರು. ಅವರು ತಮ್ಮ ಎಲ್ಲಾ ಸಹೋದರರೊಂದಿಗೆ ಎದುರುಬದಿರಿನಲ್ಲೇ ವಾಸಮಾಡಿದರು.


ದೇವರು, ತೇಮಾನಿನಿಂದಲೂ; ಪರಿಶುದ್ಧರು, ಪಾರಾನ್ ಪರ್ವತದಿಂದಲೂ ಬಂದರು. ಅವರ ಮಹಿಮೆ ಆಕಾಶಗಳನ್ನು ಮುಚ್ಚಿತು. ಅವರ ಸ್ತೋತ್ರವು ಭೂಮಿಯನ್ನು ತುಂಬಿಸಿತು.


ಅಬ್ರಾಮನು ಕಾನಾನ್ ದೇಶದಲ್ಲಿ ಹತ್ತು ವರ್ಷ ವಾಸಿಸಿದ ತರುವಾಯ, ಅಬ್ರಾಮನ ಹೆಂಡತಿಯಾದ ಸಾರಯಳು ಈಜಿಪ್ಟಿನವಳಾದ ಹಾಗರಳೆಂಬ ದಾಸಿಯನ್ನು ತನ್ನ ಗಂಡನಿಗೆ ಹೆಂಡತಿಯಾಗಿ ಒಪ್ಪಿಸಿದಳು.


ಮಿದ್ಯಾನನ್ನು ಬಿಟ್ಟು ಪಾರಾನಿಗೆ ಬಂದು ಅಲ್ಲಿಂದ ಮನುಷ್ಯರನ್ನು ತೆಗೆದುಕೊಂಡು ಈಜಿಪ್ಟಿನಲ್ಲಿ ಪ್ರವೇಶಿಸಿ ಈಜಿಪ್ಟಿನ ಅರಸನಾದ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಮನೆಯನ್ನು, ಆಹಾರವನ್ನು ಮತ್ತು ಭೂಮಿಯನ್ನು ಕೊಟ್ಟನು.


ಯೆಹೋಯಾದಾವನು ಯೋವಾಷನಿಗೆ ಇಬ್ಬರು ಮಹಿಳೆಯರನ್ನು ಮದುವೆಮಾಡಿಕೊಟ್ಟನು. ಅವನು ಪುತ್ರಪುತ್ರಿಯರನ್ನು ಪಡೆದನು.


ಮದುವೆಮಾಡಿಕೊಂಡು, ಪುತ್ರಪುತ್ರಿಯರನ್ನು ಪಡೆಯಿರಿ. ನಿಮ್ಮ ಪುತ್ರರಿಗೆ ಹೆಂಡತಿಯರನ್ನು ಹುಡುಕಿರಿ. ನಿಮ್ಮ ಪುತ್ರಿಯರನ್ನು ಮದುವೆಮಾಡಿಕೊಡಿರಿ; ಅವರು ಪುತ್ರಪುತ್ರಿಯರನ್ನು ಹೆರಲಿ. ಹೀಗೆ ನೀವು ಕಡಿಮೆಯಾಗದೆ, ಅಲ್ಲಿ ಹೆಚ್ಚಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು