Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:23 - ಕನ್ನಡ ಸಮಕಾಲಿಕ ಅನುವಾದ

23 ಆದ್ದರಿಂದ ನೀನು ನನಗೂ, ನನ್ನ ಮಗನಿಗೂ, ನನ್ನ ಮೊಮ್ಮಗನಿಗೂ ವಂಚನೆ ಮಾಡುವುದಿಲ್ಲವೆಂದು ದೇವರ ಮೇಲೆ ಆಣೆ ಇಟ್ಟು ಪ್ರಮಾಣಮಾಡು. ನಾನು ನಿನಗೆ ಒಳ್ಳೆಯದನ್ನೇ ಮಾಡಿದ ಪ್ರಕಾರ, ನೀನು ನನಗೂ, ನೀನು ವಾಸಮಾಡುತ್ತಿರುವ ಈ ದೇಶಕ್ಕೂ ಒಳ್ಳೆಯದನ್ನೇ ಮಾಡಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದುದರಿಂದ ನೀನು ನನಗೂ, ನನ್ನ ಮಕ್ಕಳಿಗೂ, ನನ್ನ ಸಂತತಿಗೂ ಅನ್ಯಾಯ ಮಾಡದೆ, ನಾನು ನಿನಗೆ ಹಿತವನ್ನು ಮಾಡಿದಂತೆಯೇ, ನನಗೂ, ನೀನು ವಾಸಿಸುವ ಈ ದೇಶಕ್ಕೂ ಹಿತವನ್ನು ಮಾಡುವುದಾಗಿ ದೇವರ ಮೇಲೆ ಪ್ರಮಾಣ ಮಾಡಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದುದರಿಂದ ನೀನು ಈ ಸ್ಥಳದಲ್ಲಿ ನನ್ನೊಂದಿಗೆ ಒಂದು ಒಪ್ಪಂದಕ್ಕೆ ಬರಬೇಕು: ಅದೇನೆಂದರೆ - ನನಗಾಗಲಿ ನನ್ನ ಪುತ್ರಪೌತ್ರರಿಗಾಗಲಿ ಏನೂ ಅನ್ಯಾಯ ಮಾಡಬಾರದು; ನಾನು ನಿನಗೆ ಒಳ್ಳೆಯದನ್ನೇ ಮಾಡಿದಂತೆ ನನಗೂ, ನೀನು ವಾಸಮಾಡುತ್ತಿರುವ ಈ ನಾಡಿಗೂ ಒಳ್ಳೆಯದನ್ನೇ ಮಾಡಬೇಕು. ಹೀಗೆ ಮಾಡುವುದಾಗಿ ದೇವರ ಮೇಲೆ ಪ್ರಮಾಣಮಾಡಬೇಕು,” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀನು ಈ ಸ್ಥಳದಲ್ಲಿ ನನ್ನೊಂದಿಗೆ [ಒಡಂಬಡಿಕೆಮಾಡಿಕೊಂಡು] ನೀನು ನನಗಾಗಲಿ ನನ್ನ ಪುತ್ರಪೌತ್ರರಿಗಾಗಲಿ ಏನೂ ಅನ್ಯಾಯ ಮಾಡದೆ ನಾನು ನಿನಗೆ ಹಿತವನ್ನು ಮಾಡಿದಂತೆಯೇ ನನಗೂ ನೀನು ಇಳುಕೊಂಡಿರುವ ಈ ದೇಶಕ್ಕೂ ಹಿತವನ್ನು ಮಾಡುವದಾಗಿ ದೇವರ ಮೇಲೆ ಪ್ರಮಾಣಮಾಡಬೇಕೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದ್ದರಿಂದ ನೀನು ನನ್ನೊಡನೆ ಮತ್ತು ನನ್ನ ಮಕ್ಕಳೊಡನೆ ನ್ಯಾಯವಾಗಿ ನಡೆದುಕೊಳ್ಳುವುದಾಗಿ ದೇವರ ಮೇಲೆ ಪ್ರಮಾಣಮಾಡು. ನನಗೂ ಮತ್ತು ನೀನು ವಾಸಿಸುತ್ತಿರುವ ಈ ನಾಡಿಗೂ ದಯೆತೋರುವುದಾಗಿ ನೀನು ಪ್ರಮಾಣಮಾಡು. ನಾನು ನಿನಗೆ ದಯೆತೋರಿದಂತೆ ನೀನೂ ನನಗೆ ದಯೆತೋರುವುದಾಗಿ ಪ್ರಮಾಣಮಾಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:23
19 ತಿಳಿವುಗಳ ಹೋಲಿಕೆ  

“ಈಗ ನೀವು ನನಗೊಂದು ಪ್ರಮಾಣಮಾಡಬೇಕು. ನಾನು ನಿಮಗೆ ದಯೆ ತೋರಿಸಿದ್ದರಿಂದ ನೀವು ನನಗೂ ನನ್ನ ತಂದೆಯ ಮನೆಗೂ ದಯೆ ತೋರಿಸಬೇಕು. ನನಗೆ ನಿಶ್ಚಯವಾದ ಗುರುತನ್ನು ಕೊಡಬೇಕು.


ಆಗ ಅಬೀಮೆಲೆಕನು ಕುರಿಗಳನ್ನೂ ಎತ್ತುಗಳನ್ನೂ ದಾಸರನ್ನೂ ದಾಸಿಯರನ್ನೂ ತೆಗೆದುಕೊಂಡು ಅಬ್ರಹಾಮನಿಗೆ ಕೊಟ್ಟು, ಅವನ ಹೆಂಡತಿ ಸಾರಳನ್ನು ಅವನಿಗೆ ಒಪ್ಪಿಸಿಕೊಟ್ಟನು.


ಮನುಷ್ಯರು ನಿಜವಾಗಿಯೂ ದೊಡ್ಡವರ ಮೇಲೆ ಆಣೆ ಇಡುತ್ತಾರಷ್ಟೆ. ಆಣೆಯನ್ನು ದೃಢಪಡಿಸುವುದು ಪ್ರತಿಯೊಂದು ವಿವಾದಕ್ಕೂ ಅಂತ್ಯವಾಗಿರುವುದು.


ನಿಮಗೆ ಶ್ರಮೆ ಪಡಿಸಬಾರದೆಂದು ನಾನು ಕೊರಿಂಥಕ್ಕೆ ಹಿಂದಿರುಗಿ ಬರಲಿಲ್ಲ. ಇದಕ್ಕೆ ದೇವರೇ ಸಾಕ್ಷಿ.


ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿಯಿಂದಲೂ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡುವೆ. ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯ ಬಯಸುವರು. ನನ್ನಲ್ಲಿಯೇ ಹೆಮ್ಮೆಪಡುವರು.”


ದಾವೀದನು ಅವನಿಗೆ, “ನೀನು ನನ್ನನ್ನು ಆ ಗುಂಪಿನ ಬಳಿಗೆ ಕರೆದುಕೊಂಡು ಹೋಗುತ್ತೀಯಾ?” ಎಂದು ಕೇಳಿದನು. ಅದಕ್ಕವನು, “ನೀನು ನನ್ನನ್ನು ಕೊಂದುಹಾಕುವುದಿಲ್ಲ ಇಲ್ಲವೆ ನನ್ನನ್ನು ನನ್ನ ಯಜಮಾನನ ಕೈಯಲ್ಲಿ ಒಪ್ಪಿಸಿಕೊಡುವುದಿಲ್ಲ ಎಂದು ನನಗೆ ದೇವರ ಹೆಸರಿನಿಂದ ಪ್ರಮಾಣಮಾಡಿದರೆ, ನಿನ್ನನ್ನು ಅಲ್ಲಿಗೆ ಕರೆದುಕೊಂಡು ಹೋಗುತ್ತೇನೆ,” ಎಂದನು.


ಆಗ ಯೋನಾತಾನನು ದಾವೀದನಿಗೆ, “ನೀನು ಸಮಾಧಾನವಾಗಿ ಹೋಗು, ಯೆಹೋವ ದೇವರು ಎಂದೆಂದಿಗೂ ನನಗೂ, ನಿನಗೂ, ನನ್ನ ಸಂತಾನಕ್ಕೂ, ನಿನ್ನ ಸಂತಾನಕ್ಕೂ ಸಾಕ್ಷಿಯಾಗಿರಲೆಂದು ಮಧ್ಯದಲ್ಲಿ ಯೆಹೋವ ದೇವರ ಹೆಸರಿನಿಂದ ಆಣೆಯಿಟ್ಟು ನಾವಿಬ್ಬರೂ ಪ್ರಮಾಣ ಮಾಡಿಕೊಂಡೆವಲ್ಲಾ,” ಎಂದನು. ಆಗ ದಾವೀದನು ಎದ್ದು ಹೋದನು. ಯೋನಾತಾನನು ಪಟ್ಟಣಕ್ಕೆ ಹೋದನು.


ಯೋನಾತಾನನು ದಾವೀದನನ್ನು ಪ್ರೀತಿಮಾಡಿದ್ದರಿಂದ, ಅವನಿಂದ ತಿರುಗಿ ಪ್ರಮಾಣ ತೆಗೆದುಕೊಂಡನು. ಅವನು ತನ್ನ ಪ್ರಾಣವನ್ನು ಪ್ರೀತಿಮಾಡಿದ ಹಾಗೆಯೇ, ಅವನನ್ನು ಪ್ರೀತಿಮಾಡಿದನು.


ಆದರೆ ನಿನಗೆ ಕೇಡು ಮಾಡಲು ನನ್ನ ತಂದೆಗೆ ಮನಸ್ಸಾಗಿದ್ದರೆ, ಅದನ್ನು ನಿನಗೆ ತಿಳಿಸಿ ನೀನು ಸಮಾಧಾನದಿಂದ ಹೋಗುವಹಾಗೆ ನಿನ್ನನ್ನು ಕಳುಹಿಸುವೆನು. ಯೆಹೋವ ದೇವರು ನನ್ನ ತಂದೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರಲಿ.


ನಿಮ್ಮ ದೇವರಾದ ಯೆಹೋವ ದೇವರಿಗೆ ನೀವು ಭಯಪಡಬೇಕು. ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು ಮತ್ತು ಅವರ ಹೆಸರಿನಲ್ಲಿ ಆಣೆಯಿಟ್ಟುಕೊಳ್ಳಬೇಕು.


ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯತೀರಿಸಲಿ,” ಎಂದನು. ಆಗ ಯಾಕೋಬನು ತನ್ನ ತಂದೆ ಇಸಾಕನ ಭಯದ ಮೇಲೆ ಪ್ರಮಾಣ ಮಾಡಿದನು.


ಆದ್ದರಿಂದ ನೀನು ಇಲ್ಲಿ ಬಾ, ನಾನೂ ನೀನೂ ಒಡಂಬಡಿಕೆಯನ್ನು ಮಾಡೋಣ, ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ,” ಎಂದನು.


ಅದಕ್ಕೆ ಅವರು, “ನಿಶ್ಚಯವಾಗಿ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ ಎಂದು ತಿಳಿದು, ನಮಗೂ, ನಿನಗೂ ಮಧ್ಯದಲ್ಲಿ ಒಂದು ಪ್ರಮಾಣವಿರುವ ಹಾಗೆ, ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳೋಣವೆಂದು ನಾವು ತೀರ್ಮಾನಿಸಿದ್ದೇವೆ.


ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಪುತ್ರಿಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳಬಾರದು.


ಅದಕ್ಕೆ ಅಬ್ರಹಾಮನು, “ನಾನು ಹಾಗೆಯೇ ಪ್ರಮಾಣ ಮಾಡುತ್ತೇನೆ,” ಎಂದನು.


ಯಾಕೋಬನು ತನಗೆ ಪ್ರಮಾಣಮಾಡು ಎಂದಾಗ ಯೋಸೇಫನು ಅವನಿಗೆ ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ತನ್ನ ಊರುಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.


ಯೆಹೋವ ದೇವರು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಯೆಹೋವ ದೇವರು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನಿಗೆ ತಿಳಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು