Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:31 - ಕನ್ನಡ ಸಮಕಾಲಿಕ ಅನುವಾದ

31 ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣ ಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅಬ್ರಹಾಮನು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವರಿಬ್ಬರು ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಹೀಗೆ ಅವರಿಬ್ಬರು ಅಲ್ಲಿ ಪ್ರಮಾಣಮಾಡಿದ್ದ ಕಾರಣ, ಆ ಸ್ಥಳಕ್ಕೆ ‘ಬೇರ್ಷೆಬ’ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅವರಿಬ್ಬರು ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಅವರು ಆ ಸ್ಥಳದಲ್ಲಿ ಒಪ್ಪಂದ ಮಾಡಿಕೊಂಡಿದ್ದರಿಂದ ಆ ಬಾವಿಗೆ ಬೇರ್ಷೆಬ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:31
14 ತಿಳಿವುಗಳ ಹೋಲಿಕೆ  

ಅದಕ್ಕೆ ಅವನು, ಷಿಬಾ, ಎಂದು ಹೆಸರಿಟ್ಟನು. ಆದ್ದರಿಂದ ಇಂದಿನವರೆಗೂ ಬೇರ್ಷೆಬ ಎಂದು ಆ ಪಟ್ಟಣಕ್ಕೆ ಹೆಸರಾಯಿತು.


ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ, ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು, ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ, ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಮರುಭೂಮಿಯಲ್ಲಿ ಅಲೆದಾಡುತ್ತಿದ್ದಳು.


ಹೀಗೆಯೇ ದಾನ್ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ, ಸೊಲೊಮೋನನ ಸಮಸ್ತ ದಿವಸಗಳಲ್ಲಿ ಯೆಹೂದ ಮತ್ತು ಇಸ್ರಾಯೇಲಿನಲ್ಲಿರುವ ಪ್ರತಿಯೊಬ್ಬ ಮನುಷ್ಯನು ತನ್ನ ದ್ರಾಕ್ಷಿಬಳ್ಳಿಯ ಕೆಳಗೂ, ತನ್ನ ಅಂಜೂರದ ಮರದ ಕೆಳಗೂ ಸುರಕ್ಷಿತವಾಗಿ ವಾಸವಾಗಿದ್ದರು.


“ನಾನು ಹೇಳುವ ಆಲೋಚನೆ ಏನೆಂದರೆ, ದಾನಿನಿಂದ ಬೇರ್ಷೆಬದವರೆಗೂ ವಾಸವಾಗಿರುವ ಇಸ್ರಾಯೇಲರೊಳಗಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ನಿನ್ನ ಬಳಿಯಲ್ಲಿ ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.


ಆಗ ಇಸ್ರಾಯೇಲರೆಲ್ಲರು ಹೊರಟು ಗಿಲ್ಯಾದ್ ಸಹಿತವಾಗಿ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಒಬ್ಬ ಮನುಷ್ಯನಂತೆ ಮಿಚ್ಪೆಯಲ್ಲಿ ಯೆಹೋವ ದೇವರ ಮುಂದೆ ಕೂಡಿಬಂದರು.


ಹಚರ್ ಷೂವಾಲ್, ಬೇರ್ಷೆಬ, ಬಿಜ್ಯೋತ್ಯಾ,


ಅಲ್ಲಿಂದ ಅವನು ಬೇರ್ಷೆಬಕ್ಕೆ ಹೋದನು.


ಹೀಗೆ ಅವರು ಬೇರ್ಷೆಬದಲ್ಲಿ ಒಡಂಬಡಿಕೆಯನ್ನು ಮಾಡಿಕೊಂಡರು. ತರುವಾಯ ಅಬೀಮೆಲೆಕನೂ, ಅವನ ಮುಖ್ಯ ಸೈನ್ಯಾಧಿಪತಿ ಫೀಕೋಲನೂ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂದಿರುಗಿದರು.


ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣ ಮಾಡಿಕೊಂಡರು. ಅನಂತರ ಇಸಾಕನು ಅವರನ್ನು ಸಾಗಕಳುಹಿಸಿದನು. ಅವರು ಸಮಾಧಾನದಿಂದ ಹೊರಟು ಹೋದರು.


ಇಸ್ರಾಯೇಲನು ತನಗಿದ್ದದ್ದನ್ನೆಲ್ಲಾ ತೆಗೆದುಕೊಂಡು ಬೇರ್ಷೆಬಕ್ಕೆ ಬಂದು, ತನ್ನ ತಂದೆ ಇಸಾಕನ ದೇವರಿಗೆ ಬಲಿಗಳನ್ನು ಅರ್ಪಿಸಿದನು.


ಅವನು ಅದನ್ನು ಕೇಳಿ ಎದ್ದು, ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ, ಅಲ್ಲಿ ತನ್ನ ಸೇವಕನನ್ನು ಕಳುಹಿಸಿಬಿಟ್ಟನು.


ಆದರೆ ಬೇತೇಲನ್ನು ಹುಡುಕಬೇಡಿರಿ. ಗಿಲ್ಗಾಲಿಗೆ ಹೋಗಬೇಡಿರಿ. ಬೇರ್ಷೆಬಕ್ಕೆ ಯಾತ್ರೆ ಹೋಗಬೇಡಿರಿ. ಏಕೆಂದರೆ ಗಿಲ್ಗಾಲು ಸೆರೆಗೆ ನಿಶ್ವಯವಾಗಿ ಹೋಗುವುದು, ಬೇತೇಲಿನ ಬಾಧೆಗಳು ಕೊನೆಗೊಳ್ಳುವುದಿಲ್ಲ.”


ಅವರು ಟೈರಿನ ಭದ್ರಸ್ಥಳಕ್ಕೂ, ಹಿವ್ವಿಯರ, ಕಾನಾನ್ಯರ ಸಕಲ ಪಟ್ಟಣಗಳಿಗೂ, ಅಲ್ಲಿಂದ ಯೆಹೂದದ ದಕ್ಷಿಣಕ್ಕೂ, ಬೇರ್ಷೆಬಕ್ಕೂ ಬಂದರು.


ಹಚರ್ ಷೂವಾಲ್ ಗ್ರಾಮದಲ್ಲಿಯೂ, ಬೇರ್ಷೆಬ ಮತ್ತು ಅವುಗಳ ಗ್ರಾಮಗಳಲ್ಲಿಯೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು