Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:4 - ಕನ್ನಡ ಸಮಕಾಲಿಕ ಅನುವಾದ

4 ದೇವರು ತನಗೆ ಅಪ್ಪಣೆಕೊಟ್ಟ ಹಾಗೆ ಅಬ್ರಹಾಮನು ತನ್ನ ಮಗ ಇಸಾಕನಿಗೆ ಎಂಟನೆಯ ದಿನದಲ್ಲಿ ಸುನ್ನತಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಎಂಟನೆಯ ದಿನದಲ್ಲಿ ದೇವರ ಅಪ್ಪಣೆಯ ಮೇರೆಗೆ ಅಬ್ರಹಾಮನು ಇಸಾಕನಿಗೆ ಸುನ್ನತಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಎಂಟನೆಯ ದಿನದಲ್ಲಿ ದೇವರ ಅಪ್ಪಣೆಯ ಮೇರೆಗೆ ಅವನಿಗೆ ಸುನ್ನತಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇಸಾಕನೆಂದು ಹೆಸರಿಟ್ಟು ಎಂಟನೆಯ ದಿನದಲ್ಲಿ ದೇವರ ಅಪ್ಪಣೆಯ ಮೇರೆಗೆ ಸುನ್ನತಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇಸಾಕನಿಗೆ ಎಂಟು ದಿನಗಳಾಗಿದ್ದಾಗ, ದೇವರ ಆಜ್ಞೆಗನುಸಾರವಾಗಿ ಅಬ್ರಹಾಮನು ಅವನಿಗೆ ಸುನ್ನತಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:4
9 ತಿಳಿವುಗಳ ಹೋಲಿಕೆ  

ಆಮೇಲೆ ದೇವರು ಅಬ್ರಹಾಮನಿಗೆ ಸುನ್ನತಿಯ ಒಡಂಬಡಿಕೆಯನ್ನೂ ಕೊಟ್ಟರು. ಅಬ್ರಹಾಮನಿಗೆ ಇಸಾಕನು ಜನಿಸಿದನು. ಇಸಾಕನು ಜನಿಸಿದ ಎಂಟನೆಯ ದಿನ ಅಬ್ರಹಾಮನು ಇಸಾಕನಿಗೆ ಸುನ್ನತಿ ಮಾಡಿಸಿದನು. ಅನಂತರ ಇಸಾಕನಿಗೆ ಯಾಕೋಬನು ಜನಿಸಿದನು. ಯಾಕೋಬನು ನಮ್ಮ ಹನ್ನೆರಡು ಮಂದಿ ಪಿತೃಗಳಿಗೆ ತಂದೆಯಾದನು.


ಶಿಶುವಿಗೆ ಸುನ್ನತಿ ಮಾಡಬೇಕಾಗಿದ್ದ ಎಂಟನೆಯ ದಿನದಲ್ಲಿ, ಮರಿಯಳು ಗರ್ಭಿಣಿಯಾಗುವುದಕ್ಕೆ ಮುಂಚೆಯೇ ದೂತನು ಸೂಚಿಸಿದ್ದಂತೆ “ಯೇಸು” ಎಂದು ನಾಮಕರಣ ಮಾಡಿದರು.


ಅವರು ಎಂಟನೆಯ ದಿನ ಆ ಮಗುವಿಗೆ ಸುನ್ನತಿ ಮಾಡಿಸುವುದಕ್ಕಾಗಿ ಬಂದು, ಅವನ ತಂದೆಯ ಹೆಸರಿನಂತೆ ಮಗನನ್ನು ಜಕರೀಯನೆಂದು ನಾಮಕರಣ ಮಾಡಲಿದ್ದರು.


ಇವರಿಬ್ಬರೂ ಕರ್ತದೇವರ ಎಲ್ಲಾ ಆಜ್ಞೆಗಳನ್ನೂ ತೀರ್ಪುಗಳನ್ನೂ ತಪ್ಪಿಲ್ಲದೆ ಕೈಕೊಂಡು, ದೇವರ ಮುಂದೆ ನೀತಿವಂತರಾಗಿದ್ದರು.


ನಾನು ನಿಮಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಕಾಪಾಡಿ ಕೈಗೊಳ್ಳಬೇಕು. ಅದಕ್ಕೆ ಏನೂ ಕೂಡಿಸಬಾರದು. ಅದರಿಂದ ಏನನ್ನೂ ತೆಗೆದುಹಾಕಬಾರದು.


ಎಂಟನೆಯ ದಿನದಲ್ಲಿ ಮಗುವಿಗೆ ಸುನ್ನತಿ ಮಾಡಿಸಬೇಕು.


“ನಿಮ್ಮ ಜೊತೆಯಲ್ಲಿ ವಾಸಮಾಡಿದ ಪರದೇಶದವನು ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ, ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ. ತರುವಾಯ ಅವನು ಅದನ್ನು ಆಚರಿಸುವುದಕ್ಕೆ ಸಮೀಪಬರಲಿ, ಅಂಥವರು ಸ್ವದೇಶದಲ್ಲಿ ಹುಟ್ಟಿದವರಂತೆ ಇರುವರು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು