Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:7 - ಕನ್ನಡ ಸಮಕಾಲಿಕ ಅನುವಾದ

7 ಸಾರಳು ಮಕ್ಕಳಿಗೆ ಹಾಲು ಕುಡಿಸುವಳೆಂದು ಅಬ್ರಹಾಮನಿಗೆ ಯಾರು ಹೇಳುತ್ತಿದ್ದರು? ನಾನು ಅವನಿಗೆ ಮುದಿಪ್ರಾಯದಲ್ಲಿ ಮಗನನ್ನು ಹೆತ್ತೆನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸಾರಳೂ ಮಕ್ಕಳಿಗೆ ಮೊಲೆ ಕುಡಿಸುವಳೆಂದು ಯಾರಾದರೂ ಅಬ್ರಹಾಮನಿಗೆ ಹೇಳಲು ಸಾಧ್ಯವಿತ್ತೇ? ಆದರೆ ದೇವರ ಚಿತ್ತದಿಂದ ನನ್ನ ಮುಪ್ಪಿನಲ್ಲಿ ಮತ್ತು ಅಬ್ರಹಾಮನ ಮುಪ್ಪಿನಲ್ಲೇ ಅವನಿಗೆ ಮಗನನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅದೂ ಅಲ್ಲದೆ: “ಈಪರಿ ಪೇಳುತ್ತಿದ್ದರಾರು ಅಬ್ರಹಾಮನಿಗೆ? 'ಕುಡಿಸುವಳು ಸಾರಳೂ ಮೊಲೆ ಹಾಲನ್ನು ಮಕ್ಕಳಿಗೆ’? ಹೆತ್ತಿರುವೆ ನೋಡಿ ಮಗನನು ಮುಪ್ಪಿನಲು ಆತನಿಗೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸಾರಳೂ ಮಕ್ಕಳಿಗೆ ಮೊಲೆ ಕುಡಿಸುವಳೆಂದು ಯಾರಾದರೂ ಅಬ್ರಹಾಮನಿಗೆ ಹೇಳುತ್ತಿದ್ದರೋ? ಆದರೂ ಅವನ ಮುಪ್ಪಿನಲ್ಲೇ ಅವನಿಗೆ ಮಗನನ್ನು ಹೆತ್ತಿದ್ದೇನಷ್ಟೆ ಎಂದು ಹೇಳಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅಬ್ರಹಾಮನಿಗೆ ಸಾರಳಲ್ಲಿ ಮಗನು ಹುಟ್ಟುತ್ತಾನೆಂದು ಯಾರೂ ಯೋಚಿಸಿರಲಿಲ್ಲ. ಅಬ್ರಹಾಮನು ವೃದ್ಧನಾಗಿದ್ದರೂ ಈಗ ನಾನು ಅವನಿಗೆ ಒಬ್ಬ ಮಗನನ್ನು ಕೊಟ್ಟಿದ್ದೇನೆ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:7
15 ತಿಳಿವುಗಳ ಹೋಲಿಕೆ  

ಇಂಥ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಂಥ ಸಂಗತಿಯನ್ನು ಕಂಡವರಾರು? ಒಂದೇ ದಿನದಲ್ಲಿ ದೇಶ ಒಂದು ಹುಟ್ಟೀತೇ? ಕ್ಷಣಮಾತ್ರದಲ್ಲಿ ರಾಷ್ಟ್ರವನ್ನು ಹೆರಲಿಕ್ಕಾದೀತೇ? ಆದರೂ ಪ್ರಸವವೇದನೆ ತೊಡಗಿದೊಡನೆ ಚೀಯೋನೆಂಬಾಕೆ ಮಕ್ಕಳನ್ನು ಹೆತ್ತಿದ್ದಾಳೆ.


ಆ ದಿನದಲ್ಲಿ ಕರ್ತ ಯೇಸು ತಮ್ಮ ಪರಿಶುದ್ಧ ಜನರಲ್ಲಿ ಮಹಿಮೆ ಹೊಂದುವವರಾಗಿಯೂ ನಂಬುವವರೆಲ್ಲರನ್ನು ಆಶ್ಚರ್ಯಪಡಿಸುವವರಾಗಿಯೂ ಬರುವರು. ನಮ್ಮ ಸಾಕ್ಷಿಯನ್ನು ನಂಬಿದ್ದರಿಂದ ನಿಮಗೂ ಇವು ಸಂಭವಿಸುವುವು.


ಬಹು ಪ್ರಕಾರದ ದೇವರ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂಬುದೇ ದೇವರ ಉದ್ದೇಶ.


ನಿಶ್ಚಯವಾಗಿ ಯಾಕೋಬನಲ್ಲಿ ಕಣಿಕೇಳುವದು ಇಲ್ಲ. ಇಸ್ರಾಯೇಲರಲ್ಲಿ ಶಕುನನೋಡುವದು ಇಲ್ಲ. ‘ನೋಡಿರಿ, ದೇವರು ಎಂತಹ ಮಹತ್ಕಾರ್ಯವನ್ನು ಮಾಡಿದ್ದಾರೆ,’ ಎಂದು ಯಾಕೋಬನ ವಿಷಯವಾಗಿಯೂ, ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು.


ನೀವು ದೊಡ್ಡವರೂ ಅದ್ಭುತಗಳನ್ನು ಮಾಡುವವರೂ ಆಗಿದ್ದೀರಿ. ನೀವೊಬ್ಬರೇ ದೇವರು.


ಯೆಹೋವ ದೇವರೇ, ದೇವರುಗಳಲ್ಲಿ ನಿಮ್ಮ ಹಾಗೆ ಯಾರೂ ಇಲ್ಲ. ನಿಮ್ಮ ಕೆಲಸಗಳ ಹಾಗೆ ಒಂದೂ ಇಲ್ಲ.


‘ನನಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನು ದುಃಖಿತ ಮತ್ತು ಬಂಜೆಯಾಗಿದ್ದೆ; ನನ್ನನ್ನು ಗಡಿಪಾರು ಮಾಡಿ ತಿರಸ್ಕರಿಸಲಾಯಿತು. ಇವುಗಳನ್ನು ತಂದವರು ಯಾರು? ನಾನು ಒಬ್ಬಂಟಿಯಾಗಿ ಉಳಿದಿದ್ದೇನೆ, ಇವರನ್ನು ಸಾಕಿದವರು ಯಾರು? ಅವರೆಲ್ಲಿದ್ದರು?’ ” ಎಂದುಕೊಳ್ಳುವೆ.


ಅಬ್ರಹಾಮನು ಅಡ್ಡಬಿದ್ದು ನಕ್ಕು, “ನೂರು ವರ್ಷದವನಿಗೆ ಮಗುವು ಹುಟ್ಟುವುದುಂಟೇ? ತೊಂಬತ್ತು ವರ್ಷದವಳಾದ ಸಾರಳು ಹೆರುವುದುಂಟೋ?” ಎಂದು ತನ್ನ ಹೃದಯದಲ್ಲಿ ಅಂದುಕೊಂಡನು.


ಆಗ ಯೆಹೋವ ದೇವರು ಅಬ್ರಹಾಮನಿಗೆ, “ನಾನು ಮುದಿಪ್ರಾಯದವಳಾಗಿ ಮಗುವನ್ನು ಹೆರುವುದು ನಿಜವೋ? ಎಂದುಕೊಂಡು ಸಾರಳು ಏಕೆ ನಕ್ಕಳು?


ಇಸಾಕನು ಬೆಳೆದು ಬಾಲಕನಾಗಿ ತಾಯಿಯ ಹಾಲು ಕುಡಿಯುವುದನ್ನು ಬಿಟ್ಟನು. ಆ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣ ಮಾಡಿಸಿದನು.


ನನ್ನ ತಂದೆಗೆ, “ನಿನಗೆ ಗಂಡು ಕೂಸು ಹುಟ್ಟಿದೆ,” ಎಂಬ ಸಮಾಚಾರವನ್ನು ಹೇಳಿ ಬಹಳ ಸಂತೋಷ ಉಂಟುಮಾಡಿದವನು ಶಾಪಗ್ರಸ್ತನಾಗಲಿ!


ಉದಯದಲ್ಲಿ ನನ್ನ ಕೂಸಿಗೆ ಹಾಲು ಕುಡಿಸಲು ಎದ್ದಾಗ, ಅದು ಸತ್ತಿತ್ತು! ಉದಯದಲ್ಲಿ ಅದನ್ನು ಕಂಡಾಗ, ಅದು ನಾನು ಹೆತ್ತ ಮಗುವಾಗಿರಲಿಲ್ಲ,” ಎಂದಳು.


ತಪ್ನೆಸ್ ಸಹೋದರಿಯು ಅವನಿಗೆ ಗೆನುಬತ್ ಎಂಬ ಮಗನನ್ನು ಹೆತ್ತಳು. ತಪ್ನೆಸ್ ಇವನನ್ನು ಫರೋಹನ ಮನೆಯಲ್ಲಿ ಬೆಳೆಸಿದಳು. ಗೆನುಬತನು ಫರೋಹನ ಮನೆಯಲ್ಲಿ ಫರೋಹನ ಮಕ್ಕಳ ಸಂಗಡ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು