Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:14 - ಕನ್ನಡ ಸಮಕಾಲಿಕ ಅನುವಾದ

14 ಅಬ್ರಹಾಮನು ಆ ಸ್ಥಳಕ್ಕೆ ಯೆಹೋವ ಯೀರೆ ಎಂದು ಹೆಸರಿಟ್ಟನು. “ಯೆಹೋವ ದೇವರು ಪರ್ವತದ ಮೇಲೆ ಒದಗಿಸುವರು,” ಎಂದು ಇಂದಿನವರೆಗೂ ಜನರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ಸ್ಥಳಕ್ಕೆ ಅಬ್ರಹಾಮನು “ಯೆಹೋವ ಯೀರೆ” ಎಂದು ಹೆಸರಿಟ್ಟನು. ಯೆಹೋವನು ಬೆಟ್ಟದಲ್ಲಿ ಒದಗಿಸುವನು ಎಂಬುದಾಗಿ ಇಂದಿನವರೆಗೂ ಹಾಗೆ ಹೇಳುವ ಪದ್ಧತಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆ ಸ್ಥಳಕ್ಕೆ “ಯೆಹೋವ ಯೀರೆ" ಎಂದು ಹೆಸರಿಟ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆ ಸ್ಥಳಕ್ಕೆ ಯೆಹೋವ ಯೀರೆ ಎಂದು ಹೆಸರಿಟ್ಟನು. ಯೆಹೋವನ ಬೆಟ್ಟದಲ್ಲಿ ಒದಗುವದು ಎಂಬದಾಗಿ ಇಂದಿನವರೆಗೂ ಹೇಳುವದುಂಟಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅಲ್ಲದೆ ಆ ಸ್ಥಳಕ್ಕೆ “ಯೆಹೋವ ಯೀರೆ” ಎಂದು ಹೆಸರಿಟ್ಟನು. ಇಂದಿಗೂ ಜನರು, “ಯೆಹೋವನ ಬೆಟ್ಟದಲ್ಲಿ ಒದಗಿಸಲ್ಪಡುವುದು” ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:14
19 ತಿಳಿವುಗಳ ಹೋಲಿಕೆ  

ಅಬ್ರಹಾಮನು ಕಣ್ಣೆತ್ತಿ ನೋಡಿದಾಗ, ಅವನ ಹಿಂದೆ ಒಂದು ಟಗರು ಕೊಂಬುಗಳಿಂದ ಪೊದೆಯಲ್ಲಿ ಸಿಕ್ಕಿಕೊಂಡಿತ್ತು. ಅಬ್ರಹಾಮನು ಹೋಗಿ ಆ ಟಗರನ್ನು ತೆಗೆದುಕೊಂಡು, ಅದನ್ನು ತನ್ನ ಮಗನಿಗೆ ಬದಲಾಗಿ ದಹನಬಲಿಯಾಗಿ ಅರ್ಪಿಸಿದನು.


ಇದಾದ ಮೇಲೆ ಮೋಶೆ ಬಲಿಪೀಠವನ್ನು ಕಟ್ಟಿ, ಅದಕ್ಕೆ “ಯೆಹೋವ ನಿಸ್ಸೀ,” ಎಂದು ಹೆಸರಿಟ್ಟನು.


ಗಿದ್ಯೋನನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿ, “ಯೆಹೋವ ಶಾಲೋಮ್” ಎಂದು ಅದಕ್ಕೆ ಹೆಸರಿಟ್ಟನು. ಅದು ಈವರೆಗೂ ಅಬೀಯೆಜೆರ್ ಒಫ್ರದಲ್ಲಿ ಇನ್ನೂ ಇದೆ.


ಅಬ್ರಹಾಮನು, “ನನ್ನ ಮಗನೇ, ದೇವರೇ ದಹನಬಲಿಗೋಸ್ಕರ ಕುರಿಮರಿಯನ್ನು ಒದಗಿಸುವರು,” ಎಂದು ಉತ್ತರಕೊಟ್ಟನು. ಹೀಗೆ ಅವರಿಬ್ಬರೂ ಜೊತೆಯಲ್ಲಿ ಹೋದರು.


ಸಮುಯೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ, ಶೇನಿಗೂ ಮಧ್ಯದಲ್ಲಿ ನಿಲ್ಲಿಸಿ, “ಇಲ್ಲಿಯವರೆಗೂ ಯೆಹೋವ ದೇವರು ನಮಗೆ ಸಹಾಯ ಮಾಡಿದ್ದಾರೆ,” ಎಂದು ಹೇಳಿ ಅದಕ್ಕೆ ಎಬೆನೆಜೆರ್ ಎಂದು ಹೆಸರಿಟ್ಟನು.


ಇದಲ್ಲದೆ ಅವನು ಆ ಸ್ಥಳಕ್ಕೆ, ಬೇತೇಲ್, ಎಂದು ಹೆಸರಿಟ್ಟನು. ಅದಕ್ಕಿಂತ ಮೊದಲು ಆ ಸ್ಥಳಕ್ಕೆ, ಲೂಜ್ ಎಂದು ಹೆಸರಿತ್ತು.


ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!”


“ಸುತ್ತಲೂ ಹದಿನೆಂಟು ಸಾವಿರ ಅಳತೆಗಳು. “ಆ ದಿನದಿಂದ ಆ ಪಟ್ಟಣದ ಹೆಸರು, ‘ಯೆಹೋವ ದೇವರ ನೆಲೆ’ ” ಎಂಬುದೇ ಆಗಿರುವುದು.


ಏಕೆಂದರೆ ಯೆಹೋವ ದೇವರು ತಮ್ಮ ಜನರಿಗೆ ನ್ಯಾಯತೀರಿಸುವರು. ದೇವರು ತಮ್ಮ ಸೇವಕರ ಬಲ ಹೋಯಿತೆಂದೂ, ಗುಲಾಮರಾಗಲಿ, ಸ್ವತಂತ್ರರಾಗಲಿ ಉಳಿಯಲಿಲ್ಲವೆಂದೂ ನೋಡಿದಾಗ, ತಮ್ಮ ಸೇವಕರಿಗೋಸ್ಕರ ಕರುಣಿಸುವರು.


ಆಗ ಯಾಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ, ನನ್ನ ಪ್ರಾಣ ಉಳಿಯಿತು,” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.


ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.


ಚೀಯೋನ್ ಪುತ್ರಿಯೇ ಹೆರುವವಳಂತೆ ವೇದನೆ ತಾಳಿಕೋ, ಏಕೆಂದರೆ ಈಗ ಪಟ್ಟಣದೊಳಗಿಂದ ಹೊರಟು ಹೊಲದಲ್ಲಿ ವಾಸಮಾಡಿ ಬಾಬಿಲೋನಿಗೆ ಹೋಗುವೆ, ಅಲ್ಲಿ ನಿನಗೆ ಬಿಡುಗಡೆಯಾಗುವುದು. ಅಲ್ಲಿ ಯೆಹೋವ ದೇವರು ನಿನ್ನನ್ನು ನಿನ್ನ ಶತ್ರುಗಳ ಕೈಯೊಳಗಿಂದ ವಿಮೋಚಿಸುವರು.


ಯೆಹೋವ ದೇವರ ದೂತನು ಆಕಾಶದೊಳಗಿಂದ ಎರಡನೆಯ ಸಾರಿ ಅಬ್ರಹಾಮನನ್ನು ಕರೆದು ಅವನಿಗೆ,


ಆದ್ದರಿಂದ ನಾಳೆ ಉದಯಕ್ಕೆ ಎದ್ದು ನಿನ್ನ ಸಂಗಡ ಬಂದ ನಿನ್ನ ಯಜಮಾನನ ಸೇವಕರನ್ನು ಕರಕೊಂಡು, ಅವರ ಸಂಗಡ ಉದಯದಲ್ಲಿ ಬೆಳಕು ಆಗುವಾಗ ಹೊರಟು ಹೋಗು,” ಎಂದನು.


ಯೆಹೋವ ದೇವರ ವಾಕ್ಯವು ಅವನಿಗೆ ಉಂಟಾಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು