ಆದಿಕಾಂಡ 22:17 - ಕನ್ನಡ ಸಮಕಾಲಿಕ ಅನುವಾದ17 ನಿಶ್ಚಯವಾಗಿ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸುವೆನು. ನಿನ್ನ ಸಂತಾನದವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಿನ್ನ ಸಂತತಿಯನ್ನು ಹೆಚ್ಚಿಸಿಯೇ ಹೆಚ್ಚಿಸುತ್ತೇನೆ; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದ ಮರಳಿನಂತೆಯೂ ಅಸಂಖ್ಯವಾಗಿ ಮಾಡುತ್ತೇನೆ. ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಪಡಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಿನ್ನ ಸಂತತಿಯನ್ನು ಹೆಚ್ಚಿಸೇ ಹೆಚ್ಚಿಸುವೆನು; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದಲ್ಲಿರುವ ಉಸುಬಿನಂತೆಯೂ ಅಸಂಖ್ಯವಾಗಿ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಾನು ನಿನ್ನನ್ನು ಖಂಡಿತವಾಗಿಯೂ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಖಂಡಿತವಾಗಿಯೂ ಹೆಚ್ಚಿಸುವೆನು; ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಮರಳಿನಂತೆಯೂ ಅಸಂಖ್ಯಾತರನ್ನಾಗಿ ಮಾಡುವೆನು. ಅವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು. ಅಧ್ಯಾಯವನ್ನು ನೋಡಿ |