ಆದಿಕಾಂಡ 22:18 - ಕನ್ನಡ ಸಮಕಾಲಿಕ ಅನುವಾದ18 ನೀನು ನನಗೆ ವಿಧೇಯನಾದದ್ದರಿಂದ, ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನೀನು ನನ್ನ ಮಾತಿಗೆ ವಿಧೇಯನಾಗಿ ಭೂಮಿಯ ಎಲ್ಲಾ ಜನಾಂಗಗಳಿಗೆ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ.” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನೀನು ನನ್ನ ಮಾತನ್ನು ಕೇಳಿದ್ದರಿಂದ ವಿಶ್ವದ ಎಲ್ಲ ರಾಷ್ಟ್ರಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಸರ್ವೇಶ್ವರನೇ ಆಣೆಯಿಟ್ಟು ಹೇಳಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನೀನು ನನ್ನ ಮಾತನ್ನು ಕೇಳಿದ್ದರಿಂದ ಭೂವಿುಯ ಎಲ್ಲಾ ಜನಾಂಗಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವದು ಎಂಬದಾಗಿ ಯೆಹೋವನು ತನ್ನಾಣೆಯಿಟ್ಟು ಹೇಳಿದ್ದಾನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನೀನು ನನಗೆ ವಿಧೇಯನಾದದ್ದರಿಂದ ನಿನ್ನ ಸಂತತಿಗಳವರ ಮೂಲಕವಾಗಿ ಭೂಮಿಯ ಮೇಲಿರುವ ಪ್ರತಿಯೊಂದು ಜನಾಂಗವೂ ಆಶೀರ್ವಾದ ಹೊಂದುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.