Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:20 - ಕನ್ನಡ ಸಮಕಾಲಿಕ ಅನುವಾದ

20 ಕೆಲ ಸಮಯದ ನಂತರ ಕೆಲವರು ಅಬ್ರಹಾಮನಿಗೆ, “ಮಿಲ್ಕಾಳು ತಾಯಾಗಿದ್ದಾಳೆ. ನಿನ್ನ ಸಹೋದರ ನಾಹೋರನಿಗೆ ಅವಳು ಮಕ್ಕಳನ್ನು ಹೆತ್ತಿದ್ದಾಳೆ,” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅಬ್ರಹಾಮನು ತನ್ನ ತಮ್ಮನಾದ ನಾಹೋರನಿಗೆ ಮಿಲ್ಕಳಲ್ಲಿ ಮಕ್ಕಳು ಹುಟ್ಟಿದ್ದಾರೆ ಎಂಬ ವರ್ತಮಾನವನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕೆಲವು ಕಾಲವಾದ ಮೇಲೆ ಅಬ್ರಹಾಮನಿಗೆ ತನ್ನ ತಮ್ಮನಾದ ನಾಹೋರನಿಗೆ ಮಿಲ್ಕಳಿಂದ ಮಕ್ಕಳಾದುವೆಂಬ ಸಮಾಚಾರ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇವುಗಳಾದ ಮೇಲೆ ಅಬ್ರಹಾಮನು ತನ್ನ ತಮ್ಮನಾದ ನಾಹೋರನಿಗೆ ವಿುಲ್ಕಳಲ್ಲಿ ಮಕ್ಕಳು ಹುಟ್ಟಿದರೆಂದು ವರ್ತಮಾನವನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಈ ಸಂಗತಿಗಳೆಲ್ಲ ನಡೆದ ಮೇಲೆ ಅಬ್ರಹಾಮನಿಗೆ ಒಂದು ಸಂದೇಶ ಬಂದಿತು. ಆ ಸಂದೇಶವು ಹೀಗಿತ್ತು: “ನಿನ್ನ ತಮ್ಮನಾದ ನಾಹೋರ ಮತ್ತು ಅವನ ಹೆಂಡತಿಯಾದ ಮಿಲ್ಕ ಈಗ ಮಕ್ಕಳನ್ನು ಹೊಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:20
10 ತಿಳಿವುಗಳ ಹೋಲಿಕೆ  

ಅಬ್ರಾಮನೂ ನಾಹೋರನೂ ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ. ಈಕೆಯು ಹಾರಾನನ ಮಗಳು. ಹಾರಾನನು ಮಿಲ್ಕಾಳಿಗೂ ಇಸ್ಕಳಿಗೂ ತಂದೆ.


ಅದಕ್ಕೆ ಆಕೆಯು, “ನಾಹೋರನಿಗೆ ಮಿಲ್ಕಾಳು ಹೆತ್ತ ಬೆತೂಯೇಲನ ಮಗಳು,” ಎಂದಳು.


ಬಾಯಾರಿದವನಿಗೆ ತಣ್ಣೀರು ಹೇಗೋ ದೂರದೇಶದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.


ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯತೀರಿಸಲಿ,” ಎಂದನು. ಆಗ ಯಾಕೋಬನು ತನ್ನ ತಂದೆ ಇಸಾಕನ ಭಯದ ಮೇಲೆ ಪ್ರಮಾಣ ಮಾಡಿದನು.


ಅವನು ಹಾಗೆ ಹೇಳುವುದನ್ನು ಮುಗಿಸುವುದಕ್ಕಿಂತ ಮುಂಚೆ ಅಬ್ರಹಾಮನ ಸಹೋದರನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಾಳ ಮಗ ಬೆತೂಯೇಲನಿಗೆ ಹುಟ್ಟಿದ ರೆಬೆಕ್ಕಳು ತನ್ನ ಕೊಡವನ್ನು ಹೆಗಲಿನ ಮೇಲೆ ಇಟ್ಟುಕೊಂಡು ಹೊರಗೆ ಬಂದಳು.


ಆಗ ಆ ಸೇವಕನು ತನ್ನ ಯಜಮಾನನ ಒಂಟೆಗಳಲ್ಲಿ ಹತ್ತು ಒಂಟೆಗಳನ್ನೂ, ತನ್ನ ಯಜಮಾನನಿಂದ ಎಲ್ಲಾ ತರಹದ ವಸ್ತ್ರಗಳನ್ನೂ ತೆಗೆದುಕೊಂಡು ಅರಾಮ್ ನಹರೈಮಿಗೆ ಹೊರಟು, ನಾಹೋರನು ವಾಸವಾಗಿದ್ದ ಊರನ್ನು ಸೇರಿದನು.


ತೆರಹನು ಎಪ್ಪತ್ತು ವರ್ಷದವನಾಗಿದ್ದಾಗ, ಅವನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು.


ಅವರು ಯಾರೆಂದರೆ, ಅವನ ಚೊಚ್ಚಲು ಮಗ ಊಚ್, ಅವನ ಸಹೋದರ ಬೂಜ್, ಅರಾಮನ ತಂದೆ ಕೆಮೂಯೇಲ್,


ತೆರಹನ ವಂಶಾವಳಿ: ತೆರಹನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು. ಹಾರಾನನಿಂದ ಲೋಟನು ಹುಟ್ಟಿದನು.


ಇವುಗಳಾದ ಮೇಲೆ ಯೆಹೋವ ದೇವರ ವಾಕ್ಯವು ಅಬ್ರಾಮನಿಗೆ ದರ್ಶನದಲ್ಲಿ ಉಂಟಾಗಿ ಹೇಳಿದ್ದೇನೆಂದರೆ: “ಅಬ್ರಾಮನೇ, ಭಯಪಡಬೇಡ. ನಾನು ನಿನಗೆ ಗುರಾಣಿಯಾಗಿದ್ದೇನೆ. ನಾನೇ ನಿನಗೆ ಅತ್ಯಧಿಕ ಬಹುಮಾನವಾಗಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು