Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:5 - ಕನ್ನಡ ಸಮಕಾಲಿಕ ಅನುವಾದ

5 ಅಬ್ರಹಾಮನು ತನ್ನ ಸೇವಕರಿಗೆ, “ಕತ್ತೆಯ ಸಂಗಡ ಇಲ್ಲಿಯೇ ಇರಿ. ನಾನೂ, ಹುಡುಗನೂ ಅಲ್ಲಿಗೆ ಹೋಗಿ, ಆರಾಧನೆ ಮಾಡಿ, ನಿಮ್ಮ ಬಳಿಗೆ ಹಿಂದಿರುಗಿ ಬರುತ್ತೇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ನೀವು ಇಲ್ಲೇ ಕತ್ತೆಯ ಬಳಿಯಲ್ಲಿರಿ; ನಾನೂ ನನ್ನ ಮಗನೂ ಅಲ್ಲಿಗೆ ಹೋಗಿ ದೇವಾರಾಧನೆ ಮಾಡಿಕೊಂಡು ನಿಮ್ಮ ಬಳಿಗೆ ಬರುತ್ತೇವೆ” ಎಂದು ಅಬ್ರಹಾಮನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವನು ತನ್ನ ಸೇವಕರಿಗೆ, “ನೀವು ಇಲ್ಲೇ ಕತ್ತೆಯನ್ನು ನೋಡಿಕೊಂಡಿರಿ; ನಾನೂ ನನ್ನ ಮಗನೂ ಅಲ್ಲಿಗೆ ಹೋಗಿ ದೇವಾರಾಧನೆ ಮಾಡಿಕೊಂಡು ಪುನಃ ಇಲ್ಲಗೆ ಬರುತ್ತೇವೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ತನ್ನ ಸೇವಕರಿಗೆ - ನೀವು ಇಲ್ಲೇ ಕತ್ತೆಯ ಬಳಿಯಲ್ಲಿರ್ರಿ; ನಾನೂ ನನ್ನ ಮಗನೂ ಅಲ್ಲಿಗೆ ಹೋಗಿ ದೇವಾರಾಧನೆ ಮಾಡಿಕೊಂಡು ನಿಮ್ಮ ಬಳಿಗೆ ತಿರಿಗಿ ಬರುತ್ತೇವೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಮೇಲೆ ಅಬ್ರಹಾಮನು ತನ್ನ ಸೇವಕರಿಗೆ, “ನೀವು ಇಲ್ಲೇ ಕತ್ತೆಯೊಂದಿಗಿರಿ; ನಾನೂ ನನ್ನ ಮಗನೂ ಆ ಸ್ಥಳಕ್ಕೆ ಹೋಗಿ ಆರಾಧಿಸುತ್ತೇವೆ. ಬಳಿಕ ನಾವು ಹಿಂತಿರುಗಿ ನಿಮ್ಮ ಬಳಿಗೆ ಬರುತ್ತೇವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:5
6 ತಿಳಿವುಗಳ ಹೋಲಿಕೆ  

ತನ್ನ ದೇವರು ಸತ್ತವರೊಳಗಿಂದ ಎಬ್ಬಿಸಲು ಸಮರ್ಥರು ಎಂದು ಅಬ್ರಹಾಮನು ತಿಳಿದಿದ್ದನು. ಅವನು ಇಸಾಕನನ್ನು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಹೊಂದಿದನು.


ಆದಕಾರಣ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಇರುವುದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನೂ ನಾವು ಎಸೆದುಬಿಟ್ಟು,


ಮೂರನೆಯ ದಿನ ಅಬ್ರಹಾಮನು ಕಣ್ಣೆತ್ತಿ ನೋಡಿದಾಗ, ಆ ಸ್ಥಳವು ದೂರದಲ್ಲಿ ಕಾಣಿಸಿತು.


ಅಬ್ರಹಾಮನು ದಹನಬಲಿಗಳ ಕಟ್ಟಿಗೆಗಳನ್ನು ತೆಗೆದುಕೊಂಡು, ತನ್ನ ಮಗ ಇಸಾಕನ ಮೇಲೆ ಹೊರಿಸಿ; ಬೆಂಕಿಯನ್ನೂ, ಕತ್ತಿಯನ್ನೂ ತನ್ನ ಕೈಯಲ್ಲಿ ತೆಗೆದುಕೊಂಡನು. ಅವರಿಬ್ಬರೂ ಹೊರಟು ಹೋದರು.


ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಹಿಂದಿರುಗಿ ಬಂದನು. ಅವರೆಲ್ಲರೂ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸಿಸಿದನು.


ಆಗ ಮೋಶೆ ಹಿರಿಯರಿಗೆ, “ನಾವು ನಿಮ್ಮ ಬಳಿಗೆ ತಿರುಗಿ ಬರುವವರೆಗೆ ಇಲ್ಲಿ ನಮಗಾಗಿ ಕಾದುಕೊಂಡಿರಿ. ಆರೋನನೂ ಹೂರನೂ ನಿಮ್ಮ ಸಂಗಡ ಇರುತ್ತಾರೆ. ಯಾರಿಗಾದರೂ ವ್ಯಾಜ್ಯವಿದ್ದರೆ ಅವರ ಬಳಿಗೆ ಹೋಗಲಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು