Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:13 - ಕನ್ನಡ ಸಮಕಾಲಿಕ ಅನುವಾದ

13 ದೇಶದ ಜನರು ಕೇಳುವಂತೆ ಎಫ್ರೋನನಿಗೆ, “ನೀನು ನನಗೆ ಕೊಡಬೇಕೆಂದಿದ್ದರೆ ನನ್ನ ಮಾತನ್ನು ಕೇಳು. ನಾನು ಹೊಲದ ಕ್ರಯವನ್ನು ಕೊಡುತ್ತೇನೆ. ಅದನ್ನು ನನ್ನಿಂದ ತೆಗೆದುಕೋ, ಆಗ ನನ್ನ ಹೆಂಡತಿಯ ಶವವನ್ನು ಅಲ್ಲಿ ಹೂಳಿಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಎಫ್ರೋನನಿಗೆ, “ಕೊಡಲಿಕ್ಕೆ ಮನಸ್ಸಿದ್ದರೆ ದಯವಿಟ್ಟು ನಾನು ಅರಿಕೆಮಾಡುವುದನ್ನು ಕೇಳು; ಆ ಭೂಮಿಗೆ ಕ್ರಯವನ್ನು ಕೊಡುತ್ತೇನೆ. ನನ್ನಿಂದ ಕ್ರಯ ತೆಗೆದುಕೊಂಡರೆ ಅದರಲ್ಲಿ ನನ್ನ ಪತ್ನಿಗೆ ಸಮಾಧಿ ಮಾಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವರೆಲ್ಲರ ಮುಂದೆ ಎಫ್ರೋನನನ್ನು ಉದ್ದೇಶಿಸಿ, “ಕೊಡಲು ಇಷ್ಟವಿದ್ದರೆ ದಯವಿಟ್ಟು ನಾನು ಅರಿಕೆ ಮಾಡುವುದನ್ನು ಕೇಳು; ಆ ಜಮೀನಿಗೆ ಕ್ರಯ ಕೊಡುತ್ತೇನೆ; ಆ ಕ್ರಯವನ್ನು ತೆಗೆದುಕೊಳ್ಳಲು ಸಮ್ಮತಿಸಿದರೆ ನನ್ನ ಪತ್ನಿಯನ್ನು ಅಲ್ಲಿ ಸಮಾಧಿ ಮಾಡುತ್ತೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕೊಡಲಿಕ್ಕೆ ಮನಸ್ಸಿದ್ದರೆ ದಯವಿಟ್ಟು ನಾನು ಅರಿಕೆಮಾಡುವದನ್ನು ಕೇಳು; ಆ ಭೂವಿುಗೆ ಕ್ರಯವನ್ನು ಕೊಡುತ್ತೇನೆ. ನನ್ನಿಂದ ಕ್ರಯ ತೆಗೆದುಕೊಂಡರೆ ಅದರಲ್ಲಿ ನನ್ನ ಪತ್ನಿಗೆ ಸಮಾಧಿಮಾಡುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅಬ್ರಹಾಮನು ಜನರೆಲ್ಲರ ಎದುರಿನಲ್ಲಿ ಎಫ್ರೋನನಿಗೆ, “ಆ ಸ್ಥಳಕ್ಕಾಗುವ ಪೂರ್ತಿ ಬೆಲೆಯನ್ನು ನಾನು ನಿನಗೆ ಕೊಡುತ್ತೇನೆ; ನೀನು ಹಣವನ್ನು ತೆಗೆದುಕೊಳ್ಳುವುದಾದರೆ, ನನ್ನ ಹೆಂಡತಿಯನ್ನು ಅಲ್ಲಿ ಸಮಾಧಿಮಾಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:13
10 ತಿಳಿವುಗಳ ಹೋಲಿಕೆ  

ಹಣದಾಶೆಯಿಂದ ನಿಮ್ಮ ಜೀವನ ದೂರವಾಗಿರಲಿ, ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ಏಕೆಂದರೆ ದೇವರು ಹೀಗೆ ಹೇಳಿದ್ದಾರೆ, “ನಾನು ನಿನ್ನನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ!”


ಪ್ರತಿಯೊಂದು ಅವಕಾಶವನ್ನೂ ಸದುಪಯೋಗ ಮಾಡಿಕೊಂಡು ಹೊರಗಿನವರೊಂದಿಗೆ ಜಾಣತನದಿಂದ ನಡೆದುಕೊಳ್ಳಿರಿ.


ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಸಾಲವೇ ಹೊರತು ನಿಮಗೆ ಬೇರೆ ಯಾವ ಸಾಲವೂ ಇರಬಾರದು. ಏಕೆಂದರೆ ಮತ್ತೊಬ್ಬರನ್ನು ಪ್ರೀತಿಸುವವನು ಮೋಶೆಯ ನಿಯಮವನ್ನೇ ನೆರವೇರಿಸಿದ್ದಾನೆ.


ಈ ರೀತಿಯ ಪರಿಶ್ರಮದ ದುಡಿಮೆಯಿಂದ ನಾವು ಬಲಹೀನರಿಗೆ ಸಹಾಯ ಮಾಡಬೇಕೆಂಬುದನ್ನು ನನ್ನ ಮಾದರಿಯಿಂದ ನಿಮಗೆ ತೋರಿಸಿಕೊಟ್ಟೆನು. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಆಶೀರ್ವಾದ,’ ಎಂದು ಕರ್ತ ಆಗಿರುವ ಯೇಸುವೇ ಹೇಳಿದ ಮಾತುಗಳನ್ನು ನಿಮಗೆ ಜ್ಞಾಪಕಪಡಿಸುತ್ತೇನೆ,” ಎಂದನು.


ಆದರೆ ಅರಸನು ಅರೌನನಿಗೆ, “ಹಾಗಲ್ಲ, ನಿಶ್ಚಯವಾಗಿ ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ಉಚಿತವಾಗಿ ಸಿಕ್ಕಿದ್ದನ್ನು ದಹನಬಲಿಯಾಗಿ ನನ್ನ ದೇವರಾದ ಯೆಹೋವ ದೇವರಿಗೆ ಅರ್ಪಿಸೆನು,” ಎಂದನು. ಹೀಗೆ ದಾವೀದನು ಆ ಕಣವನ್ನೂ, ಎತ್ತುಗಳನ್ನೂ, ಐವತ್ತು ಬೆಳ್ಳಿ ನಾಣ್ಯಗಳಿಗೆ ಕೊಂಡುಕೊಂಡನು.


ಆಗ ಅಬ್ರಹಾಮನು ದೇಶದ ಜನರ ಮುಂದೆ ತಲೆಬಾಗಿ,


ಎಫ್ರೋನನು ಅಬ್ರಹಾಮನಿಗೆ ಉತ್ತರವಾಗಿ,


ಅವನು ತನ್ನ ಗುಡಾರಗಳನ್ನು ಹಾಕಿದ ಭೂಮಿಯನ್ನು ಶೆಕೆಮಿನ ತಂದೆ ಹಮೋರನ ಮಕ್ಕಳ ಕೈಯಿಂದ ನೂರು ನಾಣ್ಯಗಳಿಗೆ ಕೊಂಡುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು