Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:17 - ಕನ್ನಡ ಸಮಕಾಲಿಕ ಅನುವಾದ

17 ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲದಲ್ಲಿರುವ ಎಫ್ರೋನನ ಹೊಲವೂ, ಆ ಹೊಲದಲ್ಲಿರುವ ಗವಿಯೂ, ಆ ಹೊಲದ ಸುತ್ತಲೂ ಇರುವ ಎಲ್ಲಾ ಮರಗಳೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲಕ್ಕೆ ಸೇರಿದ ಎಫ್ರೋನನ ಭೂಮಿಯು, ಅದಕ್ಕೆ ಸೇರಿದ ಗವಿಯು ಅದರಲ್ಲಿ ಮತ್ತು ಅದರ ಸುತ್ತಣ ಅಂಚಿನಲ್ಲಿ ಇದ್ದ ಮರಗಳ ಸಹಿತವಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲಕ್ಕೆ ಸೇರಿದ ಎಫ್ರೋನನ ಜಮೀನು, ಅದಕ್ಕೆ ಸೇರಿದ ಗವಿ, ಅದರಲ್ಲಿ ಮತ್ತು ಅದರ ಸುತ್ತಣ ಅಂಚಿನಲ್ಲಿದ್ದ ಮರಗಳು, ಇವೆಲ್ಲವೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲಕ್ಕೆ ಸೇರಿದ ಎಫ್ರೋನನ ಭೂವಿುಯು, ಅದಕ್ಕೆ ಸೇರಿದ ಗವಿಯೂ ಅದರಲ್ಲಿ ಮತ್ತು ಅದರ ಸುತ್ತಣ ಅಂಚಿನಲ್ಲಿ ಇದ್ದ ಮರಗಳೂ ಸಹಿತವಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17-18 ಈ ಜಮೀನು ಮಮ್ರೆಗೆ ಪೂರ್ವದಲ್ಲಿರುವ ಮಕ್ಪೇಲದಲ್ಲಿತ್ತು. ಅಬ್ರಹಾಮನು ಆ ಜಮೀನಿಗೂ ಅದರಲ್ಲಿದ್ದ ಗವಿಗೂ ಜಮೀನಿನಲ್ಲಿದ್ದ ಎಲ್ಲಾ ಮರಗಳಿಗೂ ಒಡೆಯನಾದನು. ಎಫ್ರೋನನಿಗೂ ಅಬ್ರಹಾಮನಿಗೂ ಆದ ಒಪ್ಪಂದಕ್ಕೆ ನಗರದವರೆಲ್ಲರು ಸಾಕ್ಷಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:17
14 ತಿಳಿವುಗಳ ಹೋಲಿಕೆ  

ಅವನ ಪುತ್ರರು ಅವನನ್ನು ಕಾನಾನ್ ದೇಶಕ್ಕೆ ತೆಗೆದುಕೊಂಡುಹೋಗಿ, ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವಂಥ ಮಕ್ಪೇಲ ಹೊಲದ ಗವಿಯಲ್ಲಿ ಹೂಳಿದರು.


ಅವನ ಪುತ್ರರಾದ ಇಸಾಕನೂ, ಇಷ್ಮಾಯೇಲನೂ ಮಮ್ರೆಗೆ ಎದುರಾಗಿರುವ ಹಿತ್ತಿಯನಾದ ಚೋಹರನ ಮಗ ಎಫ್ರೋನನ ಹೊಲದಲ್ಲಿರುವ ಮಕ್ಪೇಲ ಎಂಬ ಗವಿಯಲ್ಲಿ ಅವನನ್ನು ಹೂಳಿಟ್ಟರು.


ಆ ಹೊಲವೂ, ಅದರಲ್ಲಿರುವ ಗವಿಯೂ ಹಿತ್ತಿಯರಿಂದ ಅಬ್ರಹಾಮನಿಗೆ ಸ್ವಂತ ಸಮಾಧಿ ಎಂದು ಸ್ಥಿರವಾಯಿತು.


ಅವರ ಮೃತಶರೀರವನ್ನು ಶೇಕೆಮಿಗೆ ತಂದರು. ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಕ್ರಯಕೊಟ್ಟು ಕೊಂಡುಕೊಂಡಿದ್ದ ಸಮಾಧಿಯಲ್ಲಿ ಇಟ್ಟರು.


ಪ್ರತಿಯೊಂದು ಅವಕಾಶವನ್ನೂ ಸದುಪಯೋಗ ಮಾಡಿಕೊಂಡು ಹೊರಗಿನವರೊಂದಿಗೆ ಜಾಣತನದಿಂದ ನಡೆದುಕೊಳ್ಳಿರಿ.


ಆದಕಾರಣ ನೀವು ಹೇಗೆ ಜೀವಿಸಬೇಕೆಂದು ಜಾಗರೂಕರಾಗಿರಿ. ಅಜ್ಞಾನಿಗಳಂತಿರದೆ, ಜಾಣರಾಗಿ ಜೀವಿಸಿರಿ.


“ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದ್ದರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ದಯೆತೋರಿಸಿ ಸಾಲಕೊಡುವವರಿಗೆ, ಒಳ್ಳೆಯದಾಗುವುದು; ಅವರು ತಮ್ಮ ಕಾರ್ಯಗಳನ್ನು ನ್ಯಾಯದಿಂದ ನಡೆಸುವರು.


ನನ್ನ ತಂದೆಯ ಸಂಗಡ ನಾನು ಮಲಗಬೇಕು. ಈಜಿಪ್ಟಿನಿಂದ ನನ್ನನ್ನು ತೆಗೆದುಕೊಂಡುಹೋಗಿ, ಅವರ ಸಮಾಧಿಯ ಸ್ಥಳದಲ್ಲಿ ನನ್ನನ್ನು ಹೂಳಿಡು,” ಎಂದನು. ಅದಕ್ಕವನು, “ನಿನ್ನ ಮಾತಿನ ಪ್ರಕಾರ ನಾನು ಮಾಡುತ್ತೇನೆ,” ಎಂದನು.


ಅಬ್ರಹಾಮನು ಅದನ್ನು ಹಿತ್ತಿಯರಿಂದ ಕೊಂಡುಕೊಂಡಿದ್ದನು. ಅಬ್ರಹಾಮನಿಗೂ, ಅವನ ಹೆಂಡತಿ ಸಾರಳಿಗೂ ಒಂದೇ ಸ್ಥಳದಲ್ಲಿ ಸಮಾಧಿ ಆಯಿತು.


ನೀನು ಬೆಳಕನ್ನೂ ಕತ್ತಲನ್ನೂ ಅವುಗಳ ಸ್ಥಳಕ್ಕೆ ತೆಗೆದುಕೊಂಡು ಹೋಗಬಲ್ಲೆಯಾ? ಅವು ತಮ್ಮ ಮನೆಗಳಿಗೆ ಹೋಗುವ ಹಾದಿಗಳನ್ನು ನೀನು ಬಲ್ಲೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು