Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:19 - ಕನ್ನಡ ಸಮಕಾಲಿಕ ಅನುವಾದ

19 ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿ ಸಾರಳನ್ನು ಕಾನಾನ್ ದೇಶದಲ್ಲಿ ಹೆಬ್ರೋನ್ ಎಂಬ ಮಮ್ರೆಗೆ ಎದುರಾಗಿರುವ ಮಕ್ಪೇಲ ಹೊಲದ ಗವಿಯಲ್ಲಿ ಹೂಳಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ಶವವನ್ನು ಕಾನಾನ್ ದೇಶದಲ್ಲಿ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಭೂಮಿಯಲ್ಲಿರುವ ಗವಿಯೊಳಗೆ ಹೂಣಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇದಾದ ಮೇಲೆ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಜಮೀನಿನಲ್ಲಿರುವ ಗವಿಯೊಳಗೆ ಸಮಾಧಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ಶವವನ್ನು ಕಾನಾನ್‍ದೇಶದಲ್ಲಿ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಭೂವಿುಯಲ್ಲಿರುವ ಗವಿಯೊಳಗೆ ಹೂಣಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಬಳಿಕ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳನ್ನು ಮಮ್ರೆಗೆ ಸಮೀಪದಲ್ಲಿದ್ದ ಜಮೀನಿನ ಗವಿಯಲ್ಲಿ ಸಮಾಧಿಮಾಡಿದನು. (ಅದು ಕಾನಾನ್ ದೇಶದ ಹೆಬ್ರೋನ್).

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:19
14 ತಿಳಿವುಗಳ ಹೋಲಿಕೆ  

ಆಮೇಲೆ ಮಣ್ಣಿನ ದೇಹ ಅದು ಇದ್ದ ಹಾಗೆಯೇ ಭೂಮಿಗೆ ಸೇರುವುದು. ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂದಿರುಗುವುದು.


ಎತ್ತರವನ್ನು ಕಂಡು ಹೆದರಿಕೆಯಾಗುವುದು. ದಾರಿಯ ಅಪಾಯಗಳ ಬಗ್ಗೆ ಅಂಜಿಕೆಯಾಗುವುದು. ಬಾದಾಮಿಯ ಮರದಂತೆ ಹೂವು ಬಿಡುವುದು. ಮಿಡತೆಯು ಸಹ ಭಾರಾವಾಗಿರುವುದು. ಆಸೆ ಕುಂದಿಹೋಗುವುದು. ಈ ರೀತಿಯಾಗಿ ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಟು ಹೋಗುವರು. ಗೋಳಾಡುವವರು ಬೀದಿಯಲ್ಲಿ ತಿರುಗಾಡುವರು.


ಒಬ್ಬ ಮನುಷ್ಯನಿಗೆ ನೂರು ಮಕ್ಕಳಿರಬಹುದು ಮತ್ತು ಅವನು ಬಹಳ ವರ್ಷ ಬದುಕಿರಬಹುದು. ಅವನು ತನ್ನ ಐಶ್ವರ್ಯವನ್ನು ಅನುಭವಿಸದೆ, ಸರಿಯಾದ ಶವಸಂಸ್ಕಾರ ಇಲ್ಲದೆ ಹೋದರೆ ಅವನಿಗಿಂತಲೂ ಮೃತ ಸ್ಧಿತಿಯಲ್ಲಿ ಹುಟ್ಟಿರುವ ಕೂಸೇ ಮೇಲು ಎಂದುಕೊಂಡೆ.


ದೇವರೇ, ನೀವು ನನ್ನನ್ನು ಎಲ್ಲಾ ಜೀವಿಗಳಿಗೆ ನೇಮಕವಾದ ಮನೆಯೆಂಬ ಮರಣಕ್ಕೆ, ಸೇರಿಸುವಿರಿ ಎಂದು ನನಗೆ ಗೊತ್ತಿದೆ.


ಯೋಸೇಫನು ಇಸ್ರಾಯೇಲನ ಮಕ್ಕಳಿಗೆ, “ದೇವರು ನಿಶ್ಚಯವಾಗಿ ನಿಮಗೆ ಸಹಾಯ ಮಾಡುವರು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಬೇಕು,” ಎಂದು ಪ್ರಮಾಣ ಮಾಡಿಸಿದನು.


ಅವನ ಪುತ್ರರು ಅವನನ್ನು ಕಾನಾನ್ ದೇಶಕ್ಕೆ ತೆಗೆದುಕೊಂಡುಹೋಗಿ, ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವಂಥ ಮಕ್ಪೇಲ ಹೊಲದ ಗವಿಯಲ್ಲಿ ಹೂಳಿದರು.


ನನ್ನ ತಂದೆಯ ಸಂಗಡ ನಾನು ಮಲಗಬೇಕು. ಈಜಿಪ್ಟಿನಿಂದ ನನ್ನನ್ನು ತೆಗೆದುಕೊಂಡುಹೋಗಿ, ಅವರ ಸಮಾಧಿಯ ಸ್ಥಳದಲ್ಲಿ ನನ್ನನ್ನು ಹೂಳಿಡು,” ಎಂದನು. ಅದಕ್ಕವನು, “ನಿನ್ನ ಮಾತಿನ ಪ್ರಕಾರ ನಾನು ಮಾಡುತ್ತೇನೆ,” ಎಂದನು.


ನೀನು ಪುನಃ ಮಣ್ಣಿಗೆ ಸೇರುವ ತನಕ, ಬೆವರಿಡುತ್ತಾ ಆಹಾರವನ್ನು ಉಣ್ಣುವೆ. ನೀನು ಮಣ್ಣಿನಿಂದ ತೆಗೆದವನಾಗಿರುವುದರಿಂದ ನೀನು ಮಣ್ಣೇ. ನೀನು ಪುನಃ ಮಣ್ಣಿಗೆ ಸೇರತಕ್ಕವನು.”


ಹಿತ್ತಿಯರ ಮುಂದೆಯೂ, ಅವರ ಪಟ್ಟಣದ ಹೆಬ್ಬಾಗಿಲಿನಲ್ಲಿ ಸೇರುವ ಎಲ್ಲರ ಮುಂದೆಯೂ ಅಬ್ರಹಾಮನ ಆಸ್ತಿಯೆಂದು ದೃಢವಾಯಿತು.


ಆ ಹೊಲವೂ, ಅದರಲ್ಲಿರುವ ಗವಿಯೂ ಹಿತ್ತಿಯರಿಂದ ಅಬ್ರಹಾಮನಿಗೆ ಸ್ವಂತ ಸಮಾಧಿ ಎಂದು ಸ್ಥಿರವಾಯಿತು.


ಯಾಕೋಬನು ಅವನಿಗೆ, “ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ, ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು,” ಎಂದು ಹೇಳಿ ಹೆಬ್ರೋನ್ ಕಣಿವೆಯಿಂದ ಕಳುಹಿಸಿದನು. ಯೋಸೇಫನು ಶೆಕೆಮಿಗೆ ಬಂದಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು