Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:6 - ಕನ್ನಡ ಸಮಕಾಲಿಕ ಅನುವಾದ

6 “ಒಡೆಯಾ, ನಮ್ಮ ಮಾತನ್ನು ಕೇಳು, ನೀನು ನಮ್ಮ ಮಧ್ಯದಲ್ಲಿ ಮಹಾಪ್ರಭುವಾಗಿದ್ದೀ. ನಮ್ಮ ಸಮಾಧಿಗಳೊಳಗೆ ಉತ್ತಮವಾದದ್ದರಲ್ಲಿ ನಿನ್ನ ಹೆಂಡತಿಯ ಶವವನ್ನು ಹೂಳಿಡು. ನಮ್ಮಲ್ಲಿ ಯಾರೂ ನಿನಗೆ ಸಮಾಧಿಯನ್ನು ಕೊಡುವುದಿಲ್ಲ ಎಂದು ಹೇಳಲಾರರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಸ್ವಾಮಿ, ನಮ್ಮ ಮಾತನ್ನು ಕೇಳು. ನೀನು ನಮಗೆ ಮಹಾ ಪ್ರಭುವಾಗಿದ್ದೀಯಷ್ಟೆ. ಮರಣಹೊಂದಿರುವ ನಿನ್ನ ಪತ್ನಿಯ ದೇಹವನ್ನು ನಮಗಿರುವ ಸಮಾಧಿಯೊಳಗೆ ಶೇಷ್ಠವಾದದ್ದರಲ್ಲಿ ಇಡಬಹುದು. ನಿನ್ನ ಹೆಂಡತಿಯ ಶವವನ್ನು ಇಡುವುದಕ್ಕೆ ನಮ್ಮೊಳಗೆ ಯಾರೂ ಸ್ಮಶಾನ ಭೂಮಿಯನ್ನು ಕೊಡುವುದಕ್ಕೆ ಹಿಂದೆಗೆಯುವುದಿಲ್ಲ” ಎಂದು ಉತ್ತರ ಕೊಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಸ್ವಾಮೀ, ನೀನು ನಮ್ಮ ಮಹಾನಾಯಕರುಗಳಲ್ಲಿ ಒಬ್ಬನು. ತೀರಿಕೊಂಡ ನಿನ್ನ ಹೆಂಡತಿಯ ಸಮಾಧಿಗಾಗಿ ನಮ್ಮಲ್ಲಿರುವ ಸ್ಮಶಾನಗಳಲ್ಲಿ ಅತ್ಯುತ್ತಮವಾದ ಸ್ಥಳವನ್ನು ನೀನು ತೆಗೆದುಕೊಳ್ಳಬಹುದು. ನಿನ್ನ ಹೆಂಡತಿಯನ್ನು ಸಮಾಧಿಮಾಡಲು ನಮ್ಮಲ್ಲಿ ಯಾರೂ ಅಡ್ಡಿ ಮಾಡುವುದಿಲ್ಲ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:6
19 ತಿಳಿವುಗಳ ಹೋಲಿಕೆ  

ಯೆಹೋವ ದೇವರು ನನ್ನ ಯಜಮಾನನನ್ನು ಬಹಳವಾಗಿ ಆಶೀರ್ವದಿಸಿದ್ದರಿಂದ ಅವನು ಧನವಂತನಾದನು. ದೇವರು ಅವನಿಗೆ ಕುರಿದನ, ಬೆಳ್ಳಿಬಂಗಾರ, ದಾಸದಾಸಿ, ಒಂಟೆಗಳು ಮತ್ತು ಕತ್ತೆಗಳನ್ನು ಕೊಟ್ಟಿದ್ದಾರೆ.


ತನ್ನ ಸಹೋದರನ ಮಗನು ಸೆರೆಯಾಗಿ ಹೋಗಿರುವುದನ್ನು ಕೇಳಿದಾಗ, ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿ, ಶಿಕ್ಷಿತರಾಗಿದ್ದ ಮುನ್ನೂರ ಹದಿನೆಂಟು ಸೇವಕರನ್ನು ಯುದ್ಧಕ್ಕೆ ಸಿದ್ಧಮಾಡಿ, ದಾನಿನವರೆಗೆ ಹಿಂದಟ್ಟಿದನು.


ಯೆಹೋವ ದೇವರು ಹೇಳುವುದೇನೆಂದರೆ: “ಈಜಿಪ್ಟಿನ ಆದಾಯವೂ, ಇಥಿಯೋಪಿಯದ ವ್ಯಾಪಾರವೂ, ಎತ್ತರದ ಮನುಷ್ಯರಾದ ಶೆಬದವರೂ ನಿಮ್ಮಲ್ಲಿಗೆ ಸೇರಿ, ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು, ನಿಮ್ಮ ಮುಂದೆ ಅಡ್ಡಬಿದ್ದು, ‘ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊಬ್ಬನಿಲ್ಲ; ಬೇರೆ ದೇವರು ಇಲ್ಲವೇ ಇಲ್ಲ.’ ”


ಅದಕ್ಕೆ ಆರೋನನು, “ನನ್ನ ಒಡೆಯನೇ ಕೋಪಗೊಳ್ಳಬೇಡಿ ಈ ಜನರು ಕೆಡುಕಿನ ಮನಸ್ಸಿನವರಾಗಿದ್ದಾರೆಂದು ನೀವು ಬಲ್ಲಿರಿ.


ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಿಮಗೆ ಕೊಡುವುದಕ್ಕೆ ಕಾನಾನ್ ದೇಶದಿಂದ ತಂದೆವು. ಹೀಗಿರಲು ನಿನ್ನ ಯಜಮಾನನ ಮನೆಯೊಳಗಿಂದ ಬೆಳ್ಳಿಬಂಗಾರವನ್ನು ಹೇಗೆ ಕದ್ದುಕೊಂಡೇವು?


ಆ ಪಾತ್ರೆಯು ನನ್ನ ಒಡೆಯನು ಕುಡಿಯುವ ಪಾತ್ರೆಯಲ್ಲವೋ? ಅದರಿಂದ ನಿಜವಾಗಿಯೂ ಅವನು ದೈವೋಕ್ತಿಯನ್ನು ಹೇಳುವನಲ್ಲಾ? ನೀವು ಹೀಗೆ ಮಾಡಿದ್ದು ಕೆಟ್ಟದ್ದಾಗಿದೆ,’ ಎಂದು ಅವರಿಗೆ ಹೇಳು,” ಎಂದನು.


ಅದಕ್ಕವರು, “ಅಲ್ಲ, ನಮ್ಮ ಒಡೆಯಾ, ನಿನ್ನ ದಾಸರಾದ ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕೆ ಬಂದಿದ್ದೇವೆ.


ನೀನು ಅವನಿಗೆ, ‘ಇವು ನಿನ್ನ ದಾಸನಾದ ಯಾಕೋಬನವುಗಳೇ, ಇದು ನನ್ನ ಯಜಮಾನನಾದ ಏಸಾವನಿಗೆ ಕಳುಹಿಸಲಾದ ಕಾಣಿಕೆ, ಅವನೂ ನಮ್ಮ ಹಿಂದೆ ಇದ್ದಾನೆ,’ ಎಂದು ಅವನಿಗೆ ಹೇಳಬೇಕು,” ಎಂದು ಆಜ್ಞಾಪಿಸಿದನು.


ರಾಹೇಲಳು ತನ್ನ ತಂದೆಗೆ, “ಅಪ್ಪಾ, ನಾನು ನಿನ್ನ ಮುಂದೆ ಎದ್ದು ನಿಂತುಕೊಳ್ಳದೇ ಇರುವುದರಿಂದ, ನನ್ನ ಮೇಲೆ ಕೋಪಬಾರದೆ ಇರಲಿ. ಏಕೆಂದರೆ ನಾನು ಮುಟ್ಟಾಗಿದ್ದೇನೆ,” ಎಂದಳು. ಅವನು ಹುಡುಕಿ ಆ ವಿಗ್ರಹಗಳನ್ನು ಕಂಡುಕೊಳ್ಳದೆ ಹೋದನು.


ಅದಕ್ಕವಳು, “ನನ್ನ ಒಡೆಯನೇ, ಕುಡಿ,” ಎಂದು ಹೇಳಿ, ತ್ವರೆಯಾಗಿ ತನ್ನ ಕೊಡವನ್ನು ಕೈಯಿಂದ ಇಳಿಸಿ, ಅವನಿಗೆ ಕುಡಿಯಲು ಕೊಟ್ಟಳು.


ಆ ಕಾಲದಲ್ಲಿ ಅಬೀಮೆಲೆಕನೂ, ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮನಿಗೆ, “ನೀನು ಮಾಡುವ ಎಲ್ಲಾ ಕೆಲಸಕಾರ್ಯಗಳಲ್ಲಿಯೂ ದೇವರು ನಿನ್ನ ಸಂಗಡ ಇದ್ದಾರೆ.


ಆದ್ದರಿಂದ ಸಾರಳು ತನ್ನೊಳಗೆ ನಕ್ಕು, “ನಾನು ವೃದ್ಧಳಾಗಿದ್ದೇನೆ, ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರುವಲ್ಲಿ ನನ್ನಿಂದ ಮಗುವನ್ನು ಹೆರುವದಾದೀತೇ?” ಎಂದುಕೊಂಡಳು.


ಅಬ್ರಾಮನು ಪಶುಗಳು, ಬೆಳ್ಳಿ ಮತ್ತು ಬಂಗಾರವನ್ನು ಹೊಂದಿ ಬಹು ಧನವಂತನಾಗಿದ್ದನು.


ಅದಕ್ಕೆ ಅವಳು, “ನನ್ನ ಒಡೆಯನೇ, ನನಗೆ ನಿಮ್ಮ ದೃಷ್ಟಿಯಲ್ಲಿ ಉಪಕಾರವಾಗಲಿ. ಏಕೆಂದರೆ ನಾನು ನಿಮ್ಮ ದಾಸಿಯರಲ್ಲಿ ಒಬ್ಬಳಂತೆ ನಿಲ್ಲುವುದಕ್ಕೂ ಯೋಗ್ಯಳಲ್ಲ ಆದರೂ ದಯೆಯಿಂದ ಮಾತನಾಡಿಸಿದಿರಿ” ಎಂದಳು.


ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸಿಬಿಡು. ಏಕೆಂದರೆ ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವಂತೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ, ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ,” ಎಂದರು.


ಹಿತ್ತಿಯರು ಅಬ್ರಹಾಮನಿಗೆ ಉತ್ತರಕೊಟ್ಟು,


ಆಗ ಅಬ್ರಹಾಮನು ಎದ್ದು, ಆ ದೇಶದ ಜನರಾದ ಹಿತ್ತಿಯರ ಮುಂದೆ ತಲೆಬಾಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು