Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:9 - ಕನ್ನಡ ಸಮಕಾಲಿಕ ಅನುವಾದ

9 ಅವನು ತನ್ನ ಹೊಲದ ಅಂಚಿನಲ್ಲಿರುವ ಮಕ್ಪೇಲಾ ಗವಿಯನ್ನು ನನಗೆ ಕೊಡಲಿ. ಅವನು ಅದನ್ನು ತಕ್ಕ ಕ್ರಯಕ್ಕೆ ನಿಮ್ಮ ಎದುರಿನಲ್ಲಿ ನನಗೆ ಕೊಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನ ಭೂಮಿಯ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಿಸಿ ಎಂದು ಕೇಳಿದನು. ಅವನು ನನ್ನ ಸ್ವಂತಕ್ಕೆ ಈ ಸಮಾಧಿಯ ಸ್ಥಳ ನಿಮ್ಮೆದುರಿನಲ್ಲಿ ನನಗೆ ಕೊಟ್ಟರೆ ಪೂರ್ಣ ಕ್ರಯವನ್ನು ಕೊಡುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವನ ಜಮೀನಿನ ಅಂಚಿನಲ್ಲಿರುವ ಮಕ್ಪೇಲದ ಗವಿಯನ್ನು ನನಗೆ ಕೊಡಿಸಬೇಕೆಂದು ವಿನಂತಿಸುತ್ತೇನೆ. ಅವನು ಆ ಸಮಾಧಿಯ ಸ್ಥಳವನ್ನು ನನ್ನ ಸ್ವಂತಕ್ಕೆ ನಿಮ್ಮ ಎದುರಿಗೇ ಬಿಟ್ಟುಕೊಟ್ಟರೆ ಪೂರ್ಣಕ್ರಯವನ್ನು ಕೊಟ್ಟುಬಿಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನ ಭೂವಿುಯ ಅಂಚಿನಲ್ಲಿರುವ ಮಕ್ಪೇಲದ ಗವಿಯನ್ನು ನನಗೆ ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ. ಅವನು ಸಮಾಧಿಯ ಸ್ಥಳವನ್ನು ನನ್ನ ಸ್ವಂತಕ್ಕಾಗಿ ನಿಮ್ಮೆದುರಿನಲ್ಲಿ ಕೊಟ್ಟರೆ ಪೂರ್ಣಕ್ರಯವನ್ನು ಕೊಡುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮಕ್ಪೇಲದ ಗವಿಯನ್ನು ಕೊಂಡುಕೊಳ್ಳಲು ನನಗೆ ಇಷ್ಟವಿದೆ. ಅದು ಎಫ್ರೋನನದು. ಅದು ಅವನ ಜಮೀನಿನ ಅಂಚಿನಲ್ಲಿದೆ. ಅದಕ್ಕಾಗುವ ಬೆಲೆಯನ್ನು ನಾನು ಪೂರ್ತಿ ಕೊಡುತ್ತೇನೆ. ನಾನು ಅದನ್ನು ಸಮಾಧಿಯ ಸ್ಥಳಕ್ಕಾಗಿ ಕೊಂಡುಕೊಂಡಿರುವೆ ಎಂಬುದಕ್ಕೆ ನೀವೆಲ್ಲರೂ ಸಾಕ್ಷಿಗಳಾಗಿರಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:9
10 ತಿಳಿವುಗಳ ಹೋಲಿಕೆ  

ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಸಾಲವೇ ಹೊರತು ನಿಮಗೆ ಬೇರೆ ಯಾವ ಸಾಲವೂ ಇರಬಾರದು. ಏಕೆಂದರೆ ಮತ್ತೊಬ್ಬರನ್ನು ಪ್ರೀತಿಸುವವನು ಮೋಶೆಯ ನಿಯಮವನ್ನೇ ನೆರವೇರಿಸಿದ್ದಾನೆ.


ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿಯೂ ಒಳ್ಳೆಯದನ್ನು ಮಾಡಿರಿ.


“ನಾನು ನಿಮ್ಮೊಂದಿಗೆ ಪರದೇಶಸ್ಥನೂ, ಪರವಾಸಿಯೂ ಆಗಿದ್ದೇನೆ. ನನಗೆ ನಿಮ್ಮ ಬಳಿಯಲ್ಲಿ ಸಮಾಧಿಯ ಸ್ಥಳವನ್ನು ಕೊಡಿರಿ. ಆಗ ನನ್ನ ಹೆಂಡತಿಯ ಶವವನ್ನು ಹೂಳಿಡುವೆನು,” ಎಂದನು.


ಅವರ ಸಂಗಡ ಮಾತನಾಡಿ, “ನಾನು ನನ್ನ ಹೆಂಡತಿಯ ಶವವನ್ನು ಹೂಳಿಡುವುದು ನಿಮ್ಮ ಮನಸ್ಸಿಗೆ ಸರಿಬಿದ್ದರೆ, ನನ್ನ ಮಾತು ಕೇಳಿ ಚೋಹರನ ಮಗ ಎಫ್ರೋನನನ್ನು ನನಗಾಗಿ ಬೇಡಿಕೊಳ್ಳಿರಿ.


ಆಗ ಅವರ ಮಧ್ಯದಲ್ಲಿ ಕುಳಿತುಕೊಂಡಿದ್ದ ಹಿತ್ತಿಯನಾದ ಎಫ್ರೋನನು ಪಟ್ಟಣದ ದ್ವಾರದ ಬಳಿಯಲ್ಲಿ ಕೂತಿದ್ದ ಎಲ್ಲಾ ಹಿತ್ತಿಯರು ಕೇಳುವಂತೆ ಅಬ್ರಹಾಮನಿಗೆ,


ಅಬ್ರಹಾಮನು ಅದನ್ನು ಹಿತ್ತಿಯರಿಂದ ಕೊಂಡುಕೊಂಡಿದ್ದನು. ಅಬ್ರಹಾಮನಿಗೂ, ಅವನ ಹೆಂಡತಿ ಸಾರಳಿಗೂ ಒಂದೇ ಸ್ಥಳದಲ್ಲಿ ಸಮಾಧಿ ಆಯಿತು.


ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನೆಂದರೆ, “ನಾನು ನನ್ನ ಜನರೊಂದಿಗೆ ಸೇರಿಕೊಳ್ಳುತ್ತೇನೆ. ನನ್ನ ಪಿತೃಗಳ ಸಂಗಡ ಹಿತ್ತಿಯನಾದ ಎಫ್ರೋನನ ಹೊಲದಲ್ಲಿರುವ ಗವಿಯಲ್ಲಿ


ಅವನ ಪುತ್ರರು ಅವನನ್ನು ಕಾನಾನ್ ದೇಶಕ್ಕೆ ತೆಗೆದುಕೊಂಡುಹೋಗಿ, ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವಂಥ ಮಕ್ಪೇಲ ಹೊಲದ ಗವಿಯಲ್ಲಿ ಹೂಳಿದರು.


ಆಗ ದಾವೀದನು ಒರ್ನಾನನಿಗೆ, “ಈ ವ್ಯಾಧಿಯು, ಜನರನ್ನು ಬಿಟ್ಟುಹೋಗುವಂತೆ ನಾನು ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ, ಈ ಕಣದ ಸ್ಥಳವನ್ನು ನನಗೆ ಕೊಡು. ಅದನ್ನು ಪೂರ್ಣ ಕ್ರಯಕ್ಕೆ ನನಗೆ ಕೊಡು,” ಎಂದನು.


ಅರಸ ದಾವೀದನು ಒರ್ನಾನನಿಗೆ, “ಹಾಗಲ್ಲ, ನಾನು ನಿನ್ನಿಂದ ಪೂರ್ಣ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನಿನ್ನದನ್ನು ಕ್ರಯವಿಲ್ಲದೆ ತೆಗೆದುಕೊಂಡು, ಯೆಹೋವ ದೇವರಿಗೆ ದಹನಬಲಿಯಾಗಿ ಅರ್ಪಿಸಲು ನನಗೆ ಇಷ್ಟವಿಲ್ಲ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು