Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:11 - ಕನ್ನಡ ಸಮಕಾಲಿಕ ಅನುವಾದ

11 ಆಗ ಸ್ತ್ರೀಯರು ನೀರು ತರಲು ಬರುವ ಸಂಜೆಯ ಸಮಯವಾಗಿತ್ತು. ಅವನು ಪಟ್ಟಣದ ಹೊರಗೆ ನೀರಿನ ಬಾವಿಯ ಬಳಿಯಲ್ಲಿ ಒಂಟೆಗಳನ್ನು ಮಲಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸಾಯಂಕಾಲದಲ್ಲಿ ಸ್ತ್ರೀಯರು ನೀರು ತರುವುದಕ್ಕೆ ಹೋಗುವಾಗ ಅವನು ಊರಿನ ಹೊರಗಡೆ ಬಾವಿಯ ಹತ್ತಿರ ಒಂಟೆಗಳನ್ನು ಮಲಗಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸಂಜೆ, ಹೆಣ್ಣುಮಕ್ಕಳು ನೀರು ಹೊರುವುದಕ್ಕೆ ಬರುವ ವೇಳೆಗೆ, ಅವನು ಊರ ಹೊರಗಡೆ ಬಾವಿಯ ಬಳಿ ಒಂಟೆಗಳನ್ನು ಮಲಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸಾಯಂಕಾಲದಲ್ಲಿ ಸ್ತ್ರೀಯರು ನೀರುತರುವದಕ್ಕೆ ಹೋಗುವಾಗ ಅವನು ಊರಿನ ಹೊರಗಡೆ ಬಾವಿಯ ಹತ್ತಿರ ಒಂಟೆಗಳನ್ನು ಮಲಗಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವನು ಊರ ಹೊರಗಿದ್ದ ಬಾವಿಯ ಬಳಿಯಲ್ಲಿ ಒಂಟೆಗಳನ್ನು ಮಲಗಿಸಿದನು; ಪ್ರತಿಸಾಯಂಕಾಲ ಸ್ತ್ರೀಯರು ನೀರನ್ನು ತೆಗೆದುಕೊಂಡು ಹೋಗುವುದಕ್ಕಾಗಿ ಆ ಬಾವಿಗೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:11
10 ತಿಳಿವುಗಳ ಹೋಲಿಕೆ  

ಅವರು ದಿಣ್ಣೆಯನ್ನು ಹತ್ತಿ ಪಟ್ಟಣದೊಳಗೆ ಹೋಗುವಾಗ, ನೀರು ಸೇದಲು ಬರುವ ಹುಡುಗಿಯರನ್ನು ಕಂಡು, “ದರ್ಶಿಯು ಇಲ್ಲಿ ಇದ್ದಾನೋ?” ಎಂದು ಅವರನ್ನು ಕೇಳಿದರು.


ಆಗ ಸಮಾರ್ಯದವಳಾದ ಒಬ್ಬ ಸ್ತ್ರೀಯು ನೀರು ಸೇದುವುದಕ್ಕಾಗಿ ಬಂದಳು. ಯೇಸು ಆಕೆಗೆ, “ನನಗೆ ಕುಡಿಯುವುದಕ್ಕೆ ನೀರು ಕೊಡು,” ಎಂದರು.


ಮಿದ್ಯಾನಿನ ಯಾಜಕನಿಗೆ ಏಳುಮಂದಿ ಪುತ್ರಿಯರಿದ್ದರು. ಇವರು ಬಂದು ತಮ್ಮ ತಂದೆಯ ಕುರಿಮಂದೆಗಳಿಗೆ ನೀರು ಕುಡಿಸುವದಕ್ಕಾಗಿ ನೀರು ಸೇದಿ, ದೋಣಿಗಳನ್ನು ತುಂಬಿಸುತ್ತಿದ್ದರು.


ನೀತಿವಂತನು ತನ್ನ ಪ್ರಾಣಿಗಳಿಗೂ ಕಾಳಜಿ ತೋರುವನು; ಆದರೆ ದುಷ್ಟರ ಕರುಣೆಯ ಕಾರ್ಯಗಳು ಕ್ರೂರತನವೇ.


“ಈ ದಿನ ನಾನು ಆ ಬಾವಿಯ ಬಳಿಗೆ ಬಂದಾಗ, ‘ನನ್ನ ಯಜಮಾನನಾದ ಅಬ್ರಹಾಮನ ದೇವರಾದ ಯೆಹೋವ ದೇವರೇ, ನೀವು ಬಯಸಿದರೆ, ದಯವಿಟ್ಟು ನಾನು ಬಂದ ಪ್ರಯಾಣಕ್ಕೆ ನೀವು ಸಫಲ ಮಾಡಿದ್ದಾದರೆ,


ಅವನು ಕಣ್ಣೆತ್ತಿ ನೋಡಲಾಗಿ, ಹೊಲದಲ್ಲಿ ಒಂದು ಬಾವಿ ಇತ್ತು. ಅದರ ಸಮೀಪದಲ್ಲಿ ಮೂರು ಕುರಿಮಂದೆಗಳು ಮಲಗಿದ್ದವು. ಏಕೆಂದರೆ ಆ ಬಾವಿಯ ನೀರನ್ನು ಮಂದೆಗಳಿಗೆ ಕುಡಿಸುತ್ತಿದ್ದರು. ಆ ಬಾವಿಯ ಮೇಲೆ ಒಂದು ದೊಡ್ಡ ಕಲ್ಲು ಇತ್ತು.


ಫರೋಹನು ಈ ವಿಷಯವನ್ನು ಕೇಳಿದಾಗ, ಮೋಶೆಯನ್ನು ಕೊಂದುಹಾಕುವುದಕ್ಕೆ ಪ್ರಯತ್ನಿಸಿದನು. ಆದರೆ ಮೋಶೆಯು ಫರೋಹನ ಎದುರಿನಿಂದ ಓಡಿಹೋಗಿ ಮಿದ್ಯಾನ್ ದೇಶಕ್ಕೆ ವಾಸಿಸಲು ಹೋದನು. ಅಲ್ಲಿ ಒಂದು ಬಾವಿಯ ಬಳಿಯಲ್ಲಿ ಕೂತುಕೊಂಡನು.


ನೀರು ಸೇದುವ ಸ್ಥಳಗಳ ಹತ್ತಿರ ಗಾಯಕರ ಶಬ್ದದಿಂದ ಯೆಹೋವ ದೇವರ ನೀತಿಸಾಧನೆಗಳನ್ನು ವರ್ಣಿಸುತ್ತಾರೆ. ಇಸ್ರಾಯೇಲಿನಲ್ಲಿ ಅವರ ಹಳ್ಳಿಗಳ ನಿವಾಸಿಗಳಿಗೆ ಮಾಡಿದ ಮಹತ್ಕಾರ್ಯಗಳನ್ನು ತಿರುಗಿ ಪ್ರಕಟಿಸುವರು. “ಆಗ ಯೆಹೋವ ದೇವರ ಜನರು ಪಟ್ಟಣದ ಬಾಗಿಲುಗಳಿಗೆ ಇಳಿದು ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು