Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:12 - ಕನ್ನಡ ಸಮಕಾಲಿಕ ಅನುವಾದ

12 ಆಗ ಅವನು, “ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಯೆಹೋವ ದೇವರೇ, ಈ ಹೊತ್ತು ನನಗೆ ಅನುಕೂಲವನ್ನು ಉಂಟುಮಾಡಿ, ನನ್ನ ಯಜಮಾನನಾದ ಅಬ್ರಹಾಮನಿಗೆ ದಯೆ ತೋರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಸಫಲಪಡಿಸಿ ನನ್ನ ದಣಿಯಾದ ಅಬ್ರಹಾಮನಿಗೆ ದಯೆಯನ್ನು ತೋರಿಸಬೇಕೆಂದು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರಾ, ಈ ದಿನ ನಾನು ಬಂದ ಕಾರ್ಯವನ್ನು ಕೈಗೂಡಿಸಿ, ನನ್ನೊಡೆಯ ಅಬ್ರಹಾಮನಿಗೆ ಉಪಕಾರಮಾಡಬೇಕೆಂದು ಪ್ರಾರ್ಥಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಅನುಕೂಲಪಡಿಸಿ ನನ್ನ ದಣಿಯಾದ ಅಬ್ರಹಾಮನಿಗೆ ಉಪಕಾರಮಾಡಬೇಕೆಂದು ಬೇಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಸೇವಕನು, “ಯೆಹೋವನೇ, ನೀನು ನನ್ನ ಒಡೆಯನಾದ ಅಬ್ರಹಾಮನ ದೇವರು. ಈ ದಿನ ಅವನ ಮಗನಿಗಾಗಿ ಕನ್ಯೆಯನ್ನು ಕಂಡುಕೊಳ್ಳಲು ಸಹಾಯಮಾಡು. ನನ್ನ ಒಡೆಯನಾದ ಅಬ್ರಹಾಮನಿಗೋಸ್ಕರವಾಗಿಯೇ ಈ ಉಪಕಾರ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:12
29 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು, “ನನ್ನ ಯಜಮಾನನಾದ ಅಬ್ರಹಾಮನ ದೇವರಾದ ಯೆಹೋವ ದೇವರು ಸ್ತುತಿಹೊಂದಲಿ. ಅವರು ನನ್ನ ಯಜಮಾನನನ್ನು ಕೈಬಿಡದೆ, ತಮ್ಮ ದಯೆಯನ್ನೂ, ನಂಬಿಗಸ್ತಿಕೆಯನ್ನೂ ತೋರಿಸಿದ್ದಾರೆ. ನಾನು ಮಾರ್ಗದಲ್ಲಿರುವಾಗ ಯೆಹೋವ ದೇವರು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೇ ನಡೆಸಿದ್ದಾರೆ,” ಎಂದನು.


ಎಲೀಯನಿಂದ ಬಿದ್ದ ಹೊದಿಕೆಯನ್ನು ತೆಗೆದುಕೊಂಡು ನೀರನ್ನು ಹೊಡೆದು, “ಎಲೀಯನ ದೇವರಾದ ಯೆಹೋವ ದೇವರು ಎಲ್ಲಿ?” ಎಂದನು. ಅವನು ಹಾಗೆ ನೀರನ್ನು ಹೊಡೆದ ತರುವಾಯ, ಅದು ಬಲಗಡೆಗೂ ಎಡಗಡೆಗೂ ವಿಭಾಗವಾದದ್ದರಿಂದ, ಎಲೀಷನು ದಾಟಿಹೋದನು.


ಮತ್ತೆ ದೇವರು ಮೋಶೆಗೆ, “ ‘ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಇಸ್ರಾಯೇಲರಿಗೆ ಹೇಳಬೇಕು, “ಇದೇ ಯುಗಯುಗಕ್ಕೆ ನನ್ನ ಹೆಸರೂ, ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ಹೆಸರು.


ಇದಲ್ಲದೆ ಮೋಶೆಗೆ, “ನಾನು ನಿನ್ನ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿದ್ದೇನೆ,” ಎಂದು ಹೇಳಿದರು. ಮೋಶೆಯು ದೇವರ ಕಡೆ ದೃಷ್ಟಿ ಇಡುವುದಕ್ಕೆ ಭಯಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.


ಅದೇ ರಾತ್ರಿಯಲ್ಲಿ ಯೆಹೋವ ದೇವರು ಅವನಿಗೆ ಕಾಣಿಸಿಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ, ಭಯಪಡಬೇಡ. ಏಕೆಂದರೆ ನಾನು ನಿನ್ನ ಸಂಗಡ ಇದ್ದೇನೆ, ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ, ನಿನ್ನ ಸಂತತಿಯನ್ನು ಹೆಚ್ಚಿಸುವೆನು,” ಎಂದರು.


ತಲೆಬಾಗಿ ಯೆಹೋವ ದೇವರನ್ನು ಆರಾಧಿಸಿ, ನನ್ನ ಯಜಮಾನನ ಸಹೋದರನ ಮಗಳನ್ನು ಅವನ ಮಗನಿಗೆ ಹೆಂಡತಿಯಾಗಿ ತೆಗೆದುಕೊಳ್ಳುವುದಕ್ಕೆ ನನ್ನನ್ನು ಸರಿಯಾದ ಮಾರ್ಗದಲ್ಲಿ ನಡೆಸಿದ ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಯೆಹೋವ ದೇವರನ್ನು ಕೊಂಡಾಡಿದೆ.


“ಈ ದಿನ ನಾನು ಆ ಬಾವಿಯ ಬಳಿಗೆ ಬಂದಾಗ, ‘ನನ್ನ ಯಜಮಾನನಾದ ಅಬ್ರಹಾಮನ ದೇವರಾದ ಯೆಹೋವ ದೇವರೇ, ನೀವು ಬಯಸಿದರೆ, ದಯವಿಟ್ಟು ನಾನು ಬಂದ ಪ್ರಯಾಣಕ್ಕೆ ನೀವು ಸಫಲ ಮಾಡಿದ್ದಾದರೆ,


ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ.


‘ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಆಗಿದ್ದೇನೆ,’ ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ,” ಎಂದು ಹೇಳಿದರು.


ನಿನ್ನ ಎಲ್ಲಾ ಮಾರ್ಗಗಳಲ್ಲಿ ದೇವರಿಗೆ ಅಧೀನವಾಗಿರು. ಆಗ ದೇವರು ನಿನ್ನ ಮಾರ್ಗಗಳನ್ನು ಸರಾಗ ಮಾಡುವರು.


ಯೆಹೋವ ದೇವರು ಮನೆಯನ್ನು ಕಟ್ಟದೆ ಇದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಪ್ರಯಾಸಪಡುತ್ತಾರೆ; ಯೆಹೋವ ದೇವರು ಪಟ್ಟಣವನ್ನು ಕಾಯದೆ ಇದ್ದರೆ, ಅದನ್ನು ಕಾಯುವವರು ವ್ಯರ್ಥವಾಗಿ ಕಾಯುತ್ತಾರೆ.


ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥನೆಮಾಡಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಅಭಿವೃದ್ಧಿಯಾಗಲಿ.


ಯೆಹೋವ ದೇವರೇ ನಮ್ಮನ್ನು ರಕ್ಷಿಸಿರಿ, ಯೆಹೋವ ದೇವರೇ ನಮಗೆ ಜಯಕೊಡಿರಿ.


ನಿನ್ನ ಮಾರ್ಗವನ್ನು ಯೆಹೋವ ದೇವರಿಗೆ ಒಪ್ಪಿಸು; ಅವರಲ್ಲಿ ಭರವಸೆ ಇಡು; ಅವರು ನಿನಗೆ ಇದನ್ನು ಮಾಡುವರು:


ಅದಕ್ಕೆ ಅರಸನು ನನಗೆ, “ನಿನಗೆ ಬೇಕಾಗಿರುವುದೇನು?” ಎಂದನು. ಆಗ ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ


ದೇವರೇ, ನಿಮ್ಮ ಹೆಸರಲ್ಲಿ ಭಯಭಕ್ತಿಯಿಂದ ಹರ್ಷಿಸುವ ನಿಮ್ಮ ಸೇವಕರ ಪ್ರಾರ್ಥನೆಗೆ ಕಿವಿಗೊಡಿರಿ. ಇಂದು ನಿಮ್ಮ ಸೇವಕನಾದ ನನಗೆ ಯಶಸ್ವಿಯನ್ನು ಕೊಟ್ಟು, ಈ ಅರಸನ ದೃಷ್ಟಿಯಲ್ಲಿ ನನಗೆ ದಯೆ ದೊರಕುವಂತೆ ಮಾಡಿರಿ,” ಎಂದು ಬೇಡಿಕೊಂಡೆನು. ಆ ದಿವಸಗಳಲ್ಲಿ ನಾನು ಅರಸನಿಗೆ ಪಾನ ಸೇವಕನಾಗಿದ್ದೆನು.


ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆಯಲ್ಲಿ ಪ್ರವಾದಿಯಾದ ಎಲೀಯನು ಬಲಿಪೀಠದ ಸಮೀಪಕ್ಕೆ ಬಂದು, “ಅಬ್ರಹಾಮನಿಗೂ, ಇಸಾಕನಿಗೂ, ಇಸ್ರಾಯೇಲಿಗೂ ದೇವರಾದ ಯೆಹೋವ ದೇವರೇ, ಇಸ್ರಾಯೇಲಿನಲ್ಲಿ ನೀವೇ ದೇವರೆಂದೂ, ನಾನು ನಿಮ್ಮ ಸೇವಕನೆಂದೂ, ನಾನು ಈ ಕಾರ್ಯಗಳನ್ನೆಲ್ಲಾ ನಿಮ್ಮ ಮಾತಿನ ಹಾಗೆಯೇ ಮಾಡಿದ್ದೇನೆಂದೂ ಇಂದು ತೋರಿಸಿಕೊಡಿರಿ.


ಸರ್ವಶಕ್ತ ದೇವರು ನಿಮ್ಮ ಮತ್ತೊಬ್ಬ ಸಹೋದರನನ್ನೂ ಬೆನ್ಯಾಮೀನನನ್ನೂ ಕಳುಹಿಸಿಕೊಡುವ ಹಾಗೆ, ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ,” ಎಂದನು.


ಇದಲ್ಲದೆ ಯಾಕೋಬನು, “ನನ್ನ ತಂದೆ ಅಬ್ರಹಾಮನ ದೇವರೇ, ನನ್ನ ತಂದೆ ಇಸಾಕನ ದೇವರೇ, ನಿಮ್ಮ ದೇಶಕ್ಕೂ, ನಿನ್ನ ಬಂಧುಗಳ ಬಳಿಗೂ ಹಿಂದಿರುಗಿ ಹೋಗು. ಆಗ ನಾನು ನಿನಗೆ ಒಳ್ಳೆಯದನ್ನು ಮಾಡುವೆನು ಎಂದು ನನಗೆ ಹೇಳಿದ ಯೆಹೋವ ದೇವರೇ,


ನನ್ನ ತಂದೆ ದೇವರೂ, ಅಬ್ರಹಾಮನ ದೇವರೂ, ಇಸಾಕನ ಭಯವೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದೆ. ನನ್ನ ಬಾಧೆಯನ್ನೂ, ನನ್ನ ಕಷ್ಟವನ್ನೂ ದೇವರು ಕಂಡು, ನಿನ್ನೆ ರಾತ್ರಿ ನಿನ್ನನ್ನು ಗದರಿಸಿದ್ದಾರೆ,” ಎಂದನು.


ಇದಲ್ಲದೆ ಯೆಹೋವ ದೇವರು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರೂ, ಇಸಾಕನ ದೇವರೂ ಆದ ಯೆಹೋವ ದೇವರು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.


ಇಸಾಕನು ತನ್ನ ಮಗನಿಗೆ, “ನನ್ನ ಮಗನೇ, ಇಷ್ಟು ಬೇಗ ಅದು ನಿನಗೆ ಹೇಗೆ ಸಿಕ್ಕಿತು?” ಎಂದನು. ಅವನು, “ನಿನ್ನ ದೇವರಾದ ಯೆಹೋವ ದೇವರು ನನ್ನೆದುರಿಗೆ ಅದು ಬರುವಂತೆ ಮಾಡಿದರು,” ಎಂದನು.


ನೀನು ಅದನ್ನು ನಿನ್ನ ತಂದೆಯ ಬಳಿಗೆ ತೆಗೆದುಕೊಂಡು ಹೋಗಬೇಕು. ಅವನು ಸಾಯುವುದಕ್ಕಿಂತ ಮೊದಲು ನಿನ್ನನ್ನು ಆಶೀರ್ವದಿಸುವಂತೆ ಊಟಮಾಡಲಿ,” ಎಂದಳು.


ಇವುಗಳಾದ ಮೇಲೆ ಯೆಹೋವ ದೇವರ ವಾಕ್ಯವು ಅಬ್ರಾಮನಿಗೆ ದರ್ಶನದಲ್ಲಿ ಉಂಟಾಗಿ ಹೇಳಿದ್ದೇನೆಂದರೆ: “ಅಬ್ರಾಮನೇ, ಭಯಪಡಬೇಡ. ನಾನು ನಿನಗೆ ಗುರಾಣಿಯಾಗಿದ್ದೇನೆ. ನಾನೇ ನಿನಗೆ ಅತ್ಯಧಿಕ ಬಹುಮಾನವಾಗಿದ್ದೇನೆ.”


ಆಗ ಯೆಹೋವ ದೇವರು ತನ್ನ ಪ್ರಯಾಣನ್ನು ಸಫಲ ಮಾಡಿದರೋ ಏನೋ, ಎಂದು ತಿಳಿದುಕೊಳ್ಳುವುದಕ್ಕೆ ಆ ಮನುಷ್ಯನು ಆಕೆಯನ್ನು ಗಮನಿಸುತ್ತಾ, ಆಶ್ಚರ್ಯಪಟ್ಟು ಮೌನವಾಗಿದ್ದನು.


ನೀವು ನಿಮ್ಮ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ, ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಏಕೆಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ, ನನ್ನ ಕೈಯಲ್ಲಿ ಕೋಲು ಮಾತ್ರವೇ ಇತ್ತು, ಈಗ ನನಗೆ ಎರಡು ಗುಂಪುಗಳಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು