ಆದಿಕಾಂಡ 24:30 - ಕನ್ನಡ ಸಮಕಾಲಿಕ ಅನುವಾದ30 ಅವನು ಮೂಗುತಿಯನ್ನೂ, ತನ್ನ ಸಹೋದರಿಯ ಕೈಗಳಲ್ಲಿದ್ದ ಬಳೆಗಳನ್ನೂ ಕಂಡು, ಆ ಮನುಷ್ಯನು ತನ್ನ ಬಳಿ ಹೀಗೆ ಮಾತನಾಡಿದನೆಂದು ಹೇಳಿದ ತನ್ನ ಸಹೋದರಿ ರೆಬೆಕ್ಕಳ ಮಾತುಗಳನ್ನು ಕೇಳಿ, ಆ ಮನುಷ್ಯನ ಬಳಿಗೆ ಬಂದನು. ಅವನು ಇನ್ನೂ ಬಾವಿಯ ಬಳಿಯಲ್ಲಿ ಒಂಟೆಗಳ ಹತ್ತಿರ ನಿಂತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ತನ್ನ ತಂಗಿಯ ಬಳಿ ಇದ್ದ ಮೂಗುತಿಯನ್ನೂ ಬಳೆಗಳನ್ನೂ ನೋಡಿ, ಆ ಮನುಷ್ಯನು ನನ್ನ ಸಂಗಡ ಹೇಗೆ ಮಾತನಾಡಿದನೆಂದು ರೆಬೆಕ್ಕಳು ಹೇಳಿದ ಮಾತುಗಳನ್ನು ಕೇಳಿ, ಬುಗ್ಗೆಯ ಹತ್ತಿರ ಒಂಟೆಗಳ ಬಳಿಯಲ್ಲಿ ನಿಂತಿದ್ದ ಆ ಮನುಷ್ಯನ ಬಳಿಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಅವನು ತನ್ನ ತಂಗಿಯ ಮೇಲಿದ್ದ ಮೂಗುತಿಯನ್ನೂ ಬಳೆಗಳನ್ನೂ ನೋಡಿದನು. ಆ ಮನುಷ್ಯ ಆಕೆಗೆ ಹೇಳಿದ ಮಾತುಗಳನ್ನು ಆಕೆಯಿಂದಲೇ ಕೇಳಿ ತಿಳಿದುಕೊಂಡನು. ಬಳಿಕ ಬುಗ್ಗೆಯ ಬಳಿ ಒಂಟೆಗಳೊಂದಿಗೆ ನಿಂತಿದ್ದ ಆ ಮನುಷ್ಯನ ಬಳಿಗೆ ಓಡಿಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅವನು ತನ್ನ ತಂಗಿಯ ಮೇಲೆ ಇದ್ದ ಮೂಗುತಿಯನ್ನೂ ಬಳೆಗಳನ್ನೂ ನೋಡಿ ಆ ಮನುಷ್ಯನು ನನ್ನ ಸಂಗಡ ಹೀಗೆ ಹೀಗೆ ಮಾತಾಡಿದನೆಂದು ತಂಗಿ ಹೇಳಿದ ಮಾತನ್ನು ಕೇಳಿ ಬುಗ್ಗೆಯ ಹತ್ತಿರ ಒಂಟೆಗಳ ಬಳಿಯಲ್ಲಿ ನಿಂತಿದ್ದ ಆ ಮನುಷ್ಯನ ಬಳಿಗೆ ಓಡಿಬಂದನು. ಅಧ್ಯಾಯವನ್ನು ನೋಡಿ |