ಆದಿಕಾಂಡ 24:32 - ಕನ್ನಡ ಸಮಕಾಲಿಕ ಅನುವಾದ32 ಆಗ ಆ ಮನುಷ್ಯನು ಮನೆಗೆ ಬಂದನು. ಅವನು ಒಂಟೆಗಳನ್ನು ಬಿಚ್ಚಿ, ಅವುಗಳಿಗೆ ಹುಲ್ಲನ್ನೂ, ಮೇವನ್ನೂ ಕೊಟ್ಟನು. ಅವನ ಕಾಲುಗಳನ್ನೂ, ಅವನ ಸಂಗಡ ಇದ್ದ ಮನುಷ್ಯರ ಕಾಲುಗಳನ್ನೂ ತೊಳೆಯುವುದಕ್ಕೆ ನೀರನ್ನು ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆ ಮನುಷ್ಯನು ಮನೆಯೊಳಕ್ಕೆ ಬಂದಾಗ ಲಾಬಾನನು ಒಂಟೆಗಳ ಹೊರೆಗಳನ್ನು ಇಳಿಸಿ ಅವುಗಳಿಗೆ ಹುಲ್ಲನ್ನು, ಮೇವನ್ನು ಕೊಡಿಸಿ ಆ ಮನುಷ್ಯನ ಮತ್ತು ಅವನ ಸಂಗಡ ಇದ್ದವರ ಕಾಲುಗಳನ್ನು ತೊಳೆಯುವುದಕ್ಕೆ ನೀರನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಆ ಮನುಷ್ಯ ಮನೆಗೆ ಬಂದಾಗ ಲಾಬಾನನು ಒಂಟೆಗಳ ಹೊರೆಯನ್ನು ಇಳಿಸಿ, ಅವುಗಳಿಗೆ ಹುಲ್ಲು ಮೇವನ್ನು ಕೊಡಿಸಿದನು. ಆ ಮನುಷ್ಯನ ಮತ್ತು ಅವನ ಸಂಗಡಿಗರ ಕಾಲುಗಳನ್ನು ತೊಳೆಯುವುದಕ್ಕೆ ನೀರನ್ನು ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಆ ಮನುಷ್ಯನು ಮನೆಯೊಳಕ್ಕೆ ಬಂದಾಗ ಲಾಬಾನನು ಒಂಟೆಗಳ ಹೊರೆಗಳನ್ನು ಇಳಿಸಿ ಅವುಗಳಿಗೆ ಹುಲ್ಲನ್ನೂ ಮೇವನ್ನೂ ಕೊಡಿಸಿ ಆ ಮನುಷ್ಯನ ಮತ್ತು ಅವನ ಸಂಗಡಿದ್ದವರ ಕಾಲುಗಳನ್ನು ತೊಳೆಯುವದಕ್ಕೆ ನೀರನ್ನು ತರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಆದ್ದರಿಂದ ಅಬ್ರಹಾಮನ ಸೇವಕನು ಲಾಬಾನನ ಮನೆಗೆ ಹೋದನು. ಒಂಟೆಗಳ ಮೇಲಿದ್ದ ಹೊರೆಗಳನ್ನು ಇಳಿಸಲು ಲಾಬಾನನು ಸಹಾಯಮಾಡಿದನು; ಒಂಟೆಗಳಿಗೆ ಸ್ಥಳಮಾಡಿಕೊಟ್ಟು ಮೇವನ್ನು ಕೊಡಿಸಿದನು; ಆಮೇಲೆ ಆ ಸೇವಕನಿಗೆ ಮತ್ತು ಅವನ ಸಂಗಡ ಇದ್ದವರಿಗೆ, ಕಾಲು ತೊಳೆದುಕೊಳ್ಳಲು ನೀರು ಕೊಟ್ಟನು. ಅಧ್ಯಾಯವನ್ನು ನೋಡಿ |