Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:33 - ಕನ್ನಡ ಸಮಕಾಲಿಕ ಅನುವಾದ

33 ಅವನಿಗೆ ಊಟಕ್ಕೆ ಬಡಿಸಿದಾಗ, ಅವನು, “ನಾನು ಬಂದ ಕೆಲಸದ ವಿಷಯ ಹೇಳದೆ ಊಟಮಾಡುವುದಿಲ್ಲ,” ಎಂದನು. ಅದಕ್ಕೆ ಲಾಬಾನನು, “ಹೇಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆದರೆ ಅವನಿಗೆ ಊಟಕ್ಕೆ ಬಡಿಸಿದಾಗ, ಅವನು, “ನಾನು ಬಂದ ಕೆಲಸವನ್ನು ಹೇಳದೆ ಊಟ ಮಾಡುವುದಿಲ್ಲ” ಅನ್ನಲು ಲಾಬಾನನು, “ಹೇಳು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅನಂತರ ಊಟ ಬಡಿಸಲಾಯಿತು. ಆದರೆ ಆ ಮನುಷ್ಯ, “ನಾನು ಬಂದ ಕೆಲಸವನ್ನು ಹೇಳದೆ ಊಟ ಮಾಡುವುದಿಲ್ಲ,” ಎಂದುಬಿಟ್ಟನು. ಆಗ ಲಾಬಾನನು, “ಅದೇನು ಹೇಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆದರೆ ಅವನಿಗೆ ಊಟಕ್ಕೆ ಬಡಿಸಿದಾಗ ಅವನು - ನಾನು ಬಂದ ಕೆಲಸವನ್ನು ಹೇಳದೆ ಊಟ ಮಾಡುವದಿಲ್ಲ ಅನ್ನಲು ಲಾಬಾನನು - ಹೇಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ನಂತರ ಲಾಬಾನನು ಅವನಿಗೆ ಊಟವನ್ನು ಕೊಟ್ಟನು. ಆದರೆ ಆ ಸೇವಕನು ಊಟಮಾಡದೆ ಅವರಿಗೆ, “ನಾನು ಬಂದ ಉದ್ದೇಶವನ್ನು ತಿಳಿಸದೆ ಊಟಮಾಡುವುದಿಲ್ಲ” ಎಂದು ಹೇಳಿದನು. ಅದಕ್ಕೆ ಲಾಬಾನನು, “ಸರಿ, ಹೇಳು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:33
11 ತಿಳಿವುಗಳ ಹೋಲಿಕೆ  

ವಿಶ್ವಾಸಿಗಳಾದ ಯಜಮಾನರಿರುವವರು ಆ ಯಜಮಾನರು ಸಹೋದರನಾಗಿರುವುದರಿಂದ ಅವರನ್ನು ತಾತ್ಸಾರ ಮಾಡದಿರಲಿ. ಏಕೆಂದರೆ ತಮ್ಮ ಸೇವೆಯಿಂದ ಲಾಭ ಹೊಂದುವವರು ವಿಶ್ವಾಸಿಗಳು ಮತ್ತು ತಮಗೆ ಪ್ರಿಯರಾಗಿದ್ದಾರೆ ಎಂದು ತಿಳಿದು ಅವರಿಗೆ ಉತ್ತಮ ಸೇವೆಮಾಡಲಿ. ಇವುಗಳನ್ನು ಅವರಿಗೆ ಬೋಧಿಸಿ ಎಚ್ಚರಿಸು.


ಆದರೆ ನಾನು ಕೊಡುವ ನೀರನ್ನು ಕುಡಿಯುವವರಿಗೆ ಎಂದೆಂದಿಗೂ ದಾಹವಾಗದು. ನಾನು ಅವರಿಗೆ ಕೊಡುವ ನೀರು ಅವರಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬುಗ್ಗೆಯಾಗಿರುವುದು,” ಎಂದರು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿರುವ ಸಮಾಧಿಯಲ್ಲಿ, ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ಸೇವೆ ಸಲ್ಲಿಸುವನು.


ದೇವರ ತುಟಿಗಳ ಆಜ್ಞೆಯಿಂದ ನಾನು ಹಿಂಜರಿಯಲಿಲ್ಲ; ನನ್ನ ದೈನಂದಿನ ಆಹಾರಕ್ಕಿಂತ ದೇವರ ಬಾಯಿಯ ಮಾತುಗಳನ್ನು ನನ್ನೆದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.


ಆಗ ಆ ಮನುಷ್ಯನು ಮನೆಗೆ ಬಂದನು. ಅವನು ಒಂಟೆಗಳನ್ನು ಬಿಚ್ಚಿ, ಅವುಗಳಿಗೆ ಹುಲ್ಲನ್ನೂ, ಮೇವನ್ನೂ ಕೊಟ್ಟನು. ಅವನ ಕಾಲುಗಳನ್ನೂ, ಅವನ ಸಂಗಡ ಇದ್ದ ಮನುಷ್ಯರ ಕಾಲುಗಳನ್ನೂ ತೊಳೆಯುವುದಕ್ಕೆ ನೀರನ್ನು ಕೊಟ್ಟನು.


ಅವನು, “ನಾನು ಅಬ್ರಹಾಮನ ಸೇವಕನು.


ಅವನನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ, ಕತ್ತೆಗಳಿಗೆ ಮೇವು ಹಾಕಿದನು. ಅವರು ತಮ್ಮ ಕೈಕಾಲುಗಳನ್ನು ತೊಳೆದು ತಿಂದು ಕುಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು