Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:38 - ಕನ್ನಡ ಸಮಕಾಲಿಕ ಅನುವಾದ

38 ಆದರೆ ನೀನು ನನ್ನ ತಂದೆಯ ಮನೆಗೂ, ನನ್ನ ಬಂಧುಗಳ ಬಳಿಗೂ ಹೋಗಿ, ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳಬೇಕೆಂದು,’ ನನ್ನಿಂದ ಪ್ರಮಾಣ ಮಾಡಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಮಗನಿಗೆ ಹೆಣ್ಣನ್ನು ತೆಗೆದುಕೊಳ್ಳದೆ, ನನ್ನ ತಂದೆಯ ಮನೆಗೂ ನನ್ನ ಬಂಧುಗಳ ಬಳಿಗೂ ಹೋಗಿ ಅವರಲ್ಲೇ ಹೆಣ್ಣನ್ನು ತೆಗೆದುಕೊಳ್ಳಬೇಕೆಂದು ಹೇಳಿ ನನ್ನಿಂದ ಪ್ರಮಾಣ ಮಾಡಿಸಿದನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ನನ್ನ ತಂದೆಯ ಮನೆಗೂ ನನ್ನ ಬಂಧುಬಳಗದವರ ಬಳಿಗೂ ಹೋಗಿ ಅವರಿಂದಲೇ ಹೆಣ್ಣನ್ನು ತರಬೇಕು’ ಎಂದು ಹೇಳಿ ನನ್ನಿಂದ ಪ್ರಮಾಣ ಮಾಡಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ನನ್ನ ಮಗನಿಗೆ ಹೆಣ್ಣನ್ನು ತೆಗೆದುಕೊಳ್ಳದೆ ನನ್ನ ತಂದೆಯ ಮನೆಗೂ ನನ್ನ ಬಂಧುಗಳ ಬಳಿಗೂ ಹೋಗಿ ಅವರಲ್ಲೇ ಹೆಣ್ಣನ್ನು ತೆಗೆದುಕೊಳ್ಳಬೇಕೆಂದು ಹೇಳಿ ನನ್ನಿಂದ ಪ್ರಮಾಣ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಆದ್ದರಿಂದ ನೀನು ನನ್ನ ಸ್ವದೇಶಕ್ಕೆ ಹೋಗಿ ನನ್ನ ಸ್ವಜನರಿಂದಲೇ ನನ್ನ ಮಗನಿಗೆ ಕನ್ಯೆಯನ್ನು ತೆಗೆದುಕೊಳ್ಳಬೇಕು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:38
5 ತಿಳಿವುಗಳ ಹೋಲಿಕೆ  

ನನ್ನ ದೇಶಕ್ಕೂ, ಬಂಧುಗಳ ಬಳಿಗೂ ಹೋಗಿ ನನ್ನ ಮಗ ಇಸಾಕನಿಗೆ ಹೆಂಡತಿಯನ್ನು ತೆಗೆದುಕೊಂಡು ಬರುತ್ತೇನೆಂದು ಪರಲೋಕದ ಮತ್ತು ಭೂಲೋಕದ ದೇವರಾಗಿರುವ ಯೆಹೋವ ದೇವರ ಮೇಲೆ ನೀನು ನನಗೆ ಪ್ರಮಾಣಮಾಡಬೇಕು,” ಎಂದನು.


ಲಾಬಾನನು ತನ್ನ ಕುರಿಗಳ ಉಣ್ಣೆ ಕತ್ತರಿಸುವುದಕ್ಕೆ ಹೋಗಿದ್ದನು. ಆಗ ರಾಹೇಲಳು ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.


ಯೆಹೋವ ದೇವರು ಅಬ್ರಾಮನಿಗೆ ಹೀಗೆ ಹೇಳಿದರು, “ನೀನು ನಿನ್ನ ಸ್ವದೇಶದಿಂದಲೂ ಬಂಧುಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರಬಂದು, ನಾನು ನಿನಗೆ ತೋರಿಸುವ ನಾಡಿಗೆ ಹೋಗು.


ನನ್ನ ಯಜಮಾನನು, ‘ನಾನು ಯಾರ ದೇಶದಲ್ಲಿ ವಾಸಮಾಡುತ್ತೇನೋ, ಆ ಕಾನಾನ್ಯರ ಪುತ್ರಿಯರಲ್ಲಿ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳಬೇಡ.


“ನಾನು ನನ್ನ ಯಜಮಾನನಿಗೆ, ‘ಒಂದು ವೇಳೆ ಆ ಸ್ತ್ರೀ ನನ್ನನ್ನು ಹಿಂಬಾಲಿಸದೆ ಹೋದಾಳು,’ ಹೇಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು