ಆದಿಕಾಂಡ 24:4 - ಕನ್ನಡ ಸಮಕಾಲಿಕ ಅನುವಾದ4 ನನ್ನ ದೇಶಕ್ಕೂ, ಬಂಧುಗಳ ಬಳಿಗೂ ಹೋಗಿ ನನ್ನ ಮಗ ಇಸಾಕನಿಗೆ ಹೆಂಡತಿಯನ್ನು ತೆಗೆದುಕೊಂಡು ಬರುತ್ತೇನೆಂದು ಪರಲೋಕದ ಮತ್ತು ಭೂಲೋಕದ ದೇವರಾಗಿರುವ ಯೆಹೋವ ದೇವರ ಮೇಲೆ ನೀನು ನನಗೆ ಪ್ರಮಾಣಮಾಡಬೇಕು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನನ್ನ ದೇಶದ, ನನ್ನ ಸಂಬಂಧಿಕರೊಳಗಿಂದ ಇಸಾಕನಿಗೆ ಹೆಣ್ಣನ್ನು ತಂದು ಮದುವೆ ಮಾಡುತ್ತೇನೆ ಎಂದು ಪರಲೋಕದ ಮತ್ತು ಭೂಲೋಕದ ತಂದೆಯಾಗಿರುವ ಯೆಹೋವನ ಮೇಲೆ ಪ್ರಮಾಣ ಮಾಡಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನನ್ನ ಸ್ವಂತ ನಾಡಿಗೂ ನನ್ನ ಬಂಧುಬಳಗದವರ ಬಳಿಗೂ ಹೋಗಿ ಅವರಿಂದಲೇ ಅವನಿಗೆ ಹೆಣ್ಣು ತರಬೇಕು. ಹಾಗೆ ಮಾಡುತ್ತೇನೆಂದು ನೀನು ನನ್ನ ತೊಡೆಯ ಕೆಳಗೆ ಕೈಯಿಟ್ಟು ಇಹಪರಲೋಕಗಳ ಸರ್ವೇಶ್ವರನಾದ ದೇವರ ಮೇಲೆ ಪ್ರಮಾಣ ಮಾಡಬೇಕು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನನ್ನ ಬಂಧುಗಳ ಬಳಿಗೂ ಹೋಗಿ ಅವರಲ್ಲೇ ನನ್ನ ಮಗನಾದ ಇಸಾಕನಿಗೆ ಹೆಣ್ಣನ್ನು ತೆಗೆದುಕೊಳ್ಳಬೇಕು. ಹಾಗೆ ತೆಗೆದುಕೊಳ್ಳುತ್ತೇನೆಂಬದಕ್ಕೆ ನೀನು ನನ್ನ ತೊಡೆಯ ಕೆಳಗೆ ಕೈಯಿಟ್ಟು ಭೂಲೋಕಪರಲೋಕಗಳ ದೇವರಾಗಿರುವ ಯೆಹೋವನ ಮೇಲೆ ಪ್ರಮಾಣಮಾಡಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನನ್ನ ಸ್ವದೇಶದಲ್ಲಿರುವ ನನ್ನ ಸ್ವಜನರ ಬಳಿಗೆ ಹೋಗಿ ನನ್ನ ಮಗನಾದ ಇಸಾಕನಿಗೆ ಕನ್ನಿಕೆಯನ್ನು ಹುಡುಕಿ ಕರೆದುಕೊಂಡು ಬರುವುದಾಗಿಯೂ ಭೂಪರಲೋಕಗಳ ದೇವರಾದ ಯೆಹೋವನ ಮೇಲೆ ಪ್ರಮಾಣಮಾಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |