Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:40 - ಕನ್ನಡ ಸಮಕಾಲಿಕ ಅನುವಾದ

40 “ಅವನು ನನಗೆ, ‘ನಾನು ಯಾರ ಮುಂದೆ ನಂಬಿಗಸ್ತಿಕೆಯಿಂದ ನಡೆದುಕೊಳ್ಳುತ್ತೇನೋ, ಆ ಯೆಹೋವ ದೇವರು ತಮ್ಮ ದೂತನನ್ನು ನಿನ್ನ ಸಂಗಡ ಕಳುಹಿಸಿ, ನೀನು ನನ್ನ ಬಂಧುಗಳಿಂದಲೂ ನನ್ನ ತಂದೆಯ ಮನೆಯೊಳಗಿಂದಲೂ ನನ್ನ ಮಗನಿಗೋಸ್ಕರ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ ನಿನ್ನ ಪ್ರಯತ್ನವನ್ನು ಸಫಲಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಅವನು ನನಗೆ, “ನಾನು ಆರಾಧನೆ ಮಾಡುತ್ತಾ ಬಂದಿರುವ ನನ್ನ ದೇವರಾದ ಆ ಯೆಹೋವನು ತನ್ನ ದೂತನನ್ನು ನಿನ್ನೊಂದಿಗೆ ಕಳುಹಿಸಿ ನೀನು ನನ್ನ ತಂದೆಯ ಮನೆತನಕ್ಕೆ ಸೇರಿರುವ ಬಂಧುಗಳಲ್ಲಿ ನನ್ನ ಮಗನಿಗೆ ಹೆಣ್ಣು ತೆಗೆದುಕೊಳ್ಳುವಂತೆ ಅನುಕೂಲ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಅದಕ್ಕೆ ಅವರು, ‘ಯಾವ ಸರ್ವೇಶ್ವರ ಸ್ವಾಮಿಗೆ ನಾನು ವಿಧೇಯನಾಗಿ ನಡೆದುಕೊಂಡೆನೋ ಅವರು ತಮ್ಮ ದೂತನನ್ನು ನಿನ್ನೊಂದಿಗೆ ಕಳುಹಿಸುವರು. ನನ್ನ ತಂದೆಯ ಮನೆತನಕ್ಕೆ ಸೇರಿದ ಬಂಧುಬಳಗದವರಿಂದಲೇ ನನ್ನ ಮಗನಿಗೆ ಹೆಣ್ಣು ತರಲು ನಿನಗೆ ಅನುಕೂಲ ಮಾಡಿಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಅವನು ನನಗೆ - ನಾನು ಯೆಹೋವನಿಗೆ ನಡೆದುಕೊಳ್ಳುತ್ತೇನಲ್ಲಾ; ಆತನು ತನ್ನ ದೂತನನ್ನು ನಿನ್ನೊಂದಿಗೆ ಕಳುಹಿಸಿ ನೀನು ನನ್ನ ತಂದೆಯ ಮನೆತನಕ್ಕೆ ಸೇರಿರುವ ಬಂಧುಗಳಲ್ಲಿ ನನ್ನ ಮಗನಿಗೆ ಹೆಣ್ಣು ತೆಗೆದುಕೊಳ್ಳುವಂತೆ ಅನುಕೂಲಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆದರೆ ನನ್ನ ಒಡೆಯನು ನನಗೆ, ‘ನಾನು ಯೆಹೋವನ ಸೇವೆ ಮಾಡುತ್ತಿದ್ದೇನೆ. ಆದ್ದರಿಂದ ಯೆಹೋವನು ತನ್ನ ದೂತನನ್ನು ನಿನ್ನೊಂದಿಗೆ ಕಳುಹಿಸಿ ನಿನಗೆ ಸಹಾಯ ಮಾಡುವನು. ಅಲ್ಲಿರುವ ನನ್ನ ತಂದೆಯ ಕುಟುಂಬದವರಲ್ಲಿ ನೀನು ನನ್ನ ಮಗನಿಗಾಗಿ ಒಬ್ಬ ಕನ್ಯೆಯನ್ನು ಕಂಡುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:40
20 ತಿಳಿವುಗಳ ಹೋಲಿಕೆ  

“ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವುದಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ತರುವುದಕ್ಕೋಸ್ಕರವೂ ನಾನು ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.


ನಾನು ಯೆಹೋವ ದೇವರನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ. ಅವರು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲೆನು.


ನಾನು ನಿನ್ನ ಮುಂದೆ ದೂತನನ್ನು ಕಳುಹಿಸಿ ಕಾನಾನ್ಯರನ್ನೂ, ಅಮೋರಿಯರನ್ನೂ, ಹಿತ್ತಿಯರನ್ನೂ, ಪೆರಿಜೀಯರನ್ನೂ, ಹಿವ್ವಿಯರನ್ನೂ, ಯೆಬೂಸಿಯರನ್ನೂ ಹೊರದೂಡುವೆನು.


ಅಬ್ರಾಮನು ತೊಂಬತ್ತೊಂಬತ್ತು ವರ್ಷದವನಾದಾಗ, ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನೇ ಸರ್ವಶಕ್ತ ದೇವರು. ನೀನು ನನ್ನ ಸನ್ನಿಧಿಯಲ್ಲಿಯೇ ನಡೆಯುತ್ತಾ ದೋಷವಿಲ್ಲದವನಾಗಿರು.


ದೇವರೊಂದಿಗೆ ನಂಬಿಗಸ್ತನಾಗಿ ನಡೆಯುತ್ತಿದ್ದ ಹನೋಕನನ್ನು ದೇವರು ತೆಗೆದುಕೊಂಡು ಹೋದದ್ದರಿಂದ ಅವನು ಕಾಣಲಿಲ್ಲ.


“ಯೇಸುವೆಂಬ ನಾನು ನಮ್ಮ ಸಭೆಗಳಲ್ಲಿ ಈ ಸಂಗತಿಗಳ ವಿಷಯವಾಗಿ ನಿಮಗೆ ಸಾಕ್ಷಿ ನೀಡುವಂತೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶದ ಕುಡಿ, ಅವನ ಸಂತತಿಯೂ ಉದಯದ ಪ್ರಕಾಶಮಾನ ತಾರೆಯೂ ಆಗಿದ್ದೇನೆ!” ಎಂದರು.


ಈ ದೇವದೂತರೆಲ್ಲರೂ ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲಾದ ಸೇವೆಯ ಆತ್ಮಗಳು ಅಲ್ಲವೇ?


ನೆಬೂಕದ್ನೆಚ್ಚರನು ಮಾತನಾಡಿ, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ. ಅವರು ತಮ್ಮ ದೂತನನ್ನು ಕಳುಹಿಸಿ, ತಮ್ಮ ಸೇವಕರನ್ನು ರಕ್ಷಿಸಿದ್ದಾರೆ. ಅವರು ದೇವರಲ್ಲಿ ನಂಬಿಕೆ ಇಟ್ಟರು. ಅರಸನ ಆಜ್ಞೆಯನ್ನು ಮೀರಿದರು. ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ, ಆರಾಧಿಸದೆ ಇರುವ ಹಾಗೆ ತಮ್ಮ ಪ್ರಾಣಗಳನ್ನು ಕೊಡಲೂ ಸಿದ್ಧರಾದರು.


ಏಕೆಂದರೆ ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವುದಕ್ಕೆ ದೇವರು ತಮ್ಮ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವರು.


ಅಂಥವರು ನೀರಿನ ಕಾಲುವೆಗಳ ಬಳಿಯಲ್ಲಿ ನೆಟ್ಟಿರುವ, ಮರದ ಹಾಗಿರುವರು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದೆ, ಅದರ ಎಲೆ ಉದುರುವುದೇ ಇಲ್ಲ. ಅದರಂತೆ ಅವರು ಮಾಡುವ ಕಾರ್ಯವೆಲ್ಲವೂ ಸಫಲವಾಗುವುದು.


“ಯೆಹೋವ ದೇವರೇ, ನಾನು ಸತ್ಯದಿಂದಲೂ, ಪೂರ್ಣಹೃದಯದಿಂದಲೂ ನಿಮ್ಮ ಮುಂದೆ ನಡೆದು, ನಿಮ್ಮ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ,” ಎಂದು ಬೇಡಿಕೊಂಡನು. ಹೀಗೆ ಹಿಜ್ಕೀಯನು ವ್ಯಥೆಪಟ್ಟು ಅತ್ತನು.


ಹೀಗೆ ಪ್ರಾರ್ಥಿಸಿದನು: “ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ಮೇಲಿರುವ ಆಕಾಶದಲ್ಲಾದರೂ, ಕೆಳಗಿರುವ ಭೂಮಿಯಲ್ಲಾದರೂ ನಿಮ್ಮ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣ ಹೃದಯದಿಂದ ನಿಮಗೆ ನಡೆದುಕೊಳ್ಳುವಂಥ ಸೇವಕರ ಬಗ್ಗೆ ನೀವು ನಿಮ್ಮ ಒಡಂಬಡಿಕೆಯನ್ನು ನೆರವೇರಿಸಿ ಕೃಪೆಯನ್ನು ತೋರಿಸುವವರೇ,


ಆಗ ಅವನು ಯೋಸೇಫನನ್ನು ಹೀಗೆ ಆಶೀರ್ವದಿಸಿದನು, “ನನ್ನ ತಂದೆ ಅಬ್ರಹಾಮನೂ ಇಸಾಕನೂ ಯಾವ ದೇವರ ಮುಂದೆ ನಡೆದುಕೊಂಡರೋ, ಆ ದೇವರೇ ನಾನು ಹುಟ್ಟಿದಂದಿನಿಂದ ಇಂದಿನವರೆಗೆ ನನಗೆ ಕುರುಬ ಆಗಿದ್ದ ದೇವರು.


ನನ್ನ ತಂದೆಯ ಮನೆಯಿಂದಲೂ ಬಂಧುಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು, ನನ್ನ ಸಂಗಡ ಮಾತನಾಡಿ, ‘ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು,’ ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಯೆಹೋವ ದೇವರು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ, ತಮ್ಮ ದೂತನನ್ನು ನಿನ್ನ ಮುಂದೆ ಕಳುಹಿಸುವರು.


ಇದು ನೋಹನ ಮತ್ತು ಅವನ ವಂಶದವರ ಚರಿತ್ರೆ: ನೋಹನು ನೀತಿವಂತನೂ ತನ್ನ ಕಾಲದವರಲ್ಲಿ ನಿರ್ದೋಷಿಯೂ ಆಗಿದ್ದನು. ಅವನು ದೇವರೊಂದಿಗೆ ವಿಶ್ವಾಸದಿಂದ ನಡೆಯುತ್ತಿದ್ದನು.


ಮೆತೂಷೆಲಹನು ಹುಟ್ಟಿದ ತರುವಾಯ, ಹನೋಕನು ಮುನ್ನೂರು ವರ್ಷ ದೇವರೊಂದಿಗೆ ನಡೆದನು. ಅವನಿಂದ ಗಂಡು, ಹೆಣ್ಣುಮಕ್ಕಳು ಹುಟ್ಟಿದರು.


ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿ ಕಂಡವನು. ನಾನು ಕೇಳಿ ಕಂಡಾಗ ಈ ಸಂಗತಿಗಳನ್ನು ನನಗೆ ತೋರಿಸಿದ ದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.


ನಿನ್ನ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಅನುಸರಿಸಿ ಅವರ ಮಾರ್ಗದಲ್ಲೇ ನಡೆದುಕೋ; ಮೋಶೆಯ ನಿಯಮದಲ್ಲಿ ಬರೆದಿರುವ ಅವರ ಆಜ್ಞಾನಿಯಮಗಳಿಗೂ, ವಿಧಿನಿರ್ಣಯಗಳಿಗೂ ವಿಧೇಯನಾಗಿರು. ಹೀಗೆ ಮಾಡುವುದಾದರೆ ನೀನು ಏನು ಮಾಡಿದರೂ, ಎಲ್ಲಿ ಸಂಚರಿಸಿದರೂ ಎಲ್ಲಾದರಲ್ಲಿಯೂ ಯಶಸ್ವಿಯಾಗುವೆ.


ಆಗ ಅವನು ಅವರಿಗೆ, “ನನ್ನನ್ನು ತಡೆಯಬೇಡಿರಿ, ಯೆಹೋವ ದೇವರು ನನ್ನ ಮಾರ್ಗವನ್ನು ಸಫಲ ಮಾಡಿದ್ದಾರಲ್ಲಾ. ನನ್ನ ಯಜಮಾನನ ಬಳಿಗೆ ಹೋಗುವಂತೆ ನನ್ನನ್ನು ಕಳುಹಿಸಿರಿ,” ಎಂದನು.


ಅದಕ್ಕೆ ಸೊಲೊಮೋನನು, “ನನ್ನ ತಂದೆಯಾಗಿರುವ ನಿಮ್ಮ ಸೇವಕನಾದ ದಾವೀದನು ನಿಮ್ಮ ಮುಂದೆ ನೀತಿಯಿಂದಲೂ, ಯಥಾರ್ಥವಾದ ಹೃದಯವುಳ್ಳವನಾಗಿಯೂ ನಡೆದದ್ದರಿಂದ, ನೀವು ಅವನಿಗೆ ಮಹಾಕರುಣೆಯನ್ನು ತೋರಿಸಿದ್ದೀರಿ. ಈ ಮಹಾಕರುಣೆಯನ್ನು ಮುಂದುವರೆಸುತ್ತಾ ಈ ದಿನ ಅವನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಮಗನನ್ನು ಕೊಟ್ಟಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು