Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:5 - ಕನ್ನಡ ಸಮಕಾಲಿಕ ಅನುವಾದ

5 ಆ ಸೇವಕನು ಅವನಿಗೆ, “ಒಂದು ವೇಳೆ ನನ್ನನ್ನು ಹಿಂಬಾಲಿಸಿ, ಈ ದೇಶಕ್ಕೆ ಬರಲು ಆ ಸ್ತ್ರೀಗೆ ಮನಸ್ಸಿಲ್ಲದೆ ಹೋದರೆ, ನೀನು ಬಿಟ್ಟುಬಂದ ದೇಶಕ್ಕೆ ನಿನ್ನ ಮಗನನ್ನು ತಿರುಗಿ ಕರೆದುಕೊಂಡು ಹೋಗಬೇಕೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದಕ್ಕೆ ಆ ಸೇವಕನು, “ಒಂದು ವೇಳೆ ನನ್ನೊಡನೆ ಈ ದೇಶಕ್ಕೆ ಬರುವುದಕ್ಕೆ ಆ ಸ್ತ್ರೀಗೆ ಮನಸ್ಸಿಲ್ಲದೆ ಹೋದರೆ, ನೀನು ಬಿಟ್ಟು ಬಂದ ಆ ದೇಶಕ್ಕೆ ನಾನು ನಿನ್ನ ಮಗನನ್ನು ತಿರುಗಿ ಕರೆದುಕೊಂಡು ಹೋಗಬೇಕೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅದಕ್ಕೆ ಆ ಸೇವಕ, “ಒಂದು ವೇಳೆ ಆ ಕನ್ಯೆಗೆ ಈ ನಾಡಿಗೆ ನನ್ನೊಡನೆ ಬರಲು ಇಷ್ಟವಿಲ್ಲದೆ ಹೋದೀತು. ಆಗ, ನೀವು ಬಿಟ್ಟುಬಂದ ನಾಡಿಗೆ ನಿಮ್ಮ ಮಗನನ್ನು ಮರಳಿ ಕರೆದುಕೊಂಡು ಹೋಗಬಹುದೆ?” ಎಂದು ವಿಚಾರಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅದಕ್ಕೆ ಆ ಸೇವಕನು - ಒಂದು ವೇಳೆ ನನ್ನ ಹಿಂದೆ ಈ ದೇಶಕ್ಕೆ ಬರುವದಕ್ಕೆ ಆ ಕನ್ಯೆಗೆ ಇಷ್ಟವಿಲ್ಲದೆ ಹೋದೀತು; ನೀನು ಬಿಟ್ಟುಬಂದ ಆ ದೇಶಕ್ಕೆ ನಾನು ನಿನ್ನ ಮಗನನ್ನು ತಿರಿಗಿ ಕರಕೊಂಡು ಹೋಗಬೇಕನ್ನುತ್ತೀಯೋ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸೇವಕನು ಅವನಿಗೆ, “ಆ ಕನ್ಯೆಯು ನನ್ನೊಡನೆ ಈ ದೇಶಕ್ಕೆ ಬರಲು ಒಪ್ಪದಿದ್ದರೆ, ನಾನು ನಿನ್ನ ಮಗನನ್ನು ನಿನ್ನ ಸ್ವದೇಶಕ್ಕೆ ಕರೆದುಕೊಂಡು ಹೋಗಬೇಕೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:5
8 ತಿಳಿವುಗಳ ಹೋಲಿಕೆ  

ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿಯಿಂದಲೂ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡುವೆ. ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯ ಬಯಸುವರು. ನನ್ನಲ್ಲಿಯೇ ಹೆಮ್ಮೆಪಡುವರು.”


ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಆದರೆ ಮೂರ್ಖನು ತನ್ನ ಮೂರ್ಖತ್ವವನ್ನು ಹೊರಗೆಡವುತ್ತಾನೆ.


ನಿನ್ನ ದೇವರಾದ ಯೆಹೋವ ದೇವರ ಹೆಸರನ್ನು ದುರುಪಯೋಗಮಾಡಬಾರದು. ಏಕೆಂದರೆ ಯೆಹೋವ ದೇವರು ತಮ್ಮ ಹೆಸರನ್ನು ದುರುಪಯೋಗಮಾಡುವವರನ್ನು ಶಿಕ್ಷಿಸದೆ ಬಿಡುವುದಿಲ್ಲ.


ಅವರನ್ನು ಕಳುಹಿಸುವುದಕ್ಕೆ ನಿರಾಕರಿಸಿ ಇನ್ನೂ ತಡೆದರೆ,


ಅವರು ರೆಬೆಕ್ಕಳನ್ನು ಕರೆದು ಆಕೆಗೆ, “ಈ ಮನುಷ್ಯನ ಸಂಗಡ ಹೋಗುತ್ತೀಯಾ?” ಎಂದು ಕೇಳಿದರು. ಅದಕ್ಕೆ ಆಕೆಯು, “ನಾನು ಹೋಗುತ್ತೇನೆ,” ಎಂದಳು.


ನನ್ನ ದೇಶಕ್ಕೂ, ಬಂಧುಗಳ ಬಳಿಗೂ ಹೋಗಿ ನನ್ನ ಮಗ ಇಸಾಕನಿಗೆ ಹೆಂಡತಿಯನ್ನು ತೆಗೆದುಕೊಂಡು ಬರುತ್ತೇನೆಂದು ಪರಲೋಕದ ಮತ್ತು ಭೂಲೋಕದ ದೇವರಾಗಿರುವ ಯೆಹೋವ ದೇವರ ಮೇಲೆ ನೀನು ನನಗೆ ಪ್ರಮಾಣಮಾಡಬೇಕು,” ಎಂದನು.


ಅಬ್ರಹಾಮನು ಅವನಿಗೆ, “ನನ್ನ ಮಗನನ್ನು ತಿರುಗಿ ಅಲ್ಲಿಗೆ ಕರೆದುಕೊಂಡು ಹೋಗಬಾರದು,


“ನಾನು ನನ್ನ ಯಜಮಾನನಿಗೆ, ‘ಒಂದು ವೇಳೆ ಆ ಸ್ತ್ರೀ ನನ್ನನ್ನು ಹಿಂಬಾಲಿಸದೆ ಹೋದಾಳು,’ ಹೇಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು